ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಮಮತಾ ಭೇಟಿಯನ್ನು ಸ್ವಾಗತಿಸಿದ ಕಿರಿಯ ವೈದ್ಯರು, ಮಾತುಕತೆಗೆ ಸಿಎಂ ನಿವಾಸಕ್ಕೆ ಆಹ್ವಾನ

ವೈದ್ಯರ ಬೇಡಿಕೆಗಳು, ವಿಶೇಷವಾಗಿ ಭದ್ರತೆ ಮತ್ತು ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಸಹ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಭಾಗವಹಿಸಲು ಗುಂಪಿನಿಂದ 15 ಪ್ರತಿನಿಧಿಗಳನ್ನು ಕೇಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಖಚಿತಪಡಿಸಿದ್ದಾರೆ.

ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಮಮತಾ ಭೇಟಿಯನ್ನು ಸ್ವಾಗತಿಸಿದ ಕಿರಿಯ ವೈದ್ಯರು, ಮಾತುಕತೆಗೆ ಸಿಎಂ ನಿವಾಸಕ್ಕೆ ಆಹ್ವಾನ
ಮಮತಾ ಬ್ಯಾನರ್ಜಿ
Follow us
|

Updated on: Sep 14, 2024 | 8:09 PM

ಕೋಲ್ಕತ್ತಾ ಸೆಪ್ಟೆಂಬರ್ 14: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಆರ್‌ಜಿ ಕರ್ ಬಿಕ್ಕಟ್ಟನ್ನು ಪರಿಹರಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಚರ್ಚೆ ನಡೆಸಲು ಧರಣಿ ನಿರತ ಕಿರಿಯ ವೈದ್ಯರು ಶನಿವಾರ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕಿರಿಯ ವೈದ್ಯರು, ಆರೋಗ್ಯ ಇಲಾಖೆಯ ಪ್ರಧಾನ ಕಚೇರಿಯಾದ ಸ್ವಾಸ್ಥ್ಯ ಭವನದ ಹೊರಗಿನ ತಮ್ಮ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿಯವರ ದಿಢೀರ್ ಭೇಟಿಯನ್ನು ಸ್ವಾಗತಿಸಿದ್ದಾರೆ.

ನಮ್ಮ ಪ್ರತಿಭಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಬಂದಿದ್ದರು. ಎರಡೂ ಕಡೆಯಿಂದ ಚರ್ಚೆ ಮತ್ತು ಸಂವಾದಕ್ಕೆ ಬಾಗಿಲು ತೆರೆದಿರುವುದು ನಮಗೆ ಸಂತೋಷ ತಂದಿದೆ. ಇದಕ್ಕಾಗಿ ಸಿಎಂ ಕಚೇರಿಗೆ ಮೇಲ್ ಕೂಡ ಕಳುಹಿಸಿದ್ದು, ಆಕೆ ಬಂದಿದ್ದಕ್ಕೆ ನಮಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜೂನಿಯರ್ ಡಾಕ್ಟರ್ಸ್ ಫ್ರಂಟ್ ಅವರಿಗೆ ನೀಡಿರುವ ಐದು ಅಂಶಗಳ ಬೇಡಿಕೆಯ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ಪ್ರತಿಭಟನಾಕಾರರಲ್ಲಿ ಒಬ್ಬರಾದ ಡಾ ಆರಿಫ್ ಹೇಳಿದ್ದಾರೆ.  ಶನಿವಾರ ಸಂಜೆ 6 ಗಂಟೆಗೆ ಬ್ಯಾನರ್ಜಿ ಅವರ ನಿವಾಸದಲ್ಲಿ ಸಭೆ ನಡೆಸಲು ರಾಜ್ಯ ಸರ್ಕಾರವು ಪ್ರತಿಭಟನಾನಿರತ ವೈದ್ಯರನ್ನು ಆಹ್ವಾನಿಸಿತ್ತು.

ವೈದ್ಯರ ಬೇಡಿಕೆಗಳು, ವಿಶೇಷವಾಗಿ ಭದ್ರತೆ ಮತ್ತು ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಸಹ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಭಾಗವಹಿಸಲು ಗುಂಪಿನಿಂದ 15 ಪ್ರತಿನಿಧಿಗಳನ್ನು ಕೇಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಖಚಿತಪಡಿಸಿದ್ದಾರೆ.

ಪ್ರತಿಭಟನಾನಿರತ ವೈದ್ಯರಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದೇನು?

ಇದಕ್ಕೂ ಮುನ್ನ ಮಂಗಳವಾರದಿಂದ ವೈದ್ಯರು ಮೊಕ್ಕಾಂ ಹೂಡಿರುವ ಪ್ರತಿಭಟನಾ ಸ್ಥಳಕ್ಕೆ ಬ್ಯಾನರ್ಜಿ ದಿಢೀರ್ ಭೇಟಿ ನೀಡಿದರು. “ನಮಗೆ ನ್ಯಾಯ ಬೇಕು” ಎಂದ ಘೋಷಣೆ ಕೂಗಿದ ಗುಂಪನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವೈದ್ಯರಿಗೆ ಒತ್ತಾಯಿಸಿದ್ದು, ಅವರ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.

‘‘ನಾನು ಮುಖ್ಯಮಂತ್ರಿಯಾಗಿ ಅಲ್ಲ, ನಿಮ್ಮ ‘ದೀದಿ’ಯಾಗಿ (ಅಕ್ಕ) ನಿಮ್ಮನ್ನು ಭೇಟಿಯಾಗಲು ಬಂದಿದ್ದೇನೆ. “ನಾನು ನಿಮ್ಮ ಬೇಡಿಕೆಗಳನ್ನು ಅಧ್ಯಯನ ಮಾಡುತ್ತೇನೆ. ಯಾರಾದರೂ ತಪ್ಪಿತಸ್ಥರಾಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ . ಶುಕ್ರವಾರ ರಾತ್ರಿಯಿಡೀ ಮಳೆ ಸುರಿಯಿತು. ನೀವು ಇಲ್ಲಿ ಕುಳಿತಿರುವ ರೀತಿ ನನಗೂ ಸಂಕಟವಾಗುತ್ತಿದೆ. ಕಳೆದ 34 ದಿನಗಳಿಂದ ನಾನು ರಾತ್ರಿಯಿಡೀ ಮಲಗಿಲ್ಲ ಏಕೆಂದರೆ, ನೀವು ರಸ್ತೆಯಲ್ಲಿದ್ದರೆ, ನಾನು ಕಾವಲುಗಾರನಾಗಿ ಎಚ್ಚರವಾಗಿರಬೇಕಾಗುತ್ತದೆ, ”ಎಂದು ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಂದು ಕರೆಯುವುದು ದುರದೃಷ್ಟಕರ: ಯೋಗಿ ಆದಿತ್ಯನಾಥ್

ಪ್ರತಿಭಟನೆಗಳು ಸಾರ್ವಜನಿಕ ಆರೋಗ್ಯ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ, ಮುಷ್ಕರದ ಪರಿಣಾಮವಾಗಿ ವಿಳಂಬವಾದ ಚಿಕಿತ್ಸೆಯಿಂದಾಗಿ 29 ಸಾವುಗಳು ಸಂಭವಿಸಿವೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ