ಕೊಲ್ಕತ್ತಾದಲ್ಲಿ ಕಿರಿಯ ವೈದ್ಯರಿಂದ ಶನಿವಾರದಿಂದ ತುರ್ತು ಸೇವೆಗಳ ಪುನರಾರಂಭ

ಕೊಲ್ಕತ್ತಾದ ಆರ್​ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳದಾದ್ಯಂತ ವೈದ್ಯರ ಪ್ರತಿಭಟನೆ ಮುಂದುವರೆದಿದೆ. ಶುಕ್ರವಾರ ಕಿರಿಯ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದು, ಶನಿವಾರದಿಂದ ತುರ್ತು ಸೇವೆಗಳನ್ನು ಮರುಆರಂಭಿಸಲು ವೈದ್ಯರು ನಿರ್ಧರಿಸಿದ್ದಾರೆ.

ಕೊಲ್ಕತ್ತಾದಲ್ಲಿ ಕಿರಿಯ ವೈದ್ಯರಿಂದ ಶನಿವಾರದಿಂದ ತುರ್ತು ಸೇವೆಗಳ ಪುನರಾರಂಭ
ಕೊಲ್ಕತ್ತಾದ ಕಿರಿಯ ವೈದ್ಯರು
Follow us
ಸುಷ್ಮಾ ಚಕ್ರೆ
|

Updated on: Sep 19, 2024 | 10:38 PM

ಕೊಲ್ಕತ್ತಾ: ಕರ್ತವ್ಯದಲ್ಲಿದ್ದ ಕೊಲ್ಕತ್ತಾದ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ವೈದ್ಯರ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಈ ಪ್ರಕರಣ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದೀಗ ಕಿರಿಯ ವೈದ್ಯರು ನಾಳೆ ಪ್ರತಿಭಟನಾ ಮೆರವಣಿಗೆಯನ್ನು ಯೋಜಿಸಿದ್ದಾರೆ. ಹಾಗೇ, ಶನಿವಾರದಿಂದ ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದ್ದಾರೆ.

ಆದರೆ, ಕೆಲಸಕ್ಕೆ ಮರಳಿದರೂ ಕಿರಿಯ ವೈದ್ಯರು ನ್ಯಾಯಕ್ಕಾಗಿ ತಮ್ಮ ಬೇಡಿಕೆಯಲ್ಲಿ ದೃಢವಾಗಿ ಉಳಿದಿದ್ದಾರೆ. ಶುಕ್ರವಾರ ಮಧ್ಯಾಹ್ನ ಸ್ವಸ್ಥ ಭವನದಿಂದ ಸಿಬಿಐ ಕಚೇರಿಯವರೆಗೆ ಮೆರವಣಿಗೆ ನಡೆಸಲು ಯೋಜಿಸಿದ್ದಾರೆ. ತಮ್ಮ ಕುಂದುಕೊರತೆಗಳ ಬಗ್ಗೆ ಗಮನ ಸೆಳೆದು ಅಧಿಕಾರಿಗಳಿಂದ ಪರಿಹಾರ ಪಡೆಯುವುದು ಈ ಪ್ರತಿಭಟನೆ ಮೆರವಣಿಗೆಯ ಉದ್ದೇಶವಾಗಿದೆ.

ಇದನ್ನೂ ಓದಿ: ಕೊಲ್ಕತ್ತಾ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ಬಾವುಟ ಬೀಸಿದ ಸನ್ಯಾಸಿ

ಕೊಲ್ಕತ್ತಾದ ಕಿರಿಯ ವೈದ್ಯರು ಈ ಶನಿವಾರದಿಂದ ತುರ್ತು ವೈದ್ಯಕೀಯ ಸೇವೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರವು ಹಲವಾರು ದಿನಗಳ ಪ್ರತಿಭಟನೆ ಮತ್ತು ಸೇವೆಗಳಲ್ಲಿ ಅಡ್ಡಿಪಡಿಸಿದ ನಂತರ ಸರ್ಕಾರಕ್ಕೆ ಕೊಂಚ ರಿಲೀಫ್ ಉಂಟುಮಾಡಿದೆ. ವೈದ್ಯರ ಮುಷ್ಕರದಿಂದ ಕೊಲ್ಕತ್ತಾದ ಜನರು ವೈದ್ಯರ ಚಿಕಿತ್ಸೆ ಸಿಗದೆ ಸಾಕಷ್ಟು ತುಂದರೆ ಅನುಭವಿಸಿದ್ದರು. ಪ್ರತಿಭಟನೆ ಹಿಂಪಡೆಯುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾಕಷ್ಟು ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ