Krishna Janmabhoomi case ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ ಪ್ರಕರಣ: 4 ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಸೂಚನೆ
ಹಿಂದೂಗಳ ಪ್ರಕಾರ 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಈ ಮಸೀದಿಯನ್ನು ಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರ ಕೇಶವ್ ದೇವ್ ದೇವಾಲಯದ 13.37 ಎಕರೆ ಆವರಣದಲ್ಲಿ ನಿರ್ಮಿಸಲಾಗಿದೆ.
ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದ (Krishna Janmabhoomi-Shahi Idgah Mosque case) ಎಲ್ಲಾ ಅರ್ಜಿ ಇತ್ಯರ್ಥಗೊಳಿಸಲು ಮಥುರಾ ನ್ಯಾಯಾಲಯಕ್ಕೆ(Mathura court) ಅಲಹಾಬಾದ್ ಹೈಕೋರ್ಟ್ (Allahabad High Court) ಗುರುವಾರ ನಾಲ್ಕು ತಿಂಗಳ ಕಾಲಾವಕಾಶ ನೀಡಿದೆ. ಹಿಂದೂ ಸೇನಾ ಮುಖ್ಯಸ್ಥ ಮನೀಶ್ ಯಾದವ್ ಅವರು ವಕೀಲ ಮಹೇಂದ್ರ ಪ್ರತಾಪ್ ಸಿಂಗ್ ಮೂಲಕ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ದೇಶನ ನೀಡಿದೆ. ಮಥುರಾದಲ್ಲಿ ಶಾಹಿ ಈದ್ಗಾ ಮಸೀದಿ ಇರುವ ಜಾಗದ ಬಗ್ಗೆ ವಿವಾದವಿದ್ದು, ಇದು ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿದೆ. ಹಿಂದೂಗಳ ಪ್ರಕಾರ 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಈ ಮಸೀದಿಯನ್ನು ಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರ ಕೇಶವ್ ದೇವ್ ದೇವಾಲಯದ 13.37 ಎಕರೆ ಆವರಣದಲ್ಲಿ ನಿರ್ಮಿಸಲಾಗಿದೆ. ಮಸೀದಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮಥುರಾ ನ್ಯಾಯಾಲಯದಲ್ಲಿ ಹಲವು ದಾವೆಗಳನ್ನು ಹೂಡಲಾಗಿದೆ.
Published On - 1:51 pm, Thu, 12 May 22