ಕೃಷ್ಣ ಜನ್ಮಭೂಮಿ ವಿವಾದ: ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸರ್ವೇಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ
ಶಾಹಿ-ಈದ್ಗಾ ಮಸೀದಿಯ ಸರ್ವೇ ನಡೆಸಲು ಅಲಹಾಬಾದ್ ಹೈಕೋರ್ಟ್ ನ್ಯಾಯಾಲಯದ ಆಯುಕ್ತರ ನೇಮಕಕ್ಕೆ ಆದೇಶ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ಗೆ ಮನವಿಯನ್ನು ಮಾಡಲಾಗಿತ್ತು. ಆದರೆ ಇದೀಗ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ದೆಹಲಿ. ಡಿ.15: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ, ಶಾಹಿ-ಈದ್ಗಾ ಮಸೀದಿಯ ಸರ್ವೇ ನಡೆಸಲು ಅಲಹಾಬಾದ್ ಹೈಕೋರ್ಟ್ ನ್ಯಾಯಾಲಯದ ಆಯುಕ್ತರ ನೇಮಕಕ್ಕೆ ಆದೇಶ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ಗೆ ಮನವಿಯನ್ನು ಮಾಡಲಾಗಿತ್ತು. ಆದರೆ ಇದೀಗ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನೆನ್ನೆ (ಡಿ.14) ಅಲಹಾಬಾದ್ ಹೈಕೋರ್ಟ್ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಸಂಕೀರ್ಣವನ್ನು ಸರ್ವೇ ಮಾಡಲು ಆದೇಶವನ್ನು ನೀಡಿದೆ. ಈ ಸರ್ವೇ ನಡೆಸಲು ಹೈಕೋರ್ಟಿನ ಆಯಕ್ತರುಗಳನ್ನು ನೇಮಕಾ ಮಾಡಿತ್ತು. ಆದರೆ ಈ ಸರ್ವೇ ಆದೇಶವನ್ನು ತಡೆಹಿಡಿಯಬೇಕು ಎಂದು ಮುಸ್ಲಿಂ ಸಂಘಟನೆ ಸುಪ್ರೀಂಗೆ ಮನವಿ ಸಲ್ಲಿಸಿತ್ತು. ಆದರೆ ಈ ಆದೇಶವನ್ನು ತಡೆಹಿಡಿಯುವುದಿಲ್ಲ. ಹಾಗೂ ಈ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾವಣೆ ಮಾಡಬೇಕು ಎಂಬ ಅರ್ಜಿಯನ್ನು ನಿರಾಕರಿಸಿದೆ.
ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದುವರಿಸುತ್ತದೆ ಎಂದು ಸುಪ್ರೀಂ ಹೇಳಿದೆ. ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ನಿನ್ನೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.ಗುರುವಾರ ನ್ಯಾಯಾಲಯವು ವಕೀಲರ ಆಯುಕ್ತರನ್ನು ನೇಮಿಸಿ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ಸಮೀಕ್ಷೆಗಾಗಿ ವಕೀಲರ ಆಯೋಗದ ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುತ್ತದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಈ ಹಿಂದೆ, ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಅವರು ಕೃಷ್ಣ ಜನ್ಮಭೂಮಿಯ 13.37 ಎಕರೆ ಭೂಮಿ ಹಿಂದೂಗಳಿಗೆ ಸಂಬಂಧಿಸಿದ್ದು, ಆದರೆ ಇಲ್ಲಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಜತೆಗೆ ಇದು ಕೃಷ್ಣ ಜನ್ಮಭೂಮಿಗೆ ಸಂಬಂಧಿಸಿದೆ ಎಂಬುದಕ್ಕೆ ಅನೇಕ ಪುರಾವೆಗಳು ಇವೆ. ಇಲ್ಲಿಂದ ಮಸೀದಿಯನ್ನು ತೆಗೆಯಬೇಕು ಎಂದು ಅಗ್ನಿಹೋತ್ರಿ ಕೋರ್ಟಿಗೆ ಅರ್ಇ ಸಲ್ಲಿಸಿದ್ದರು.
ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ವಿವಾದ: ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ಮೊಘಲ್ ದೊರೆ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಬಳಿಯರುವ ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ. ಇದಕ್ಕೆ ಅಲ್ಲಿ ಸಾಕ್ಷಿಗಳು ಕೂಡ ಇದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ 1991 ರ ಪೂಜಾ ಸ್ಥಳಗಳ ಕಾಯಿದೆಯನ್ನು ಉಲ್ಲೇಖಿಸಿ ಮುಸ್ಲಿಂ ಸಂಘಟನೆ ಈ ಅರ್ಜಿಯನ್ನು ವಜಾಗೊಳಿಸುವ ಕೆಲಸ ನಡೆದಿತ್ತು.
ಕೃಷ್ಣ ಜನ್ಮಭೂಮಿ-ಶಾಹಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಒಟ್ಟು 18 ಪ್ರಕರಣಗಳಿವೆ, ನ್ಯಾಯಾಲಯವು ಮಥುರಾದ ಸ್ಥಳೀಯ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಎಲ್ಲಾ ಮೊಕದ್ದಮೆಗಳನ್ನು ಸ್ವತಃ ವರ್ಗಾಯಿಸಿತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:48 pm, Fri, 15 December 23