ಲೋಕಸಭೆ ಚುನಾವಣೆ ಬಳಿಕ ರೇವಂತ್ ರೆಡ್ಡಿ ಬಿಜೆಪಿ ಸೇರಲಿದ್ದಾರೆ: ಮಾಜಿ ಸಚಿವ ಕೆಟಿ ರಾಮರಾವ್
ಲೋಕಸಭಾ ಚುನಾವಣೆ ಬಳಿಕ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಮಾಜಿ ಸಚಿವ ಕೆಟಿ ರಾಮರಾವ್ ಹೇಳಿದ್ದಾರೆ. ಹೈದರಾಬಾದ್‌ನ ತೆಲಂಗಾಣ ಭವನದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಮರಾವ್ ರೇವಂತ್ ರೆಡ್ಡಿ ಪ್ರಧಾನಿ ಮೋದಿಯನ್ನು ತಮ್ಮ ಅಣ್ಣ ಎಂದು ಕರೆದಿದ್ದಾರೆ. ರೇವಂತಿ ರೆಡ್ಡಿ ಬಿಜೆಪಿಗೆ ಸೇರುವುದು ಪಕ್ಕಾ ಎಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ(Revanth Reddy) ಬಿಜೆಪಿ ಸೇರಲಿದ್ದಾರೆ ಎಂದು ತೆಲಂಗಾಣ ಮಾಜಿ ಸಚಿವ ಮತ್ತು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್(KT Rama Rao) ಹೇಳಿದ್ದಾರೆ. ಹೈದರಾಬಾದ್‌ನ ತೆಲಂಗಾಣ ಭವನದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಮರಾವ್ ರೇವಂತ್ ರೆಡ್ಡಿ ಪ್ರಧಾನಿ ಮೋದಿಯನ್ನು ತಮ್ಮ ಅಣ್ಣ ಎಂದು ಕರೆದಿದ್ದಾರೆ. ರೇವಂತಿ ರೆಡ್ಡಿ ಬಿಜೆಪಿಗೆ ಸೇರುವುದು ಪಕ್ಕಾ ಎಂದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆಲ್ಲುವುದು ಕಷ್ಟ ಎಂದು ಪ್ರತಿಪಾದಿಸಿದ ಕೆಟಿಆರ್, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿನ ನಂತರ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ರಾಜ್ಯದ ಮೊದಲ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಆಗಲಿದ್ದಾರೆ ಎಂದು ಹೇಳಿದರು.
ತೆಲಂಗಾಣ ಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಆರ್‌ಎಸ್ ನಾಯಕ, ಲೋಕಸಭೆ ಚುನಾವಣೆಗೆ ಮುನ್ನ ರೆಡ್ಡಿ ದೆಹಲಿಯಲ್ಲಿರುವ ತಮ್ಮ ಪಕ್ಷದ ಹೈಕಮಾಂಡ್‌ಗೆ 2,500 ಕೋಟಿ ರೂ.ಗಳನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.
ಮತ್ತಷ್ಟು ಓದಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಫೋನ್ ಕದ್ದಾಲಿಕೆ, ಉದ್ಯಮಿಗಳ ಬ್ಲ್ಯಾಕ್‌ಮೇಲ್; ಬಿಆರ್‌ಎಸ್ ಮೇಲೆ ಮತ್ತಷ್ಟು ಆರೋಪ
ರೇವಂತ್ ರೆಡ್ಡಿ ಅವರ ಸರ್ಕಾರದ ಭ್ರಷ್ಟಾಚಾರದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ರಾಜ್ಯದಲ್ಲಿ ಕಾಂಗ್ರೆಸ್ ಹಿಂದಿನ ಬಿಆರ್‌ಎಸ್ ಸರ್ಕಾರದ ಭ್ರಷ್ಟಾಚಾರದ ವಿಷಯವನ್ನು ಎತ್ತುತ್ತಿದೆ ಎಂದು ಕೆಟಿಆರ್ ಆರೋಪಿಸಿದರು. ತೆಲಂಗಾಣ (Telangana) ಪೊಲೀಸ್ ಅಧಿಕಾರಿಗಳು ಹಾಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂಬ ಆರೋಪಗಳು ಮುನ್ನೆಲೆಗೆ ಬರುತ್ತಿದ್ದಂತೆ ಕೆ ಚಂದ್ರಶೇಖರ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿಗೆ (BRS) ದೊಡ್ಡ ಪ್ರಶ್ನೆಗಳು ಎದುರಾಗಿವೆ.
ರವಿ ಪಾಲ್, ರೆಡ್ಡಿ ನಿವಾಸದ ಬಳಿ ಕಚೇರಿಯನ್ನು ಸ್ಥಾಪಿಸಿ ಸಾಧನವನ್ನು ಅಳವಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆತನನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ.
ತೆಲುಗು ಟಿವಿ ಚಾನೆಲ್ ಐ ನ್ಯೂಸ್ ನಡೆಸುತ್ತಿರುವ ಶರ್ವಣ್ ರಾವ್ ಮತ್ತು ಸಿಟಿ ಟಾಸ್ಕ್ ಫೋರ್ಸ್ ನ ಪೊಲೀಸ್ ಅಧಿಕಾರಿ ರಾಧಾ ಕಿಶನ್ ರಾವ್ ಅವರಿಗೂ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:22 am, Wed, 27 March 24