AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಮಥುರಾದ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲ-ಕಮಿಷನರ್ ಮೂಲಕ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಅಕ್ಷಯ್​ ಪಲ್ಲಮಜಲು​​
|

Updated on:Jan 16, 2024 | 12:13 PM

Share

ದೆಹಲಿ,ಜ.16: ಮಥುರಾದ ಕೃಷ್ಣ ಜನ್ಮಭೂಮಿ (Krishna Janmabhoomi ) ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲ-ಕಮಿಷನರ್ (Advocate Commissioner) ಮೂಲಕ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು (ಜ.16) ತಡೆ ನೀಡಿದೆ. ಶಾಹಿ ಈದ್ಗಾ ಆವರಣದ ಸಮೀಕ್ಷೆ ನಡೆಸಲು ನ್ಯಾಯಲಯದ ನಿಗಾದಲ್ಲಿರುವ ಅಡ್ವೋಕೇಟ್ ಕಮಿಷನರ್‌ರನ್ನು ನೇಮಕಾ ಮಾಡಬೇಕು ಎಂದು ಅಲಹಾಬಾದ್ ಹೈಕೋರ್ಟ್​​​ಗೆ ಮನವಿಯನ್ನು ಮಾಡಲಾಗಿತ್ತು. ಮನವಿಯ ಮೇರೆಗೆ ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಪರಿಶೀಲಿಸಲು ಆಯೋಗವನ್ನು ನೇಮಿಸಲು ಅಲಹಾಬಾದ್ ಹೈಕೋರ್ಟ್ ಆದೇಶವನ್ನು ನೀಡಿತ್ತು.

ಅಲಹಾಬಾದ್ ಹೈಕೋರ್ಟ್​​ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮುಸ್ಲಿಂ ಸಂಘಟನೆಗಳು ಅರ್ಜಿಯನ್ನು ಸಲ್ಲಿಸಿತ್ತು. ಇದೀಗ ಹೈಕೋರ್ಟ್​​ನ ಈ ಆದೇಶವನ್ನು ಸುಪ್ರೀಂ ಕೋರ್ಟ್​​​​ ತಡೆಹಿಡಿದಿದೆ. ಸ್ಥಳೀಯ ಆಯುಕ್ತರ ನೇಮಕವನ್ನು ಕೋರಿ ಸಲ್ಲಿಸಲಾದ ಅರ್ಜಿಯು “ಅಸ್ಪಷ್ಟವಾಗಿದೆ” ಎಂದು ಸುಪ್ರೀಂ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 23ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಶಾಹಿ ಮಸೀದಿ ಈದ್ಗಾ ವ್ಯವಸ್ಥಾಪನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಪೀಠವು ಆಲಿಸಿತು.  ನ್ಯಾಯಾಲಯದ ಮೂಲಕ ಆಯ್ಕೆಯಾಗಿರುವ ಆಯುಕ್ತರ ನೇಮಕಾತಿ ಅಸ್ಪಷ್ಟವಾಗಿದೆ. ಈ ಆದೇಶ ಯಾವ ಉದ್ದೇಶದ ಮೇಲೆ ನೀಡಲಾಗಿದೆ. ಮತ್ತು ಆ ಆದೇಶ ಬಹಳ ನಿರ್ದಿಷ್ಟವಾಗಿರಬೇಕು. ಈ ಸಮೀಕ್ಷೆಯನ್ನು ಮಾಡಲು ನ್ಯಾಯಾಲಯಕ್ಕೆ ಬಿಡಲು ಸಾಧ್ಯವಿಲ್ಲ ಎಂದು ಪೀಠವು ಹಿಂದೂ ಸಂಘಟನೆಗಳ ಪರವಾಗಿರುವ ಹಿರಿಯ ವಕೀಲ ಶ್ಯಾಮ್ ದಿವಾನ್‌ಗೆ ತಿಳಿಸಿದೆ.

ಇನ್ನು ಕೃಷ್ಣ ಜನ್ಮಭೂಮಿ ವಿವಾದ ವಿಚಾರಣೆಯು ಅಲಹಾಬಾದ್ ಹೈಕೋರ್ಟ್​​ನಲ್ಲಿಯೇ ನಡೆಸಲಾಗುವುದು. ಈ ಬಗ್ಗೆ ಹಿಂದೂ ಸಂಘಟನೆಗಳಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ಈ ಅರ್ಜಿ ವಿಚಾರಣೆಯನ್ನು ಜನವರಿ 23ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ ಏನು?

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಭೂವಿವಾದ ದಶಕಗಳ ಹಿಂದಿನದ್ದು, ರಾಮಜನ್ಮಭೂಮಿಯ ನಂತರ ಉತ್ತರ ಪ್ರದೇಶದ ಹೆಚ್ಚು ಬಲ ಪಡೆದು ಮತ್ತೊಂದು ವಿವಾದ ಮಥುರಾದ ಕೃಷ್ಣ ಜನ್ಮಭೂಮಿ. ರಾಮಜನ್ಮಭೂಮಿಯ ವಿವಾದ ಕೊನೆಗೊಂಡು ಜನವರಿ 22ಕ್ಕೆ ಭವ್ಯ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಇದೀಗ ಕೃಷ್ಣ ಜನ್ಮಭೂಮಿ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಮಥುರಾದ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿರುವ ಶಾಹಿ ಈದ್ಗಾ ಇದು ಒಂದು ಕಾಲದಲ್ಲಿ ಹಿಂದೂ ದೇವಾಲಯವಾಗಿತ್ತು ಎಂಬುದಕ್ಕೆ ಅನೇಕ ಸಾಕ್ಷಿಗಳು ಕಂಡುಕೊಂಡಿದೆ. ಶ್ರೀ ಕೃಷ್ಣನ ಜನ್ಮಸ್ಥಳವು ಮಸೀದಿಯ ಕೆಳಗೆ ಇದೆ ಮತ್ತು ಮಸೀದಿಯು ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗಿದೆ.

ಈ ಕಾರಣಕ್ಕೆ ಮಸೀದಿ ಜಾಗ ನಮ್ಮದು ಎಂದು ಹಿಂದೂ ಸಂಘಟನೆಗಳು ಕೋರ್ಟ್​​​ನಲ್ಲಿ ಮನವಿ ಸಲ್ಲಿಸಿದೆ. ಈ ಅರ್ಜಿಗೆ ಸಂಬಂಧಿಸಿದೆಂತೆ ಕಳೆದ ವರ್ಷ ಡಿಸೆಂಬರ್ 14 ರಂದು, ಅಲಹಾಬಾದ್ ಹೈಕೋರ್ಟ್ ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ-ಈದ್ಗಾ ಮಸೀದಿ ಆವರಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸುವಂತೆ ಹಿಂದೂ ಕಡೆಯ ಮನವಿಗೆ ಅನುಮತಿ ನೀಡಿತು.

ಮಸೀದಿಯ 13.37 ಎಕರೆ ಭೂಮಿಯಲ್ಲಿ ಮಥುರಾದ ಕೃಷ್ಣ ಜನ್ಮಭೂಮಿ ದೇವಾಲಯ ಮರುಸ್ಥಾಪಿಸಲು ಮತ್ತು ಅದರ ಕೆಳಗೆ ಶ್ರೀಕೃಷ್ಣನ ಜನ್ಮಸ್ಥಳವಿದೆ ಎಂಬ ವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ಮೇಲೆ ಹೈಕೋರ್ಟ್ ಈ ಆದೇಶವನ್ನು ನೀಡಿದೆ. ಇದೀಗ ಕಳೆದ ವರ್ಷ ಡಿಸೆಂಬರ್ 14 ರಂದು, ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್​​ ತಡೆಹಿಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:22 am, Tue, 16 January 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್