AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಸಾವು; ಶರಣಾಗತಿಗೆ ಕೊನೆಯವರೆಗೂ ಕೇಳಿದ್ದ ಪೊಲೀಸರು

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಲತೀಫ್ ಭಟ್ ಸಾವನ್ನಪ್ಪಿದ್ದಾನೆ. ಭದ್ರತಾ ಪಡೆಗಳು ವಿಡಿಯೋ ಕರೆ ಮೂಲಕ ಶರಣಾಗುವಂತೆ ಮನವಿ ಮಾಡಿದ್ದರೂ, ಆತ ನಿರಾಕರಿಸಿದ್ದನು. ಈ ಕಾರ್ಯಾಚರಣೆಯು ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನವೆಂಬರ್ 11ರಂದು ನಡೆದ ದಾಳಿಯ ತನಿಖೆಯ ಭಾಗವಾಗಿತ್ತು. ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದ ಭಟ್‌ನ ಸಾವು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು.

ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಲತೀಫ್ ಭಟ್ ಸಾವು; ಶರಣಾಗತಿಗೆ ಕೊನೆಯವರೆಗೂ ಕೇಳಿದ್ದ ಪೊಲೀಸರು
ಪೊಲೀಸರು
ನಯನಾ ರಾಜೀವ್
|

Updated on: Nov 18, 2026 | 10:20 AM

Share

ಕುಲ್ಗಾಮ್, ನವೆಂಬರ್ 18: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌-ಎ-ತೊಯ್ಬಾ(ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಲತೀಫ್ ಭಟ್ ಸಾವನ್ನಪ್ಪಿದ್ದಾನೆ. ಬುಧವಾರ ಜಂಗಲ್‌ಪೋರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಭದ್ರತಾ ಸಿಬ್ಬಂದಿ ವಿಡಿಯೋ ಕರೆ ಮೂಲಕ ಆತನನ್ನು ಸಂಪರ್ಕಿಸಿ ಶರಣಾಗುವಂತೆ ಮನವಿ ಮಾಡಿದ್ದರು. ಆದರೆ ಆತ ಶರಣಾಗಲು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಈ ಕಾರ್ಯಾಚರಣೆ ನವೆಂಬರ್ 11ರಂದು ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆದ ಗುಂಡಿನ ದಾಳಿಯ ತನಿಖೆಯ ಭಾಗವಾಗಿತ್ತು. ಆ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದರು. ಘಟನೆಯ ಬಳಿಕ ಪರಾರಿಯಾಗಿದ್ದ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳು ನಿರಂತರ ಶೋಧ ನಡೆಸುತ್ತಿದ್ದವು.

ವಿಡಿಯೋ ಕಾಲ್‌ನಲ್ಲಿ ಶರಣಾಗುವಂತೆ ಮನವಿ ಕಾರ್ಯಾಚರಣೆಯ ವೇಳೆ ಪೊಲೀಸರು ಮತ್ತು ಸೇನಾ ಅಧಿಕಾರಿಗಳು ವಿಡಿಯೋ ಕರೆ ಮೂಲಕ ಲತೀಫ್ ಭಟ್‌ನನ್ನು ಸಂಪರ್ಕಿಸಿದ್ದರು. ಆತನಿಗೆ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಮನವಿ ಮಾಡಿದ್ದರು. “ನಾವು ನಿಮ್ಮೊಂದಿಗಿದ್ದೇವೆ, ಈ ಮಾರ್ಗವನ್ನು ಏಕೆ ಆರಿಸಿಕೊಂಡಿದ್ದೀರಿ? ಶರಣಾಗಿ” ಎಂದು ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ಭಟ್, “ನಾನು ಅಲ್ಲಾಹನನ್ನು ಭೇಟಿಯಾಗಲು ಹೊರಟಿದ್ದೇನೆ. ನನಗೆ ಅಲ್ಲಾಹನೇ ಸಾಕು” ಎಂದು ಹೇಳಿ ಶರಣಾಗಲು ನಿರಾಕರಿಸಿದ್ದಾನೆ ಎಂದು ವರದಿಯಾಗಿದೆ. ಈ ಸಂಭಾಷಣೆಯ ವಿಡಿಯೋ ಕೂಡ ಹೊರಬಂದಿದೆ.

ಇದನ್ನೂ ಓದಿ: ಸಿಸಿಟಿವಿ ದೃಶ್ಯ, ನಾಪತ್ತೆ ದೂರು, ಕುಲ್ಗಾಮ್ ದಾಳಿಯ ಶಂಕಿತರನ್ನು ಪತ್ತೆಹಚ್ಚಿದ್ದು ಹೇಗೆ?

ಸೋಮವಾರ ತಪ್ಪಿಸಿಕೊಂಡಿದ್ದ ಭಟ್ ನವೆಂಬರ್ 16ರಂದು ಕುಲ್ಗಾಮ್‌ನ ಲಾರೂ ಬೈಪಾಸ್ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಉಮರ್ ನಿಸಾರ್ ದಾರ್ ಸಾವನ್ನಪ್ಪಿದ್ದ. ಆದರೆ ಆತನ ಸಹಚರ ಎನ್ನಲಾದ ಲತೀಫ್ ಭಟ್ ಭದ್ರತಾ ಪಡೆಗಳ ಸುತ್ತುವರಿಕೆಯಿಂದ ತಪ್ಪಿಸಿಕೊಂಡಿದ್ದ. ಅಂದಿನಿಂದ ಆತನಿಗಾಗಿ ಹುಡುಕಾಟ ನಡೆಯುತ್ತಿತ್ತು. ಪೊಲೀಸರ ಪ್ರಕಾರ, ಉಮರ್ ದಾರ್ ಸುಮಾರು ಆರು ತಿಂಗಳ ಕಾಲ ಭಟ್‌ಗೆ ಆಶ್ರಯ ಮತ್ತು ಇತರ ನೆರವು ನೀಡಿದ್ದ ಎನ್ನಲಾಗಿದೆ.

ಸಿಆರ್‌ಪಿಎಫ್ ದಾಳಿಗೆ ಸಂಬಂಧಿಸಿದ ಆರೋಪ ನವೆಂಬರ್ 11ರಂದು ಕುಲ್ಗಾಮ್‌ನ ಅಖ್ರಾನ್ ಪ್ರದೇಶದ ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದರು. ಈ ದಾಳಿಗೂ ಮುನ್ನ ಲತೀಫ್ ಭಟ್ ಮತ್ತು ಉಮರ್ ದಾರ್ ಹಲವು ಪ್ರದೇಶಗಳಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೀರ್ ಬಜಾರ್, ಅಖ್ರಾನ್, ಹಬ್ಲಿಶ್ ಮತ್ತು ಕಿಲಾಮ್ ಪ್ರದೇಶಗಳ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರ ಚಲನವಲನಗಳು ಸೆರೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಈ ದೃಶ್ಯಗಳನ್ನು ಆಧರಿಸಿ ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು