AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmabhoomi Case: ಮಥುರಾ ಕೋರ್ಟ್​ನಿಂದ ಇಂದು ಕೃಷ್ಣ ಜನ್ಮಭೂಮಿ ಪ್ರಕರಣದ ವಿಚಾರಣೆ

ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿತ್ತು.

Krishna Janmabhoomi Case: ಮಥುರಾ ಕೋರ್ಟ್​ನಿಂದ ಇಂದು ಕೃಷ್ಣ ಜನ್ಮಭೂಮಿ ಪ್ರಕರಣದ ವಿಚಾರಣೆ
ಕೃಷ್ಣಜನ್ಮಭೂಮಿ
TV9 Web
| Edited By: |

Updated on:May 26, 2022 | 12:53 PM

Share

ಆಗ್ರಾ: ರಾಮಜನ್ಮಭೂಮಿ (Ram Janmabhoomi) ವಿವಾದದ ಬೆನ್ನಲ್ಲೇ ಕೃಷ್ಣಜನ್ಮಭೂಮಿ ವಿವಾದ  (Krishna Janmabhoomi) ಇದೀಗ ಭುಗಿಲೆದ್ದಿದೆ. ಕೃಷ್ಣಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಯ ವಿವಾದಕ್ಕೆ ಸಂಬಂಧಿಸಿದಂತೆ ಮಥುರಾದ ಸಿವಿಲ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ. ಶ್ರೀ ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕುವಂತೆ ಕೋರಿ ಸೆಪ್ಟೆಂಬರ್ 2020ರಲ್ಲಿ ಸಲ್ಲಿಸಲಾದ ಮನವಿಯ ವಿಚಾರಣೆಯನ್ನು ಮಥುರಾದ (Mathura) ನ್ಯಾಯಾಲಯದ ನ್ಯಾಯಾಧೀಶರು ಇಂದು ಕೈಗೆತ್ತಿಕೊಳ್ಳಲಿದ್ದಾರೆ.

ಈ ಪ್ರಕರಣದ ತಾತ್ಕಾಲಿಕ ತಡೆಯಾಜ್ಞೆ ಅರ್ಜಿಗಳು ಸೇರಿದಂತೆ ಎಲ್ಲ ಬಾಕಿ ಪ್ರಕರಣಗಳನ್ನು 4 ತಿಂಗಳೊಳಗೆ ಇತ್ಯರ್ಥ ಮಾಡಬೇಕೆಂದು ಕೆಳ ನ್ಯಾಯಾಲಯಕ್ಕೆ ಮೇ 12ರಂದು ಅಲಹಾಬಾದ್ ಹೈಕೋರ್ಟ್​ ನಿರ್ದೇಶನ ನೀಡಿತ್ತು. ತಾನು ಶ್ರೀಕೃಷ್ಣನ ವಂಶಸ್ಥರೆಂದು ಹೇಳಿಕೊಂಡ ಲಕ್ನೋ ಮೂಲದ ಮನೀಶ್ ಯಾದವ್ ಕತ್ರಾ ಕೇಶವ ದೇವ್ ದೇವಸ್ಥಾನದ 13.37 ಎಕರೆ ಆವರಣದಳಗಿನ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಮಸೀದಿಯನ್ನು ಸ್ಥಳಾಂತರಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿಯನ್ನು ಅತಿಕ್ರಮಿಸಿ ಮಸೀದಿ ನಿರ್ಮಿಸಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಶುದ್ಧೀಕರಣ ವಿಧಿಗಳನ್ನು ನೆರವೇರಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಮಹಾಸಭಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿಯೇ ಶಾಹಿ ಈದ್ಗಾ ಮಸೀದಿಯೂ ಇದೆ. ಶಾಹಿ ಈದ್ಗಾ ಮಸೀದಿಯ ಆಡಳಿತ ಸಮಿತಿಯು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ
Image
Krishna Janmabhoomi Case: ಮಥುರಾ ಕೃಷ್ಣ ಜನ್ಮಭೂಮಿ ವಿವಾದ; ವಿಚಾರಣೆ ಮುಂದೂಡಿದ ನ್ಯಾಯಾಲಯ
Image
Krishna Janmabhoomi Case ಮಥುರಾದಲ್ಲಿ ‘ಕೃಷ್ಣ ಜನ್ಮ ಭೂಮಿಯಲ್ಲಿ ನಿರ್ಮಿಸಿರುವ ಮಸೀದಿ ತೆರವುಗೊಳಿಸಿ’ ಎಂಬ ಮನವಿ ಸ್ವೀಕರಿಸಿದ ನ್ಯಾಯಾಲಯ
Image
Krishna Janmabhoomi case ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ ಪ್ರಕರಣ: 4 ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಸೂಚನೆ

ಇದನ್ನೂ ಓದಿ: Krishna Janmabhoomi Case ಮಥುರಾದಲ್ಲಿ ‘ಕೃಷ್ಣ ಜನ್ಮ ಭೂಮಿಯಲ್ಲಿ ನಿರ್ಮಿಸಿರುವ ಮಸೀದಿ ತೆರವುಗೊಳಿಸಿ’ ಎಂಬ ಮನವಿ ಸ್ವೀಕರಿಸಿದ ನ್ಯಾಯಾಲಯ

ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿತ್ತು. 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಈ ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೊಕದ್ದಮೆಯಲ್ಲಿ ಹೇಳಲಾಗಿದೆ. ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯ ಬಳಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Thu, 26 May 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್