ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮೀಕ್ಷೆ ತಡೆಯಾಜ್ಞೆ ಆದೇಶ ವಿಸ್ತರಿಸಿದ ಸುಪ್ರೀಂ

ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲ-ಕಮಿಷನರ್ (Advocate Commissioner) ಮೂಲಕ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜ.16 ತಡೆ ನೀಡಿತ್ತು. ಇದೀಗ ಆ ತಡೆಯಾಜ್ಞೆ ಆದೇಶವನ್ನು ವಿಸ್ತರಿಸಿದೆ. ಹಾಗೂ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದ ವಿಷಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​​​ ಮುಂದೂಡಿದೆ.

ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮೀಕ್ಷೆ ತಡೆಯಾಜ್ಞೆ ಆದೇಶ ವಿಸ್ತರಿಸಿದ ಸುಪ್ರೀಂ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 29, 2024 | 2:30 PM

ಮಥುರಾ, ಜ.29: ಮಥುರಾದ ಶ್ರೀಕೃಷ್ಣ ಜನ್ಮಭೂಮಿ (Krishna Janmabhoomi ) ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲ-ಕಮಿಷನರ್ (Advocate Commissioner) ಮೂಲಕ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜ.16ರಂದು ತಡೆ ನೀಡಿತ್ತು. ಇದೀಗ ಆ ತಡೆಯಾಜ್ಞೆ ಆದೇಶವನ್ನು ವಿಸ್ತರಿಸಿದೆ. ಹಾಗೂ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದ ವಿಷಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​​​ ಮುಂದೂಡಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಲಿಖಿತ ದಾಖಲೆಗಳನ್ನು ಸಲ್ಲಿಸುವಂತೆ ಸಂಘಟನೆಗಳಿಗೆ ಆದೇಶವನ್ನು ನೀಡಿದೆ.

ಶಾಹಿ ಈದ್ಗಾ ಮಸೀದಿಯ ಆವರಣವನ್ನು ಸಮೀಕ್ಷೆ ಮಾಡುವಂತೆ ಹಿಂದೂ ಸಂಘಟನೆಗಳು ಅಲಹಾಬಾದ್ ಹೈಕೋರ್ಟ್​​ಗೆ ಮನವಿಯನ್ನು ಸಲ್ಲಿಸಿತ್ತು. ಇದಕ್ಕಾಗಿ ಅಡ್ವೋಕೇಟ್ ಕಮಿಷನರ್‌ರನ್ನು ನೇಮಕ ಮಾಡಬೇಕು ಎಂಬ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅಲಹಾಬಾದ್ ಹೈಕೋರ್ಟ್ ಅರ್ಜಿನ ಪರಿಗಣಿಸಿ ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಪರಿಶೀಲಿಸಲು ಆಯೋಗವನ್ನು ನೇಮಿಸಲು ಆದೇಶವನ್ನು ನೀಡಿತ್ತು.

ಅಲಹಾಬಾದ್ ಹೈಕೋರ್ಟ್​​ನ ಈ ಆದೇಶವನ್ನು ಪ್ರಶ್ನಿಸಿ ಶಾಹಿ ಈದ್ಗಾ ಮಸೀದಿ ಟ್ರಸ್ಟ್​​​ ಹಾಗೂ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಅಲಹಾಬಾದ್ ಹೈಕೋರ್ಟ್​​ನ ಆದೇಶಕ್ಕೆ ತಡೆ ನೀಡಿತ್ತು. ಸ್ಥಳೀಯ ಆಯುಕ್ತರ ನೇಮಕವನ್ನು ಕೋರಿ ಸಲ್ಲಿಸಲಾದ ಅರ್ಜಿಯು ಅಸ್ಪಷ್ಟವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 23ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ಹೇಳಿತ್ತು.

ಇನ್ನು ಸುಪ್ರೀಂ, ಅಲಹಾಬಾದ್ ಹೈಕೋರ್ಟ್ ಯಾವ ಆಧಾರದ ಮೇಲೆ ಈ ಆದೇಶವನ್ನು ನೀಡಿದೆ. ನ್ಯಾಯಾಲಯದ ಮೂಲಕ ಆಯ್ಕೆಯಾಗಿರುವ ಆಯುಕ್ತರ ನೇಮಕಾತಿ ಅಸ್ಪಷ್ಟವಾಗಿದೆ. ಮತ್ತು ಆ ಆದೇಶ ಬಹಳ ನಿರ್ದಿಷ್ಟವಾಗಿರಬೇಕು. ಈ ಸಮೀಕ್ಷೆಯನ್ನು ಮಾಡಲು ನ್ಯಾಯಾಲಯಕ್ಕೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಕೃಷ್ಣ ಜನ್ಮಭೂಮಿ ವಿವಾದ ವಿಚಾರಣೆಯು ಅಲಹಾಬಾದ್ ಹೈಕೋರ್ಟ್​​ನಲ್ಲಿಯೇ ನಡೆಸಲಾಗುವುದು. ಈ ಬಗ್ಗೆ ಹಿಂದೂ ಸಂಘಟನೆಗಳಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿತ್ತು. ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹಾಗೂ ಲಿಖಿತ ದಾಖಲೆಗಳು ಬೇಕಾಗಿದೆ. ಆ ಕಾರಣದಿಂದ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆಯಾಜ್ಞೆಯನ್ನು ವಿಸ್ತರಿಸಲಾಗುವುದು ಎಂದು ಸುಪ್ರೀಂ ಹೇಳಿದೆ.

ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಭೂವಿವಾದ

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಭೂವಿವಾದ ದಶಕಗಳ ಹಿಂದಿನದ್ದು, ರಾಮಜನ್ಮಭೂಮಿಯ ನಂತರ ಉತ್ತರ ಪ್ರದೇಶದ ಹೆಚ್ಚು ಚರ್ಚೆಗೆ ಬಂದ ಮತ್ತೊಂದು ವಿವಾದ ಮಥುರಾದ ಕೃಷ್ಣ ಜನ್ಮಭೂಮಿ. ರಾಮಜನ್ಮಭೂಮಿಯ ವಿವಾದ ಕೊನೆಗೊಂಡು ಜನವರಿ 22ಕ್ಕೆ ಭವ್ಯ ರಾಮಮಂದಿರ ಉದ್ಘಾಟನೆಗೊಂಡಿದೆ. ಇದೀಗ ಕೃಷ್ಣ ಜನ್ಮಭೂಮಿ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಮಥುರಾದ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿರುವ ಶಾಹಿ ಈದ್ಗಾ ಇದು ಒಂದು ಕಾಲದಲ್ಲಿ ಹಿಂದೂ ದೇವಾಲಯವಾಗಿತ್ತು ಎಂಬುದಕ್ಕೆ ಅನೇಕ ಸಾಕ್ಷಿಗಳು ಪತ್ತೆಯಾಗಿದೆ. ಶ್ರೀ ಕೃಷ್ಣನ ಜನ್ಮಸ್ಥಳವು ಮಸೀದಿಯ ಕೆಳಗೆ ಇದೆ ಮತ್ತು ಮಸೀದಿಯು ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗಿದೆ.

ಈ ಕಾರಣಕ್ಕೆ ಮಸೀದಿ ಜಾಗ ನಮ್ಮದು ಎಂದು ಹಿಂದೂ ಸಂಘಟನೆಗಳು ಕೋರ್ಟ್​​​ನಲ್ಲಿ ಮನವಿ ಸಲ್ಲಿಸಿದೆ. ಈ ಅರ್ಜಿಗೆ ಸಂಬಂಧಿಸಿದೆಂತೆ ಕಳೆದ ವರ್ಷ ಡಿಸೆಂಬರ್ 14 ರಂದು, ಅಲಹಾಬಾದ್ ಹೈಕೋರ್ಟ್ ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ-ಈದ್ಗಾ ಮಸೀದಿ ಆವರಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸುವಂತೆ ಹಿಂದೂ ಕಡೆಯ ಮನವಿಗೆ ಅನುಮತಿ ನೀಡಿತು. ಮಸೀದಿಯ 13.37 ಎಕರೆ ಭೂಮಿಯಲ್ಲಿ ಮಥುರಾದ ಕೃಷ್ಣ ಜನ್ಮಭೂಮಿ ದೇವಾಲಯ ಮರುಸ್ಥಾಪಿಸಲು ಮತ್ತು ಅದರ ಕೆಳಗೆ ಶ್ರೀಕೃಷ್ಣನ ಜನ್ಮಸ್ಥಳವಿದೆ ಎಂಬ ವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ಮೇಲೆ ಹೈಕೋರ್ಟ್ ಈ ಆದೇಶವನ್ನು ನೀಡಿದೆ. ಇದೀಗ ಕಳೆದ ವರ್ಷ ಡಿಸೆಂಬರ್ 14 ರಂದು, ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್​​ ತಡೆ ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:22 pm, Mon, 29 January 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ