ಯಾರು ಕೆಲಸ ಮಾಡುತ್ತಾರೆ, ಮಾಡಲ್ಲ ಎಂಬುವು ನನಗೆ ಗೊತ್ತಿದೆ.. ಕೆಲವರನ್ನು ಬದಲಾವಣೆ ಮಾಡಬೇಕೆಂದು ಇಲ್ಲಿಗೆ ಬಂದಿದ್ದೇನೆ -ಡಿಕೆಶಿ

ಅಧ್ಯಕ್ಷರಾದ ಬಳಿಕ ದೆಹಲಿಗೆ ಬಂದಿರಲಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಭೇಟಿಗೆ ಸಮಯ ಕೇಳಿದ್ದೀನಿ. ಸಮಯ ಕೊಟ್ಟರೆ ಭೇಟಿಯಾಗುತ್ತೇವೆ. ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಬದಲಾವಣೆ ಮನವಿ ಮಾಡುತ್ತೇನೆ...

ಯಾರು ಕೆಲಸ ಮಾಡುತ್ತಾರೆ, ಮಾಡಲ್ಲ ಎಂಬುವು ನನಗೆ ಗೊತ್ತಿದೆ.. ಕೆಲವರನ್ನು ಬದಲಾವಣೆ ಮಾಡಬೇಕೆಂದು ಇಲ್ಲಿಗೆ ಬಂದಿದ್ದೇನೆ -ಡಿಕೆಶಿ
ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Jun 21, 2021 | 1:48 PM

ದೆಹಲಿ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತಣ್ಣಗಾದ್ರೆ. ಇತ್ತ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಮಬ ವಿಚಾರ ತಾರಕಕ್ಕೇರಿದೆ. ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ಭಾನುವಾರ ದೆಹಲಿಗೆ ತೆರಳಿದ್ದಾರೆ. ಈ ದೆಹಲಿ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈಗ ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಅಧ್ಯಕ್ಷರಾದ ಬಳಿಕ ದೆಹಲಿಗೆ ಬಂದಿರಲಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಭೇಟಿಗೆ ಸಮಯ ಕೇಳಿದ್ದೀನಿ. ಸಮಯ ಕೊಟ್ಟರೆ ಭೇಟಿಯಾಗುತ್ತೇನೆ. ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಮನವಿ ಮಾಡುತ್ತೇನೆ. ಒಂದು ವರ್ಷದಿಂದ ಎಲ್ಲವನ್ನೂ ಗಮನಿಸಿದ್ದೇನೆ. ಯಾರು ಕೆಲಸ ಮಾಡುತ್ತಾರೆ ಮಾಡಲ್ಲ ಅಂತ ಗೊತ್ತಿದೆ. ಕೆಲವರನ್ನು ಬದಲಾವಣೆ ಮಾಡಬೇಕು ಎಂದು ತೀರ್ಮಾನಿದ್ದೇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ನಡೆಸಲು ಬರಲ್ಲವೆಂದು ಸ್ಪಷ್ಟವಾಗಿದೆ. ಸರ್ಕಾರದ ಕಾರ್ಯವೈಖರಿ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಚುನಾವಣೆ ಮೊದಲು ಗೆಲ್ಲಬೇಕು. ಸಿಎಂ‌ ಸ್ಥಾನ ಬಗ್ಗೆ ಮಾತನಾಡೊಕೆ ಇದು ಸಮಯವಲ್ಲ. ಬಿಜೆಪಿಯವರು ಸಿಎಂ ಸ್ಥಾನದ ಬಗ್ಗೆ ಮಾತನಾಡಬೇಕು. ನಮ್ಮ ಪಕ್ಷದವರಲ್ಲ. ಸಿಎಂ‌ ಸ್ಥಾನದ ಬಗ್ಗೆ ದೆಹಲಿ ಹೈಕಮಾಂಡ್ ನಿರ್ಧಾರ ಮಾಡುತ್ತಾರೆ. ಸದ್ಯಕ್ಕೆ ಈ ಸ್ಥಾನ ಖಾಲಿ ಇಲ್ಲ. ಖಾಲಿ ಇಲ್ಲದೆ ಇರುವ ಸ್ಥಾನಕ್ಕೆ ನಮಗ್ಯಾಕೆ ಪೈಪೋಟಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿ ಕೊಡಲ್ಲ. ನನ್ನ ಹೆಸರನ್ನು ಯಾರೂ ಹೇಳುವುದು ಬೇಡ. ಮೊದಲು ಪಕ್ಷ ಕಟ್ಟಬೇಕು, ಚುನಾವಣೆ ಗೆಲ್ಲಬೇಕು. ನಾವು ಈಗ ಕೊರೊನಾ ಸಂಕಷ್ಟದಲ್ಲಿ ಜನರೊಂದಿಗೆ ಇರೋಣ ಎಂದು ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿಯಲ್ಲಿ ಬ್ಲ್ಯಾಕ್ಮೇಲ್ ನಡೆಯುತ್ತಿದೆ ಶಾಸಕ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಭಾರತೀಯ ಜನತಾ ಪಕ್ಷದಲ್ಲಿ ಬ್ಲ್ಯಾಕ್ಮೇಲ್ ನಡೆಯುತ್ತಿದೆ. ತಮಿಳುನಾಡಿನ ಮಾಜಿ ಸಚಿವ ಮಣಿಕಂಠನ್ ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಚಿವನ ಬಂಧನವಾಗಿದೆ. ಆದರೆ, ರಮೇಶ್ ಜಾರಕಿಹೊಳಿಯನ್ನೂ ಈವರೆಗೆ ಬಂಧಿಸಿಲ್ಲ. ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆಗೆ ಕಳಂಕ ಬಂದಿದೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯನ್ನು ಬಂಧಿಸಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ. ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಅರ್ಜಿ ಹಾಕಲಿ ಮರುಸೇರ್ಪಡೆ ಬಗ್ಗೆ ಆನಂತರ ನೋಡುತ್ತೇವೆ ಎಂದ ಡಿಕೆಶಿ ಹೇಳಿದರು.

ಈಗಲೂ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ತನಿಖೆ ನಡೆಸಲಿ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಬಿಜೆಪಿಯವರು ಅಟ್ಯಾಕ್ ಮಾಡಿದ್ದರು. ಆಗ ಕೆಲ ಆರೋಪಗಳು ಬಂದಾಗ ಸಿಬಿಐ ತನಿಖೆಗೆ ವಹಿಸಿದ್ದರು. ಈಗಲೂ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ತನಿಖೆ ನಡೆಸಲಿ. ಸಿಬಿಐ ತನಿಖೆಗೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಗಿತು ಈಗ ‘ಕೈ’ ಪಾಳಯದಲ್ಲೂ ಶುರುವಾಯ್ತು ನಾಯಕತ್ವ ಕದನ.. ಜಮೀರ್ ವಿರುದ್ಧ ಹೈಕಮಾಂಡ್​ಗೆ ಡಿಕೆಶಿ ದೂರು?

Published On - 1:21 pm, Mon, 21 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್