Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata rape-murder case: ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಮರಳಲು ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಸೂಚನೆ, ಶಿಸ್ತು ಕ್ರಮದ ಎಚ್ಚರಿಕೆ

"ವೈದ್ಯರು ನಾಳೆ ಸಂಜೆ 5 ಗಂಟೆಗೆ ಅಥವಾ ಅದಕ್ಕಿಂತ ಮೊದಲು ಕರ್ತವ್ಯಕ್ಕೆ ಮರಳದೇ ಇದ್ದರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ಸುರಕ್ಷತೆ ಮತ್ತು ಭದ್ರತೆಯ ಮೇಲಿನ ಎಲ್ಲಾ ದೂರುಗಳನ್ನು ತಕ್ಷಣವೇ ಗಮನಿಸಲಾಗುವುದು. ಆದಾಗ್ಯೂ, ನಿರಂತರವಾಗಿ ಕೆಲಸದಿಂದ ದೂರವಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬಹುದು ಎಂದು ಸಿಜೆಐ ಹೇಳಿದ್ದಾರೆ.

Kolkata rape-murder case: ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಮರಳಲು ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಸೂಚನೆ, ಶಿಸ್ತು ಕ್ರಮದ ಎಚ್ಚರಿಕೆ
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on:Sep 09, 2024 | 2:26 PM

ದೆಹಲಿ ಸೆಪ್ಟೆಂಬರ್ 09: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ( Kolkata’s RG Kar Medical College and Hospital)ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆಯನ್ನು ನಿಲ್ಲಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ಹೇಳಿದ್ದಾರೆ. ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣವನ್ನು ಆಲಿಸಿದ ಸುಪ್ರೀಂಕೋರ್ಟ್ (Supreme Court), ಪ್ರತಿಭಟನಾನಿರತ ವೈದ್ಯರು ಕೆಲಸಕ್ಕೆ ಮರಳದಿದ್ದರೆ, ಪಶ್ಚಿಮ ಬಂಗಾಳ ಸರ್ಕಾರ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ನಾಳೆ (ಮಂಗಳವಾರ) ಸಂಜೆ 5 ಗಂಟೆಯೊಳಗೆ ವೈದ್ಯರು ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳುವುದಿಲ್ಲ ಎಂದು ಸಿಜೆಐ ಚಂದ್ರಚೂಡ್ ತಿಳಿಸಿದ್ದಾರೆ.

“ವೈದ್ಯರು ಕೆಲಸಕ್ಕೆ ಮರಳುವುದನ್ನು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ನಾವು ಅವರಿಗೆ ಸುರಕ್ಷತೆ, ಭದ್ರತೆಯನ್ನು ನೀಡುತ್ತೇವೆ. ಆದರೆ ಅವರು ಕೆಲಸಕ್ಕೆ ಮರಳಿ ಬರಬೇಕು. ವೈದ್ಯರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮ ತೆಗೆದುಕೊಳ್ಳಬಾರದು ಎಂದು ನಾವು ಹೇಳಿದಾಗ ಶಿಕ್ಷಾರ್ಹ ವರ್ಗಾವಣೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕಪಿಲ್ ಸಿಬಲ್ ಹೇಳಿರುವುದಾಗಿ ಚಂದ್ರಚೂಡ್ ಹೇಳಿದ್ದಾರೆ.

ವೈದ್ಯರ ವಕೀಲರು ಅವರಿಗೆ ಮೂರು ದಿನಗಳು ಬೇಕು ಎಂದು ಹೇಳಿದಾಗ, ಸಿಜೆಐ ಅವರು ಈಗಾಗಲೇ ಅವರಿಗೆ ಎರಡು ದಿನಗಳನ್ನು ನೀಡುತ್ತಿರುವುದಾಗಿ ಹೇಳಿದರು.

“ವೈದ್ಯರು ನಾಳೆ ಸಂಜೆ 5 ಗಂಟೆಗೆ ಅಥವಾ ಅದಕ್ಕಿಂತ ಮೊದಲು ಕರ್ತವ್ಯಕ್ಕೆ ಮರಳದೇ ಇದ್ದರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ಸುರಕ್ಷತೆ ಮತ್ತು ಭದ್ರತೆಯ ಮೇಲಿನ ಎಲ್ಲಾ ದೂರುಗಳನ್ನು ತಕ್ಷಣವೇ ಗಮನಿಸಲಾಗುವುದು. ಆದಾಗ್ಯೂ, ನಿರಂತರವಾಗಿ ಕೆಲಸದಿಂದ ದೂರವಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬಹುದು ಮತ್ತು ಅವರು ಸೇವೆ ಮಾಡಲು ಉದ್ದೇಶಿಸಿರುವ ಸಮುದಾಯದ ಸಾಮಾನ್ಯ ಕಾಳಜಿಯನ್ನು ಅವರು ನಿರ್ಲಕ್ಷಿಸಬಾರದು ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ಬಾರ್ ಆ್ಯಂಡ್ ಬೆಂಚ್‌ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ಪ್ರತಿಭಟನಾನಿರತ ವೈದ್ಯರ ಮನಸ್ಸಿನಲ್ಲಿ ವಿಶ್ವಾಸ ಮೂಡಿಸಲು ಪಶ್ಚಿಮ ಬಂಗಾಳ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಗಮನಿಸಿದರು.

“ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯಸ್ಥರು ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ವೈದ್ಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಇದರಲ್ಲಿ ಪುರುಷ ಮತ್ತು ಮಹಿಳಾ ವೈದ್ಯರಿಗೆ ವಿಶ್ರಾಂತಿ ಕೊಠಡಿಗಳ ರಚನೆ, ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Mon, 9 September 24

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ