AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ಹುಟ್ಟುಹಬ್ಬದಂದೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕೋಲ್ಕತ್ತಾದಲ್ಲಿ 20 ವರ್ಷದ ಯುವತಿ ಮೇಲೆ ಆಕೆಯ ಹುಟ್ಟುಹಬ್ಬದಂದೇ ಅತ್ಯಾಚಾರ ನಡೆದಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಅಪರಾಧದ ನಂತರ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ.

ಕೋಲ್ಕತ್ತಾ: ಹುಟ್ಟುಹಬ್ಬದಂದೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಆರೋಪಿಗಳುImage Credit source: NDTV
ನಯನಾ ರಾಜೀವ್
|

Updated on: Sep 08, 2025 | 8:05 AM

Share

ಕೋಲ್ಕತ್ತಾ, ಸೆಪ್ಟೆಂಬರ್ 08: ಹುಟ್ಟುಹಬ್ಬವು ಎಂದೂ ಮರೆಯಲಾಗದ ಸಂತಸವನ್ನು ತರುವ ಬದಲು, ಎಂದೂ ಅಳಿಸಲಾಗದ ಕಪ್ಪುಚಿಕ್ಕೆಯನ್ನಿಟ್ಟುಬಿಟ್ಟಿದೆ.  ಹುಟ್ಟುಹಬ್ಬದಂದೇ 20 ವರ್ಷದ ಯುವತಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಅಪರಾಧದ ನಂತರ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಯುವತಿಗೆ ಚಂದನ್​​ ಜತೆ ಸ್ನೇಹವಿತ್ತು. ಹುಟ್ಟು ಹಬ್ಬದ ಪಾರ್ಟಿ ಮಾಡುವ ನೆಪದಲ್ಲಿ ಚಂದನ್ ದೀಪ್ ಮನೆಗೆ ಆಕೆಯನ್ನು ಕರೆದೊಯ್ದಿದ್ದ. ಅಲ್ಲಿ ಅವರು ಊಟ ಮಾಡಿದ್ದರು.

ಆಕೆ ಮನೆಗೆ ಹೋಗುತ್ತೇನೆ ಎಂದು ಹೇಳಿದಾಗ ಆಕೆಯನ್ನು ಆರೋಪಿಗಳು ತಡೆದಿದ್ದಾರೆ. ಬಾಗಿಲನ್ನು ಲಾಕ್ ಮಾಡಿ ಇಬ್ಬರೂ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮರುದಿನ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂತ್ರಸ್ತೆ ಅವರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ.ಅವರು ಘಟನೆಯ ಬಗ್ಗೆ ತಮ್ಮ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು, ಅದರ ನಂತರ ಶನಿವಾರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್ಐಆರ್ದಾಖಲಿಸಲಾಗಿದೆ.

ಯುವತಿ ತನ್ನ ದೂರಿನಲ್ಲಿ ಚಂದನ್ ಜತೆ ಕಳೆದ ಹಲವು ತಿಂಗಳಿನಿಂದ ತನಗೆ ಪರಿಚಯವಿತ್ತು.ದಕ್ಷಿಣ ಕೋಲ್ಕತ್ತಾದ ದೊಡ್ಡ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಚಂದನ್ ತನ್ನನ್ನು ಪರಿಚಯಿಸಿಕೊಂಡಿದ್ದ. ಬಳಿಕ ದೀಪ್ ಪರಿಚಯ ಕೂಡ ಆಗಿತ್ತು. ಮೂವರೂ ಸಂಪರ್ಕದಲ್ಲಿದ್ದರು. ಇಬ್ಬರು ಆರೋಪಿಗಳು ಅವಳನ್ನು ಪೂಜಾ ಸಮಿತಿಯಲ್ಲಿ ಸೇರಿಸುವುದಾಗಿ ಭರವಸೆ ನೀಡಿದ್ದರು.

ಮತ್ತಷ್ಟು ಓದಿ:  ಆರೋಪಿ ಮನೆಗೆ ಅತ್ಯಾಚಾರ ಸಂತ್ರಸ್ತೆಯ ಕಳುಹಿಸಿದ ಅಧಿಕಾರಿಗಳು, ಮತ್ತೆ ಆಕೆಯ ಮೇಲೆ ಅತ್ಯಾಚಾರ

ಜೂನ್ 25 ರಂದು ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜು ಆವರಣದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿತ್ತು. ಕಾಲೇಜಿನ ಹಳೆಯ ವಿದ್ಯಾರ್ಥಿ ಮೋನೋಜಿತ್ ಮಿಶ್ರಾ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ನಂತರ ಅವರನ್ನು ಬಂಧಿಸಲಾಯಿತು. ಅದಕ್ಕೂ ಮುನ್ನ ಕೋಲ್ಕತ್ತಾ ಆರ್​​ಜಿಕರ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ