AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, ಹಲವರಿಗೆ ಗಾಯ

ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಭಾನುವಾರ ತಡರಾತ್ರಿ ಕೋಲ್ಕತ್ತಾದಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, ಹಲವರಿಗೆ ಗಾಯ
ಕಟ್ಟಡ ಕುಸಿತ
Follow us
ನಯನಾ ರಾಜೀವ್
|

Updated on: Mar 18, 2024 | 8:27 AM

ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಭಾನುವಾರ ತಡರಾತ್ರಿ ಕೋಲ್ಕತ್ತಾದಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಐದು ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಸಿಲುಕಿರುವ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ಮತ್ತಷ್ಟು ಓದಿ: ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ತಕ್ಷಣದ ರಕ್ಷಣೆ ಮತ್ತು ಪರಿಹಾರಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯ ವಿಪತ್ತು ನಿರ್ವಹಣಾ ತಂಡವನ್ನು ತೊಡಗಿಸಿಕೊಳ್ಳುವಂತೆ ನಾನು ಮುಖ್ಯ ಕಾರ್ಯದರ್ಶಿ ಪಶ್ಚಿಮ ಬಂಗಾಳ, ಗೃಹ ಇಲಾಖೆ ಮತ್ತು ಕೋಲ್ಕತ್ತಾದ ಆಯುಕ್ತರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು. ಒಬ್ಬ ಮಹಿಳೆಯನ್ನು ಸ್ಥಳೀಯ ನಿವಾಸಿ ಹಸೀನಾ ಬೀಬಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ