ಕೋಲ್ಕತ್ತಾದಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಬೀಸಿದ ನಾಲ್ವರ ಬಂಧನ

ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆದ ಪಾಕಿಸ್ತಾನ, ಬಾಂಗ್ಲಾದೇಶ ನಡುವಿನ ಕ್ರಿಕೆಟ್​ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಬೀಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.

ಕೋಲ್ಕತ್ತಾದಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಬೀಸಿದ ನಾಲ್ವರ ಬಂಧನ
ಪ್ಯಾಲೆಸ್ತೀನ್ ಧ್ವಜImage Credit source: India Today
Follow us
ನಯನಾ ರಾಜೀವ್
|

Updated on: Nov 01, 2023 | 11:42 AM

ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆದ ಪಾಕಿಸ್ತಾನ, ಬಾಂಗ್ಲಾದೇಶ ನಡುವಿನ ಕ್ರಿಕೆಟ್​ ವಿಶ್ವಕಪ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಬೀಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.

ಕ್ರೀಡಾಂಗಣದ ಜಿ1 ಮತ್ತು ಎಚ್1 ಬ್ಲಾಕ್‌ಗಳ ನಡುವೆ ಈ ಘಟನೆ ನಡೆದಿದೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶ ಬ್ಯಾಟಿಂಗ್ ಮಾಡುವಾಗ ಪ್ಯಾಲೆಸ್ತೀನ್ ಧ್ವಜವನ್ನು ಬೀಸಲಾಯಿತು. ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದ ವಿರುದ್ಧದ ಪ್ರತಿಭಟನೆಯ ಸಂಕೇತವಾಗಿ ಇದನ್ನು ಪ್ರದರ್ಶಿಸಲಾಯಿತು.

ವೈರಲ್ ಆಗಿರುವ ವೀಡಿಯೊದಲ್ಲಿ, ಮೂರು ಜನರು ಪ್ಯಾಲೆಸ್ತೀನ್ ಧ್ವಜವನ್ನು ಹಿಡಿದಿದ್ದಾರೆ. ಮೂವರಲ್ಲಿ ಒಬ್ಬರು ಪ್ಯಾಲೆಸ್ತೀನ್ ಮತ್ತು ಬಾಂಗ್ಲಾದೇಶದ ಧ್ವಜಗಳನ್ನು ಸಹ ಹಿಡಿದಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಪ್ರದರ್ಶನವನ್ನು ಹಲವಾರು ಪ್ರೇಕ್ಷಕರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗಮನಿಸಿದರು. ಮತ್ತೊಂದು ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸುತ್ತಿರುವಾಗ ಒಬ್ಬ ವ್ಯಕ್ತಿಯು ಇಬ್ಬರ ಚಿತ್ರಗಳನ್ನು ಕ್ಲಿಕ್ ಮಾಡಿದ್ದಾನೆ.

ಮತ್ತಷ್ಟು ಓದಿ: ICC World Cup 2023: ಪಾಕಿಸ್ತಾನ ತಂಡಕ್ಕೆ ಇನ್ನೂ ಇದೆ ಸೆಮಿಫೈನಲ್‌ಗೇರುವ ಅವಕಾಶ..!

ಮಾಧ್ಯಮದವರು ಆರೋಪಿಗಳ ಛಾಯಾಚಿತ್ರ ತೆಗೆಯಲು ಯತ್ನಿಸಿದಾಗ ಗ್ಯಾಲರಿ ಬಿಟ್ಟು ಕ್ರೀಡಾಂಗಣದಿಂದ ಹೊರಬರಲು ಯತ್ನಿಸಿದರು. ಆದರೆ ಅವರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ಜನರನ್ನು ವಿಚಾರಣೆಗೊಳಪಡಿಸಲಾಯಿತು ಮತ್ತು ನಂತರ ಅವರನ್ನು ಮಧ್ಯರಾತ್ರಿ ಬಿಡುಗಡೆ ಮಾಡಲಾಯಿತು. ಆರೋಪಿಗಳು ಬಲ್ಲಿ, ಎಕ್ಬಲ್‌ಪೋರ್ ಮತ್ತು ಕರಾಯ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಗಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ