ಕುಲ್ಗಾಮ್: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್-ಮುಜಾಹಿದ್ದೀನ್ (HM)ನ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬ್- ಉಲ್ -ಮುಜಾಹಿದ್ದೀನ್ನ ಓರ್ವ ಉಗ್ರನನ್ನು ಎನ್ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇಂದು (ಶನಿವಾರ) ಮುಂಜಾನೆ ಖಂಡಿಪೋರಾ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಖಂಡಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಇದಾದ ನಂತರ ಎನ್ಕೌಂಟರ್ ನಡೆಸಲಾಗಿದೆ.
ಇದನ್ನೂ ಓದಿ: Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್ಇಟಿ ಉಗ್ರರ ಬಂಧನ
ಅಡಗಿದ್ದ ಭಯೋತ್ಪಾದಕರು ಸೇನಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಸತ್ತವನು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿಸಿದ್ದಾರೆ.
#KulgamEncounterUpdate: 01 #terrorist of proscribed #terror outfit HM killed. #Operation in progress. Further details shall follow.@JmuKmrPolice https://t.co/FqBjUaDAZA
— Kashmir Zone Police (@KashmirPolice) June 11, 2022
ಇದರ ನಡುವೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ಬರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಅಬ್ದುಲ್ ರೆಹಮಾನ್ ಮಿರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂಬ ಇಬ್ಬರನ್ನು ಬರಾಮುಲ್ಲಾದಲ್ಲಿ ಬಂಧಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:01 am, Sat, 11 June 22