ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಚೆಕ್ ಇನ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸ್ವಲ್ಪ ಸಮಯದಲ್ಲೇ ಹತೋಟಿಗೆ ತಂದಿದ್ದಾರೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದಕ್ಕೂ ಮುನ್ನ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಕೋಲ್ಕತ್ತಾ ವಿಮಾನ ನಿಲ್ದಾಣದ 3C ನಿರ್ಗಮನ ಟರ್ಮಿನಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ಇನ್ನೂ ತಿಳಿದಿಲ್ಲ. ಅದನ್ನು ಪರಿಶೀಲಿಸಲಾಗುತ್ತಿದೆ.
ಮತ್ತಷ್ಟು ಓದಿ: Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಪ್ರಕಾರ, ಚೆಕ್-ಇನ್ ಏರಿಯಾ ಪೋರ್ಟಲ್ ಡಿ ನಲ್ಲಿ ರಾತ್ರಿ 9.12 ಕ್ಕೆ ಸಣ್ಣ ಬೆಂಕಿ ಕಾಣಿಸಿಕೊಂಡಿತು ಬೆಂಕಿ ಉಲ್ಬಣವಾಗುತ್ತಿದ್ದಂತೆ ಅಗ್ನಿ ಶಾಮಕ ದಳವು ಬೆಂಕಿಯನ್ನು 9.40ರ ವೇಳೆಗೆ ಸಂಪೂರ್ಣವಾಗಿ ಹತೋಟಿಗೆ ತಂದಿತು.
ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಮತ್ತು ಚೆಕ್-ಇನ್ ಪ್ರದೇಶದಲ್ಲಿ ಹೊಗೆಯ ಉಪಸ್ಥಿತಿಯಿಂದಾಗಿ ಚೆಕ್-ಇನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಚೆಕ್-ಇನ್ ಮತ್ತು ಕಾರ್ಯಾಚರಣೆಗಳು ಇದೀಗ ಪುನರಾರಂಭಗೊಂಡಿವೆ.
ಸಿಐಎಸ್ಎಫ್ ಪ್ರಕಾರ, ಡಿ ಪೋರ್ಟಲ್ ಚೆಕ್-ಇನ್ ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹೊಗೆಯಿಂದಾಗಿ ಟರ್ಮಿನಲ್ ಕಟ್ಟಡದಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು. ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿಯನ್ನು ನಂದಿಸಲಾಗಿದೆ. ಸಾಮಾನ್ಯ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ