ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ
ಕಾನೂನು ವಿದ್ಯಾರ್ಥಿಯ ಮೇಲೆ ಕಾಲೇಜಿನ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕಾಲೇಜಿನ ಆವರಣದಲ್ಲಿ ಘಟನೆ ನಡೆದಿದ್ದು, ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ. ಜೂನ್25ರ ಸಂಜೆ 7.30ರಿಂದ 10.50ರ ನಡುವೆ ಈ ಘಟನೆ ನಡೆದಿದೆ.

ಕೋಲ್ಕತ್ತಾ, ಜೂನ್ 27: ಕಾನೂನು ವಿದ್ಯಾರ್ಥಿನಿ ಮೇಲೆ ಕಾನೂನು ಕಾಲೇಜಿನ ಆವರಣದಲ್ಲೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕಳೆದ ವರ್ಷವಷ್ಟೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಕಾನೂನು ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ. ಜೂನ್25ರ ಸಂಜೆ 7.30ರಿಂದ 10.50ರ ನಡುವೆ ಈ ಘಟನೆ ನಡೆದಿದೆ.
ಆರೋಪಿಗಳಲ್ಲಿ 31 ವರ್ಷದ ಮೊನೊಜಿತ್ ಮಿಶ್ರಾ,19 ವರ್ಷದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ (20) ಸೇರಿದ್ದಾರೆ. ಜೂನ್ 26 ರ ಸಂಜೆ ಕೋಲ್ಕತ್ತಾದ ತಲ್ಬಗನ್ ಕ್ರಾಸಿಂಗ್ ಬಳಿ ಮಿಶ್ರಾ ಮತ್ತು ಅಹ್ಮದ್ ಅವರನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಪ್ರಮಿತ್ ಮುಖರ್ಜಿಯನ್ನು ಆತನ ಮನೆಯಿಂದ ಬಂಧಿಸಲಾಗಿದೆ. ಪೊಲೀಸರು ಮೂವರ ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನೆ ಕಾಲೇಜಿನೊಳಗೆ ನಡೆದಿದೆ, ಸಂತ್ರಸ್ತೆಯ ಆರಂಭಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಹಲವಾರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಪರಾಧದ ಸ್ಥಳವನ್ನು ಸಹ ಸುತ್ತುವರಿಯಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗಾಗಿ ಕಾಯಲಾಗುತ್ತಿದೆ.
ಮತ್ತಷ್ಟು ಓದಿ: ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!
ಮೂವರು ಆರೋಪಿಗಳನ್ನು ಗುರುವಾರ ಅಲಿಪೋರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ಮುಂದಿನ ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಆದಾಗ್ಯೂ, ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದ್ದರು.
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಘಟನೆಯ ಬಗ್ಗೆ ಮಮತಾ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸುವೇಂದು ಅಧಿಕಾರಿ, ಇದಕ್ಕೆ ಪೊಲೀಸರೇ ಸಂಪೂರ್ಣ ಹೊಣೆ, ಇಡೀ ಕೋಲ್ಕತ್ತಾ ಪೊಲೀಸರನ್ನು ದಿಘಾಗೆ (ರಥಯಾತ್ರೆಯಲ್ಲಿ) ಕರೆದೊಯ್ಯಲಾಗಿದೆ.
ಕೋಲ್ಕತ್ತಾ ಪೊಲೀಸರು ಅಲ್ಲಿ ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯ ಐಟಿ ಸೆಲ್ನ ಅಮಿತ್ ಮಾಳವೀಯಾ ಮಾತನಾಡಿ, ಬಿಜೆಪಿ ಸಂತ್ರಸ್ತೆಯ ಕುಟುಂಬದೊಂದಿಗೆ ನಿಂತಿದೆ ಮತ್ತು ಎಲ್ಲಾ ಆರೋಪಿಗಳನ್ನು ಶಿಕ್ಷಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:39 pm, Fri, 27 June 25




