AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿಗೂ ಕೊನೆ ಆಸೆ ಕೇಳುತ್ತಾರೆ, ನನಗ್ಯಾಕೆ ಅವಕಾಶ ಕೊಡಲಿಲ್ಲ?: ಸಚಿವ ಸ್ಥಾನ ಕಳೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಸಿಡಿದುಬಿದ್ದ ಸುರೇಖಾ

ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಮಗಳ ಹೇಳಿಕೆ ನೀಡಿದ್ದಕ್ಕಾಗಿ ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಯಾವುದೇ ವಿವರಣೆ ಕೇಳದೆ ವಜಾಗೊಳಿಸಿರುವುದಕ್ಕೆ ಸುರೇಖಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ರೇವಂತ್ ರೆಡ್ಡಿ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ಮಾಡಿ ನನ್ನನ್ನು ತೆಗೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ತೆಲಂಗಾಣ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ.

ಕೈದಿಗೂ ಕೊನೆ ಆಸೆ ಕೇಳುತ್ತಾರೆ, ನನಗ್ಯಾಕೆ ಅವಕಾಶ ಕೊಡಲಿಲ್ಲ?: ಸಚಿವ ಸ್ಥಾನ ಕಳೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಸಿಡಿದುಬಿದ್ದ ಸುರೇಖಾ
ಸುರೇಖಾ-ರೇವಂತ್ ರೆಡ್ಡಿImage Credit source: Deccan Herald
ನಯನಾ ರಾಜೀವ್
|

Updated on:Sep 04, 2026 | 8:45 AM

Share

ಹೈದರಾಬಾದ್, ಸೆಪ್ಟೆಂಬರ್ 04:    ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಮಗಳು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ತೆಲಂಗಾಣದ ಅರಣ್ಯ ಸಚಿವೆ ಕೊಂಡ ಸುರೇಖಾ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ. ಆದರೆ ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸುರೇಖಾ, ಯಾವುದೇ ವಿವರಣೆ ಕೇಳದೆ ಏಕಾಏಕಿ ಕೈಬಿಟ್ಟಿರುವುದು ಅನ್ಯಾಯ ಎಂದಿದ್ದು, ತಮ್ಮನ್ನು ತೆಗೆದುಹಾಕಲು ಸಿಎಂ ರೇವಂತ್ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್‌ಗೆ ರಾಜೀನಾಮೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ವಜಾಗೊಳಿಸುವಿಕೆಯ ಬಗ್ಗೆ ಮಾತನಾಡಿದ ಸುರೇಖಾ, ಮರಣದಂಡನೆ ಶಿಕ್ಷೆಗೆ ಒಳಗಾದ ಕೈದಿಗೂ ಕೊನೆಯ ಆಸೆ ಕೇಳಲಾಗುತ್ತದೆ, ಆದರೆ ನನಗೆ ಯಾವುದೇ ಮುನ್ಸೂಚನೆ ಅಥವಾ ವಿವರಣೆ ನೀಡುವ ಅವಕಾಶವನ್ನೇ ಕೊಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ವತಂತ್ರವಾಗಿ ಮಾತನಾಡುವ ಹಕ್ಕು ಹೊಂದಿರುವ ವಯಸ್ಕ ಮಗಳ ಹೇಳಿಕೆಗೆ ತಾಯಿಯನ್ನು ಹೊಣೆಗಾರರನ್ನಾಗಿ ಮಾಡುವುದು ತಪ್ಪು ಎಂದಿರುವ ಅವರು, ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಹಾಗೂ ಸಿಎಂ ಆಪ್ತರು ತಮ್ಮ ವಿರುದ್ಧ ಒಳಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ರಾಹುಲ್ ಗಾಂಧಿಯೇ ದೇಶದ ಮುಂದಿನ ಪ್ರಧಾನಿಯಾಗಬೇಕು: ಸಿಎಂ ರೇವಂತ್ ರೆಡ್ಡಿ

ಹಿಂದುಳಿದ ವರ್ಗದ (ಬಿಸಿ) ಹಿರಿಯ ನಾಯಕಿಯಾಗಿರುವ ತಮ್ಮನ್ನು ಅನ್ಯಾಯವಾಗಿ ಸಂಪುಟದಿಂದ ಕೈಬಿಟ್ಟಿರುವುದು ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಸಚಿವ ಸ್ಥಾನ ಕಳೆದುಕೊಂಡರೂ ಕಾಂಗ್ರೆಸ್ ಶಾಸಕಿಯಾಗಿಯೇ ಮುಂದುವರೆಯುವುದಾಗಿ ಸ್ಪಷ್ಟಪಡಿಸಿರುವ ಸುರೇಖಾ, ತೆಲಂಗಾಣ ಸರ್ಕಾರದಲ್ಲಿ ತಮಗಾದ ಅನ್ಯಾಯ ಮತ್ತು ಸಿಎಂ ರೇವಂತ್ ರೆಡ್ಡಿ ಅವರ ದಬ್ಬಾಳಿಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ.

ಹೈಕಮಾಂಡ್‌ಗೆ ನನ್ನನ್ನು ತೆಗೆಯುವ ಯಾವುದೇ ಇರಾದೆ ಇರಲಿಲ್ಲ. ಆದರೆ ಕೊಂಡ ಸುರೇಖಾರನ್ನು ಸಂಪುಟದಿಂದ ತೆಗೆಯದಿದ್ದರೆ ನಾನೇ ಮುಖ್ಯಮಂತ್ರಿ ಸ್ಥಾನ ಬಿಟ್ಟು ಹೋಗುತ್ತೇನೆ ಎಂದು ರೇವಂತ್ ರೆಡ್ಡಿ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ಮಾಡಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ದೂರಿದ್ದಾರೆ.

ಮಗಳ ಹೇಳಿಕೆಗೆ ನಾನೇಕೆ ಹೊಣೆ?:ನನ್ನ ಪುತ್ರಿ ಸುಶ್ಮಿತಾ ಸ್ವತಂತ್ರ ಆಲೋಚನೆ ಹೊಂದಿರುವ ವಯಸ್ಕ ಮಹಿಳೆ. ಆಕೆಯ ಮಾತುಗಳಿಗೆ ನನ್ನನ್ನು ದಂಡಿಸುವುದು ಎಷ್ಟು ಸರಿ ಆಕೆಯ ಹೇಳಿಕೆಯನ್ನು ನಾನು ಖಂಡಿಸಿದರೆ ನನ್ನ ಮಗಳನ್ನೇ ನಾನು ಕೀಳಾಗಿ ಕಂಡಂತೆ ಎಂದು ಅವರು ಮಗಳನ್ನು ಸಮರ್ಥಿಸಿಕೊಂಡಿದ್ದಾರೆ. ತಾವು ಪಕ್ಷ ಬಿಟ್ಟು ಹೋಗುವುದಿಲ್ಲ, ಬದಲಾಗಿ ಕಾಂಗ್ರೆಸ್ ಶಾಸಕಿಯಾಗಿಯೇ ಮುಂದುವರೆದು ಜನರಿಗಾಗಿ ಹೋರಾಡುವುದಾಗಿ ತಿಳಿಸಿದ್ದಾರೆ.

ವಾರಂಗಲ್ ಜಿಲ್ಲೆಯ ಪರಕಲ್ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರೇವೂರಿ ಪ್ರಕಾಶ್ ರೆಡ್ಡಿ ಅವರಿಗೇ ಮುಂದಿನ ಚುನಾವಣೆಯಲ್ಲೂ ಟಿಕೆಟ್ ನೀಡುವುದಾಗಿ ಸಿಎಂ ಘೋಷಿಸಿದ್ದರು. ಇದೇ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ಸುರೇಖಾ ಪುತ್ರಿ ಕೊಂಡ ಸುಶ್ಮಿತಾ, ಸಿಎಂ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಾರ್ವಜನಿಕವಾಗಿ ಆಕ್ರೋಶ ಹೊರಹಾಕಿದ್ದರು. ಇದು ಕಾಂಗ್ರೆಸ್‌ನಲ್ಲಿ ತೀವ್ರ ಶಿಸ್ತುಕ್ರಮದ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಸುರೇಖಾ ವಜಾಗೊಂಡ ನಂತರ ತೆಲಂಗಾಣ ಸಚಿವ ಸಂಪುಟದಲ್ಲಿ ಕೇವಲ ಒಬ್ಬರೇ ಮಹಿಳಾ ಸಚಿವೆ (ಸೀತಕ್ಕ) ಉಳಿದುಕೊಂಡಿದ್ದಾರೆ. ಇದನ್ನು ಸರಿದೂಗಿಸಲು ಕಾಂಗ್ರೆಸ್ ಹೈಕಮಾಂಡ್ ಪ್ಲಾನಿಂಗ್ ಬೋರ್ಡ್ ಉಪಾಧ್ಯಕ್ಷೆಯಾಗಿ ಗದ್ವಾಲ್ ವಿಜಯಲಕ್ಷ್ಮಿ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ನೆರೆಲ್ಲಾ ಶಾರದಾ ಅವರನ್ನು ತಕ್ಷಣವೇ ನೇಮಕ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:41 am, Fri, 4 September 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ