ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮಮತಾ ಬ್ಯಾನರ್ಜಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಬಿಜೆಪಿ ಒತ್ತಾಯ

ಪೊಲೀಸ್ ಕಮಿಷನರ್ ಅತ್ಯಾಚಾರ ಮತ್ತು ಕೊಲೆಯನ್ನು ಆತ್ಮಹತ್ಯೆ ಎಂದು ಹೇಳಿದ್ದಾರೆ. ಹಾಗಾಗಿ  ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಸತ್ಯ ಹೊರಬರಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಸತ್ಯಾಂಶ ತಿಳಿಯಲು ಮಮತಾ ಬ್ಯಾನರ್ಜಿ ಮತ್ತು ಪೊಲೀಸ್ ಆಯುಕ್ತರ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮಮತಾ ಬ್ಯಾನರ್ಜಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಬಿಜೆಪಿ ಒತ್ತಾಯ
ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on: Aug 27, 2024 | 4:42 PM

ಕೋಲ್ಕತ್ತಾ ಆಗಸ್ಟ್ 27: ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ಆಸ್ಪತ್ರೆಯೊಳಗೆ (RG Kar hospital)ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ( Mamata Banerjee) ರಕ್ಷಿಸಿದ್ದಾರೆ ಎಂದು ಆರೋಪಿಸಿದ ಬಿಜೆಪಿ (BJP), ಸಿಎಂಗೆ ಸಿಬಿಐ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದೆ. ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ಗೆ ಪ್ರತಿಕ್ರಿಯಿಸಿದ ಪಕ್ಷವು ಬ್ಯಾನರ್ಜಿ ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದು, ರಾಜೀನಾಮೆಗೆ ಒತ್ತಾಯಿಸಿತು. ಅದೇ ವೇಳೆ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯೆಲ್ ಅವರಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸುವಂತೆ ಬಿಜೆಪಿ ಒತ್ತಾಯಿಸಿದೆ.

ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನೂ ಬಿಜೆಪಿ ಖಂಡಿಸಿದೆ. “ಪಶ್ಚಿಮ ಬಂಗಾಳದಲ್ಲಿ ಏನೇ ಆಗಿದ್ದರೂ ಆತಂಕಕಾರಿ. ಇದು ಸಂವಿಧಾನವನ್ನು ಚೂರುಚೂರು ಮಾಡುವಂತಿದೆ. ದೇಶದಲ್ಲಿ  ಸರ್ವಾಧಿಕಾರಿ  ಇದ್ದರೆ  ಅದು ಮಮತಾ ಬ್ಯಾನರ್ಜಿ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪೊಲೀಸ್ ಕಮಿಷನರ್ ಅತ್ಯಾಚಾರ ಮತ್ತು ಕೊಲೆಯನ್ನು ಆತ್ಮಹತ್ಯೆ ಎಂದು ಹೇಳಿದ್ದಾರೆ. ಹಾಗಾಗಿ  ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಸತ್ಯ ಹೊರಬರಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಸತ್ಯಾಂಶ ತಿಳಿಯಲು ಮಮತಾ ಬ್ಯಾನರ್ಜಿ ಮತ್ತು ಪೊಲೀಸ್ ಆಯುಕ್ತರ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕು ಎಂದಿದ್ದಾರೆ ಭಾಟಿಯಾ.

ಏತನ್ಮಧ್ಯೆ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ‘ನಬಣ್ಣ ಅಭಿಜನ್’ ರ್ಯಾಲಿಯಲ್ಲಿ ಶಾಂತಿಯುತವಾಗಿ ಭಾಗವಹಿಸಿದವರ ಮೇಲೆ ಪೊಲೀಸರು “ಬಲ ಪ್ರಯೋಗ ಮಾಡಿ ದಮನ ಮಾಡಲು ನೋಡಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಆಡಳಿತದ “ಕ್ರೂರತನ” ನಿಲ್ಲಿಸದಿದ್ದರೆ ಪಶ್ಚಿಮ ಬಂಗಾಳವನ್ನು ಸ್ಥಗಿತಗೊಳಿಸುವುದಾಗಿ ಅವರು ಬೆದರಿಕೆ ಹಾಕಿದರು.

“ಸಂತ್ರಗಾಚಿಯಲ್ಲಿ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ಜಲಫಿರಂಗಿಗಳನ್ನು ಬಳಸುತ್ತಿದ್ದಾರೆ, ಹೌರಾ ಸೇತುವೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ, ಕಾಲೇಜ್ ಸ್ಟ್ರೀಟ್‌ನಲ್ಲಿ ಲಾಠಿ ಚಾರ್ಜ್ ಮಾಡಿದ್ದಾರೆ. ದಯವಿಟ್ಟು ಈ ಕ್ರೌರ್ಯಗಳನ್ನು ತಕ್ಷಣವೇ ನಿಲ್ಲಿಸಿ” ಎಂದು ಬಿಜೆಪಿಯ ಹಿರಿಯ ನಾಯಕ ಹೇಳಿದ್ದಾರೆ.

“ಈ ಆಡಳಿತದಿಂದ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ನೂರಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಮತ್ತು ಡಿಜಿಪಿ ಇಂತಹ ದೌರ್ಜನ್ಯವನ್ನು ನಿಲ್ಲಿಸದಿದ್ದರೆ, ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾನು ಮಾರ್ಗಮಧ್ಯೆ ಹೌರಾ ನಿಲ್ದಾಣಕ್ಕೆ ಹೋಗುತ್ತಿದ್ದೇನೆ. ಬೇಲೂರು ಮಠ್ ಅವರು ಮುಂದೆ ಬರಬೇಡಿ ಎಂದು ಕೇಳಿದ್ದರಿಂದ ನಾವು ಛತ್ರ ಸಮಾಜ ಚಳವಳಿಗೆ ಸೇರುತ್ತಿಲ್ಲ. ಆದರೆ ನಾವು ಅವರೊಂದಿಗೆ ಇದ್ದೇವೆ ಎಂದು ಅವರು ಹೇಳಿದರು.

ಆಗಸ್ಟ್ 9 ರಂದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು.

ವರದಿಗಳ ಪ್ರಕಾರ, ಆಸ್ಪತ್ರೆಯ ಮಾಜಿ ಪ್ರಾಂಶುಪಾಲರು ಆರಂಭದಲ್ಲಿ ಇದು ಆತ್ಮಹತ್ಯೆ ಎಂದು ಹೇಳಿದರು. ಸಂದೀಪ್ ಘೋಷ್ ಎಂಬ ಅಧಿಕಾರಿಯು ಹತ್ಯೆಯ ಸಿಬಿಐ ತನಿಖೆಯ ವಿಷಯವಾಗಿದೆ. ಅವರ ವಿರುದ್ಧದ ಹಣಕಾಸು ಅವ್ಯವಹಾರದ ಆರೋಪಗಳ ಬಗ್ಗೆಯೂ ಸಂಸ್ಥೆ ತನಿಖೆ ನಡೆಸುತ್ತಿದೆ ಎಂದಿದ್ದಾರೆ. ಸಿಬಿಐ ಪ್ರಮುಖ ಆರೋಪಿಗಳಾದ ಸಂಜಯ್ ರಾಯ್, ಡಾ ಘೋಷ್ ಮತ್ತು ಇತರರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿತು.

ಇದನ್ನೂ ಓದಿ: ಅಸ್ಸಾಂ ಸ್ವಾಧೀನಪಡಿಸಿಕೊಳ್ಳಲು ‘ಮಿಯಾ’ ಮುಸ್ಲಿಮರಿಗೆ ಬಿಡುವುದಿಲ್ಲ: ಸಿಎಂ ಹಿಮಂತ ಶರ್ಮಾ

ವೈದ್ಯೆಯ ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಸಾಯಿಸುವ ಮೊದಲು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಆಕೆಯ ದೇಹದಲ್ಲಿ 25 ಆಂತರಿಕ ಮತ್ತು ಬಾಹ್ಯ ಗಾಯಗಳು ಕಂಡುಬಂದಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್