Rahul Gandhi: ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರ ತೊರೆಯಲಿದ್ದಾರೆ; ಸುಳಿವು ನೀಡಿದ ಸುಧಾಕರನ್

ಬುಧವಾರ ಕಲ್ಪೆಟ್ಟಾದಲ್ಲಿ ಮಾತನಾಡಿದ ಸುಧಾಕರನ್, ಭಾರತವನ್ನು ಮುನ್ನಡೆಸಬೇಕಾದ ರಾಹುಲ್ ವಯನಾಡಿಗೆ ಬಂದು ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಬೇಜಾರು ಮಾಡಿಕೊಳ್ಳುವುದೇನೂ ಬೇಡ. ಭಾರತವನ್ನು ಮುನ್ನಡೆಸಬೇಕಾದ ರಾಹುಲ್ ಗಾಂಧಿ ವಯನಾಡಿನಲ್ಲಿರಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ ಅವರು.

Rahul Gandhi: ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರ ತೊರೆಯಲಿದ್ದಾರೆ; ಸುಳಿವು ನೀಡಿದ ಸುಧಾಕರನ್
ಕೆ.ಸುಧಾಕರನ್-ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Jun 12, 2024 | 5:37 PM

ಕಲ್ಪೆಟ್ಟಾ ಜೂನ್ 12: ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿ ಮತ್ತು ವಯನಾಡ್ (Wayanad) ಕ್ಷೇತ್ರಗಳನ್ನು ಗೆದ್ದಿದ್ದ ರಾಹುಲ್ ಗಾಂಧಿ (Rahul Gandhi) ಈ ಎರಡು ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿ ಮತ್ತೊಂದು ಕ್ಷೇತ್ರವನ್ನು ತೊರೆಯಬೇಕಾಗಿದೆ. ರಾಹುಲ್ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ? ಯಾವುದನ್ನು ಬಿಟ್ಟು ಬಿಡುತ್ತಾರೆ ಎಂಬ ಪ್ರಶ್ನೆ ಮುಂದಿರುವಾಗಲೇ ರಾಹುಲ್ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಕೇರಳದ ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ( K Sudhakaran ) ಸುಳಿವು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರಾಯ್ ಬರೇಲಿಗೆ ತೆರಳಿದ ಒಂದು ದಿನದ ನಂತರ ಸುಧಾಕರನ್ ಅವರ ಈ ಹೇಳಿಕೆ ಬಂದಿದೆ.

ಕೆ ಸುಧಾಕರನ್ ಹೇಳಿದ್ದು ಏನು?

ವಯನಾಡಿನ ಕಲ್ಪೆಟ್ಟಾದಲ್ಲಿ ರಾಹುಲ್ ಗಾಂಧಿ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಲು ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ  ಸುಧಾಕರನ್  ರಾಷ್ಟ್ರವನ್ನು ಮುನ್ನಡೆಸಬೇಕಾದ ರಾಹುಲ್ ಗಾಂಧಿ ಅವರು ವಯನಾಡಿನಲ್ಲಿ ಉಳಿಯುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. “ಆದ್ದರಿಂದ, ನಾವು ದುಃಖಿಸಬಾರದು, ಪ್ರತಿಯೊಬ್ಬರೂ ಅದನ್ನು ಅರ್ಥಮಾಡಿಕೊಳ್ಳಬೇಕು. ಅವರಿಗೆ ತಮ್ಮ ಎಲ್ಲಾ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಬೇಕು ಎಂದು ಹೇಳಿದ್ದಾರೆ.

ವಯನಾಡ್ ಕ್ಷೇತ್ರದಲ್ಲಿ  3.6 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ರಾಹುಲ್ ಗಾಂಧಿ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಭರ್ಜರಿ ಗೆಲುವು ದಾಖಲಿಸಿದ್ದರು. ಚುನಾವಣಾ ಆಯೋಗದ ಪ್ರಕಾರ, ಅವರು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನ ಅನ್ನಿ ರಾಜಾ ಅವರನ್ನು 364422 ಮತಗಳ ಅಂತರದಿಂದ ರಾಹುಲ್  ಸೋಲಿಸಿದರು. ಚುನಾವಣಾ ಆಯೋಗದ ಪ್ರಕಾರ ಗಾಂಧಿ ಅವರು ಒಟ್ಟು 6,47,445 ಮತಗಳನ್ನು ಗಳಿಸಿದರೆ, ಅನ್ನಿ  ರಾಜಾ 2,83,023 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

2019 ರಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿಯವರು ಒಟ್ಟು 10,92,197 ಮತಗಳಲ್ಲಿ 7,06,367 ಮತಗಳನ್ನು ಪಡೆಯುವ ಮೂಲಕ ಭಾರಿ ಅಂತರದಿಂದ ಗೆದ್ದಿದ್ದರು.

ಇದನ್ನೂ ಓದಿ:  ನನಗೆ ದೇವರು ಮಾರ್ಗದರ್ಶನ ನೀಡುವುದಿಲ್ಲ, ನಾನು ಮನುಷ್ಯ: ರಾಹುಲ್ ಗಾಂಧಿ

2008 ರ ಡಿಲಿಮಿಟೇಶನ್ ನಂತರ ರಚನೆಯಾದ ಕ್ಷೇತ್ರವು 2009 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿದೆ. 2019 ರಲ್ಲಿ, ರಾಹುಲ್ ಗಾಂಧಿ ಶೇಕಡಾ 65 ರಷ್ಟು ಮತಗಳನ್ನು ಗಳಿಸಿ ಏಳು ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದರು. ಇಲ್ಲಿ ಅವರು ಸಿಪಿಐನ ಪಿಪಿ ಸುನೀರ್ ಅವರನ್ನು 4.31 ಲಕ್ಷ ಮತಗಳ ಅಂತರದಿಂದ ಸೋಲಿಸಿದರು.

ರಾಯ್ ಬರೇಲಿಯಲ್ಲಿ ರಾಹುಲ್ ಮತ್ತು ಅಮೇಠಿಯಲ್ಲಿ ಕೆಎಲ್ ಶರ್ಮಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ‘ಆಭಾರ್ ಸಭೆ’ ಆಯೋಜಿಸಲಾಗಿತ್ತು. ಯುಪಿಯಲ್ಲಿ ಕಾಂಗ್ರೆಸ್ ಆರು ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡಿದ್ದು  ಸಮಾಜವಾದಿ ಪಕ್ಷವು 80 ರಲ್ಲಿ 37 ಸ್ಥಾನಗಳನ್ನು ಗಳಿಸಿತು. ಬಿಜೆಪಿಯು 2019 ರ ಚುನಾವಣೆಯಲ್ಲಿ 64 ಸ್ಥಾನಗಳಿಂದ 33 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಹಿನ್ನಡೆ ಅನುಭವಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Wed, 12 June 24

ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ