ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ರಾಜೀನಾಮೆಗೆ ನಿರ್ಭಯಾ ತಾಯಿ ಒತ್ತಾಯ

|

Updated on: Aug 17, 2024 | 7:49 PM

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತನ್ನ ಅಧಿಕಾರವನ್ನು ಬಳಸುವ ಬದಲು ಮಮತಾ ಬ್ಯಾನರ್ಜಿ ಅವರು ಸಾರ್ವಜನಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೊಬ್ಬ ಮಹಿಳೆ. ರಾಜ್ಯದ ಮುಖ್ಯಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಆಶಾದೇವಿ ಹೇಳಿದ್ದಾರೆ.

ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ರಾಜೀನಾಮೆಗೆ ನಿರ್ಭಯಾ ತಾಯಿ ಒತ್ತಾಯ
ಆಶಾದೇವಿ
Follow us on

ದೆಹಲಿ ಆಗಸ್ಟ್ 17: ಪಶ್ಚಿಮ ಬಂಗಾಳದಲ್ಲಿ (Kolkata rape-murder case) ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾದೇವಿ ಅವರು ಶನಿವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜೀನಾಮೆಗೆ ಒತ್ತಾಯಿಸಿದ್ದಾರೆ.  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತನ್ನ ಅಧಿಕಾರವನ್ನು ಬಳಸುವ ಬದಲು ಮಮತಾ ಬ್ಯಾನರ್ಜಿ ಅವರು ಸಾರ್ವಜನಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಶಾದೇವಿ ಹೇಳಿದ್ದಾರೆ. ಈ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೊಬ್ಬ ಮಹಿಳೆ. ರಾಜ್ಯದ ಮುಖ್ಯಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ ಕಾರಣ ಅವರು ರಾಜೀನಾಮೆ ನೀಡಬೇಕು ಎಂದಿದ್ದಾರೆ ಆಶಾದೇವಿ.

ಆಗಸ್ಟ್ 9 ರಂದು, ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ, ದೇಶಾದ್ಯಂತ ವೈದ್ಯರು ಮತ್ತು ಅವರ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಬ್ಯಾನರ್ಜಿ ಅವರು ಶುಕ್ರವಾರ ಮೌಲಾಲಿಯಿಂದ ಕೋಲ್ಕತ್ತಾದ ಡೊರಿನಾ ಕ್ರಾಸಿಂಗ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದರು.

ಫೆಡರಲ್ ಮತ್ತು ರಾಜ್ಯ ಸರ್ಕಾರಗಳು ಅತ್ಯಾಚಾರಿಗಳ ತ್ವರಿತ ಕಾನೂನು ಶಿಕ್ಷೆಯನ್ನು ಗಂಭೀರವಾಗಿ ಪರಿಗಣಿಸದ ಹೊರತು ಇಂತಹ ಹಿಂಸಾಚಾರವು ಪ್ರತಿದಿನವೂ ದೇಶದ ಅನೇಕ ಪ್ರದೇಶಗಳಲ್ಲಿ ಮುಂದುವರಿಯುತ್ತದೆ ಎಂದು ಆಶಾದೇವಿ ಹೇಳಿದ್ದಾರೆ. “ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದಿದ್ದಾಗ ಮತ್ತು ಅಂತಹ ಅನಾಗರಿಕತೆ ಅವರ ವಿರುದ್ಧ ನಡೆದಾಗ, ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:Kolkata rape-murder: ಕೋಲ್ಕತ್ತಾ ಅತ್ಯಾಚಾರ-ಕೊಲೆ: ಬಂಗಾಳದ 42 ವೈದ್ಯರ ‘ವರ್ಗಾವಣೆ’ ವಿವಾದ; ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ವಾಗ್ದಾಳಿ

ಪ್ರಶಿಕ್ಷಣಾರ್ಥಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಂದ ಒಂದು ದಿನದ ನಂತರ ಅಪರಾಧಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ತರುವಾಯ, ಕಲ್ಕತ್ತಾ ಹೈಕೋರ್ಟ್‌ನಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಪ್ರಕರಣವನ್ನು ನಿಯೋಜಿಸಲಾಯಿತು, ಇದು ಪೊಲೀಸ್ ತನಿಖೆಯಲ್ಲಿನ ನ್ಯೂನತೆಗಳನ್ನು ಉಲ್ಲೇಖಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ