AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೈ ಕೈ ಹಿಡಿದು ಓಡಾಡುವಂತಿಲ್ಲ, ಒಟ್ಟಿಗೆ ಕುಳಿತುಕೊಳ್ಳುವಂತೆಯೂ ಇಲ್ಲ

ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ.

ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೈ ಕೈ ಹಿಡಿದು ಓಡಾಡುವಂತಿಲ್ಲ, ಒಟ್ಟಿಗೆ ಕುಳಿತುಕೊಳ್ಳುವಂತೆಯೂ ಇಲ್ಲ
ಕಾಲೇಜುImage Credit source: ABP Live
ನಯನಾ ರಾಜೀವ್
|

Updated on: Jun 28, 2023 | 2:02 PM

Share

ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಆದೇಶದ ಪ್ರಕಾರ ಇನ್ನು ಮುಂದೆ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಒಂಟಿಯಾಗಿ ಕುಳಿತುಕೊಳ್ಳುವಂತಿಲ್ಲ. ಯಾರೊಬ್ಬರ ಜಜೆಗೂ ಕುಳಿತುಕೊಳ್ಳುವಂತಿಲ್ಲ ಅಲ್ಲದೆ ಪರಸ್ಪರ ಕೈ ಹಿಡಿದುಕೊಂಡು ನಡೆಯುವಂತಿಲ್ಲ. ಈ ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಈಗ ಪ್ರತಿಭಟನೆಯ ಮೇಲೂ ಕಾಲೇಜಿಗೆ ನಿಷೇಧ ಹೇರಲಾಗಿದೆ.

ಕಾಲೇಜು ಆಡಳಿತ ಮಂಡಳಿ ಹೊರಡಿಸಿರುವ ನೀತಿ ಸಂಹಿತೆಯ ರೂಪದಲ್ಲಿ ಇಂತಹ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಇದರಿಂದಾಗಿ ಯಾವುದೇ ವಿದ್ಯಾರ್ಥಿಯು ಧರಣಿಯಂತಹ ಯಾವುದೇ ರೀತಿಯ ಚಳವಳಿಯನ್ನು ಮಾಡಲು ಸಾಧ್ಯವಿಲ್ಲ.

ಕಾಲೇಜಿನ ಈ ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿ ಸಂಘ, ಇತರೆ ವಿದ್ಯಾರ್ಥಿ ಸಂಘಟನೆಗಳು ಸೇರಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಇದು ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹೇಳಿವೆ.

ಮತ್ತಷ್ಟು ಓದಿ: Davanagere News: ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ಕಾಂಪೌಂಡ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಿಪಿಎಂನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಶುಕ್ರವಾರ (ಜೂನ್ 23) ನೀತಿ ಸಂಹಿತೆಯನ್ನು ವಿರೋಧಿಸಿ ವಿದ್ಯಾರ್ಥಿಗಳ ಡೀನ್‌ಗೆ ಮನವಿ ಸಲ್ಲಿಸಿತು. ಇದರೊಂದಿಗೆ ಸೋಮವಾರ (ಜೂನ್ 26) ಕ್ಯಾಂಪಸ್‌ನಲ್ಲಿ ಪ್ರತಿಭಟನೆಯನ್ನೂ ನಡೆಸಿದರು.

ಕಳೆದ ವಾರ ಪ್ರೆಸಿಡೆನ್ಸಿ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಕುಳಿತು ಮಾತನಾಡುತ್ತಿರುವುದನ್ನು ಅಥವಾ ಕ್ಯಾಂಪಸ್‌ನಲ್ಲಿ ಕೈ ಕೈ ಹಿಡಿದುಕೊಂಡು ಹೋಗುತ್ತಿರುವುದನ್ನು ನೋಡಿದ ಬಳಿಕ ಕಚೇರಿಗೆ ಕರೆಸಿಕೊಂಡಿದ್ದರು. ಇದರೊಂದಿಗೆ ಅವರಿಗೆ ಈ ಕುರಿತು ನೋಟಿಸ್ ನೀಡಲಾಗಿತ್ತು. ಇದಲ್ಲದೇ ಕೆಲ ಪೋಷಕರಿಂದಲೂ ದೂರುಗಳು ಬಂದಿದ್ದವು.

ಶಿಸ್ತಿನ ನೆಪದಲ್ಲಿ ವಿದ್ಯಾರ್ಥಿಗಳ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ಆಡಳಿತದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ ಎಂದು ಎಸ್‌ಎಫ್‌ಐ ಪ್ರೆಸಿಡೆನ್ಸಿ ಶಾಖೆಯ ಕಾರ್ಯದರ್ಶಿ ರಿಷಬ್ ಸಹಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ