AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಸಿಬ್ಬಂದಿಗೆ ಗಾಯ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ನವೆಂಬರ್ 11 ರಂದು ಸಿಆರ್​ಪಿಎಫ್ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಅಖ್ರಾನ್ ಪ್ರದೇಶದ ಬಳಿ ನಡೆದ ಈ ಗುಂಡಿನ ದಾಳಿಯಲ್ಲಿ ಮೂವರು CRPF ಸಿಬ್ಬಂದಿ ಗಾಯಗೊಂಡಿದ್ದಾರೆ. ಬೈಕ್‌ನಲ್ಲಿ ಬಂದ ಉಗ್ರರು ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಸಿಬ್ಬಂದಿಗೆ ಗಾಯ
ಸಿಆರ್​ಪಿಎಫ್ Image Credit source: NDTV
ನಯನಾ ರಾಜೀವ್
|

Updated on: Nov 11, 2026 | 3:05 PM

Share

ಜಮ್ಮು, ನವೆಂಬರ್ 11: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅಖ್ರಾನ್ ಪ್ರದೇಶದ ಬಳಿ ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಅಖ್ರಾನ್‌ನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಕುಲ್ಗಮ್ ಜಿಲ್ಲೆಯ ಮೀರ್ ಬಜಾರ್ ಬಳಿಯ ಅಖ್ರಾನ್‌ನಲ್ಲಿ ಈ ದಾಳಿ ನಡೆದಿದೆ.

ಬೈಕ್‌ನಲ್ಲಿ ಬಂದ ಉಗ್ರರಿಂದ ದಾಳಿ? ಪ್ರಾಥಮಿಕ ಮಾಹಿತಿಯ ಪ್ರಕಾರ, ಮೋಟಾರ್‌ಸೈಕಲ್‌ನಲ್ಲಿ ಬಂದಿದ್ದ ಶಂಕಿತ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ದಾಳಿಯ ಬಳಿಕ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ ದಾಳಿಕೋರರ ಸಂಖ್ಯೆ, ಅವರ ಗುರುತು ಮತ್ತು ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಭದ್ರತಾ ಪಡೆ ನಡೆಸಿದ ಬಹುದೊಡ್ಡ ಕಾರ್ಯಚರಣೆ: ಗುಂಡಿನ ಚಕಮಕಿಯಲ್ಲಿ 14 ಮಾವೋವಾದಿಗಳು ಸಾವು

ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ದಾಳಿಯ ಬಳಿಕ ಭದ್ರತಾ ಪಡೆಗಳು ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಿವೆ. ಪ್ರಮುಖ ರಸ್ತೆಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ದಾಳಿಕೋರರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆಗಳು ನಿಗಾ ವಹಿಸಿವೆ. ಕುಲ್ಗಾಮ್ ದಕ್ಷಿಣ ಕಾಶ್ಮೀರದ ಪ್ರಮುಖ ಜಿಲ್ಲೆಯಾಗಿದ್ದು, ಈ ಭಾಗದಲ್ಲಿ ಭದ್ರತಾ ಪಡೆಗಳು ಉಗ್ರರ ಚಲನವಲನಗಳ ಮೇಲೆ ನಿರಂತರ ನಿಗಾ ಇಡುತ್ತಿವೆ. ಆದರೆ ಈ ದಾಳಿಯು ಹಿಂದಿನ ಯಾವುದೇ ಘಟನೆಯೊಂದಿಗೆ ಸಂಬಂಧ ಹೊಂದಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು