AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು.

Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್
ಕೃಷ್ಣ ಜನ್ಮಭೂಮಿ
ರಶ್ಮಿ ಕಲ್ಲಕಟ್ಟ
|

Updated on:Oct 11, 2023 | 4:13 PM

Share

ದೆಹಲಿ ಅಕ್ಟೋಬರ್ 11: ಶಾಹಿ ಈದ್ಗಾ ಮಸೀದಿಯ (Shahi Idgah Masjid) ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಅಲಹಾಬಾದ್ ಹೈಕೋರ್ಟ್ (Allahabad HC) ಬುಧವಾರ ತಿರಸ್ಕರಿಸಿದೆ. ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ. ಇಂದು ಬುಧವಾರ ಮಧ್ಯಾಹ್ನ 2 ಗಂಟೆ ನ್ಯಾಯಾಲಯದ ತೀರ್ಪು ಬಂದಿದೆ.

ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಕೀಲ ಮೆಹಕ್ ಮಹೇಶ್ವರಿ ಅವರು 2020ರಲ್ಲಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಹಿಂದೂಗಳು ವಿವಾದಿತ ಸ್ಥಳದಲ್ಲಿ ಪೂಜೆ ಸಲ್ಲಿಸಬೇಕು. ಪಿಐಎಲ್ ಅದರ ಪ್ರಸ್ತುತ ರೂಪದಲ್ಲಿ ವಿವಾದಿತ ಆವರಣದ ವೈಜ್ಞಾನಿಕ ತನಿಖೆಯನ್ನು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ನಡೆಸಬೇಕು ಎಂದು ಒತ್ತಾಯಿಸಿದೆ.

ಹಿಂದೂ ಕಡೆಯವರ ವಾದವೇನು?

ಈ ಹಿಂದೆ ವಿವಾದಿತ ಸ್ಥಳದಲ್ಲಿ ದೇವಸ್ಥಾನವಿದ್ದು, ಅದನ್ನು ಕೆಡವಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಪರ ಇರುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೇಳಲಾಗಿದೆ. ಈಗ ಮಸೀದಿ ಇರುವ ಸ್ಥಳದಲ್ಲಿ ದ್ವಾಪರ ಯುಗದಲ್ಲಿ ಕಂಸನ ಕಾರಾಗೃಹವಿದ್ದು, ಇಲ್ಲಿ ಕಂಸನು ಶ್ರೀಕೃಷ್ಣನ ತಂದೆ-ತಾಯಿಗಳನ್ನು ಬಂಧಿಸಿದ್ದನು . ಈ ಜೈಲಿನಲ್ಲಿಯೇ ಶ್ರೀಕೃಷ್ಣನ ಹುಟ್ಟಿದ್ದಾನೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.  ಆದ್ದರಿಂದ ಇದು ದೇವರ ನಿಜವಾದ ಜನ್ಮಸ್ಥಳವಾಗಿದೆ.

ಇದನ್ನೂ ಓದಿ: ಹೃದಯ ಬಡಿತವಿರುವ ಭ್ರೂಣವನ್ನು ತೆಗೆಯಲು ಯಾರು ಬಯಸುತ್ತಾರೆ?: ಸುಪ್ರೀಂಕೋರ್ಟ್

ಒಮ್ಮೆ ಅರ್ಜಿ ತಿರಸ್ಕೃತಗೊಂಡಿತ್ತು

ವಿಚಾರಣೆ ವೇಳೆ ವಕೀಲರು ಗೈರು ಹಾಜರಾದ ಕಾರಣ ಈ ಅರ್ಜಿಯನ್ನು ಈಗಾಗಲೇ ಒಮ್ಮೆ ತಿರಸ್ಕರಿಸಲಾಗಿದೆ. ಈ ಪಿಐಎಲ್ ಅನ್ನು 19 ಜನವರಿ 2021 ರಂದು ತಿರಸ್ಕರಿಸಲಾಯಿತು. ಹೈಕೋರ್ಟ್ ಈ PIL ಅನ್ನು ಮಾರ್ಚ್ 2022 ರಲ್ಲಿ ಮರು-ಸಂಗ್ರಹಿಸಿತ್ತು. ಅದನ್ನು ಮತ್ತೊಮ್ಮೆ ವಿಚಾರಣೆಗೆ ಹಾಜರುಪಡಿಸಲು ಹೈಕೋರ್ಟ್ ಸೂಚನೆಗಳನ್ನು ನೀಡಿತ್ತು.

ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಈ ಹಿಂದೆ, ಶ್ರೀ ಕೃಷ್ಣ ಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆಯನ್ನು ಮುಂದುವರಿಸಲು ಅನುಕೂಲವಾಗುವ ಮಹತ್ವದ ಬೆಳವಣಿಗೆಯಲ್ಲಿ, ಅಲಹಾಬಾದ್ ಹೈಕೋರ್ಟ್, ಮೇ 1, 2023 ರಂದು ಯುಪಿ ಸುನ್ನಿ ವಕ್ಫ್ ಬೋರ್ಡ್ ಮತ್ತು ಶಾಹಿ ಈದ್ಗಾ ಟ್ರಸ್ಟ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು. ಅರ್ಜಿಯು ಮಥುರಾ ಜಿಲ್ಲಾ ನ್ಯಾಯಾಧೀಶರ ಮೇ 2022 ರ ತೀರ್ಪನ್ನು ವಿರೋಧಿಸಿತು, ಇದು ಅರ್ಜಿದಾರ ದೇವತೆ ಸಲ್ಲಿಸಿದ ಮೊಕದ್ದಮೆಯ ನಿರ್ವಹಣೆಯನ್ನು ದೃಢಪಡಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Wed, 11 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ