Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ
ಸಾಂದರ್ಭಿಕ ಚಿತ್ರImage Credit source: Free Press Journal
Follow us
| Updated By: ಸುಷ್ಮಾ ಚಕ್ರೆ

Updated on:Jun 11, 2022 | 10:02 AM

ಕುಲ್ಗಾಮ್: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್-ಮುಜಾಹಿದ್ದೀನ್ (HM)ನ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬ್- ಉಲ್ -ಮುಜಾಹಿದ್ದೀನ್​ನ ಓರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇಂದು (ಶನಿವಾರ) ಮುಂಜಾನೆ ಖಂಡಿಪೋರಾ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಖಂಡಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಇದಾದ ನಂತರ ಎನ್‌ಕೌಂಟರ್ ನಡೆಸಲಾಗಿದೆ.

ಇದನ್ನೂ ಓದಿ
Image
Prophet Row: ಜಾರ್ಖಂಡ್​ನಲ್ಲಿ ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ; ಇಬ್ಬರು ಸಾವು, ಹಲವರಿಗೆ ಗಾಯ
Image
Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ
Image
Karnataka Rain: ಕರ್ನಾಟಕ, ತಮಿಳುನಾಡು, ಆಂಧ್ರದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

ಇದನ್ನೂ ಓದಿ: Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ

ಅಡಗಿದ್ದ ಭಯೋತ್ಪಾದಕರು ಸೇನಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಸತ್ತವನು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿಸಿದ್ದಾರೆ.

ಇದರ ನಡುವೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ಬರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಅಬ್ದುಲ್ ರೆಹಮಾನ್ ಮಿರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂಬ ಇಬ್ಬರನ್ನು ಬರಾಮುಲ್ಲಾದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 11 June 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ