AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲ್ಗಾಮ್: ಭಯೋತ್ಪಾದಕರ ಎನ್‌ಕೌಂಟರ್‌ ವೇಳೆ 4 ಭದ್ರತಾ ಸಿಬ್ಬಂದಿ, ಪೊಲೀಸ್ ಅಧಿಕಾರಿಗೆ ಗಾಯ

ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಜಿಲ್ಲೆಯ ದೇವಸರ್ ಪ್ರದೇಶದ ಅಡಿಗಮ್ ಗ್ರಾಮದಲ್ಲಿ ಎನ್‌ಕೌಂಟರ್ ನಡೆಯಿತು. ಎನ್‌ಕೌಂಟರ್ ಸ್ಥಳದ ಬಳಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಟ್ರಾಫಿಕ್) ಮುಮ್ತಾಜ್ ಅಲಿ ಅವರಿಗೆ ಬುಲೆಟ್ ತಾಗಿ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಲ್ಗಾಮ್: ಭಯೋತ್ಪಾದಕರ ಎನ್‌ಕೌಂಟರ್‌ ವೇಳೆ 4 ಭದ್ರತಾ ಸಿಬ್ಬಂದಿ, ಪೊಲೀಸ್ ಅಧಿಕಾರಿಗೆ ಗಾಯ
ಕುಲ್ಗಾಮ್ ಎನ್ ಕೌಂಟರ್
ರಶ್ಮಿ ಕಲ್ಲಕಟ್ಟ
|

Updated on: Sep 28, 2024 | 1:42 PM

Share

ಶ್ರೀನಗರ ಸೆಪ್ಟೆಂಬರ್ 28: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಶನಿವಾರ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಮತ್ತು ಟ್ರಾಫಿಕ್ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಜಿಲ್ಲೆಯ ದೇವಸರ್ ಪ್ರದೇಶದ ಅಡಿಗಮ್ ಗ್ರಾಮದಲ್ಲಿ ಎನ್‌ಕೌಂಟರ್ ನಡೆಯಿತು. ಎನ್‌ಕೌಂಟರ್ ಸ್ಥಳದ ಬಳಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಟ್ರಾಫಿಕ್) ಮುಮ್ತಾಜ್ ಅಲಿ ಅವರಿಗೆ ಬುಲೆಟ್ ತಾಗಿ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು. ಕುಲ್ಗಾಮ್‌ನ ಅಡಿಗಮ್ ದೇವ್‌ಸರ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯನಿರತವಾಗಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಶನಿವಾರ X ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 22 ರಂದು ಕಿಶ್ತ್ವಾರ್ ಜಿಲ್ಲೆಯ ಚತ್ರೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ 3 ನೇ ಹಂತಕ್ಕೆ ಮುಂಚಿತವಾಗಿ ಎನ್‌ಕೌಂಟರ್ ನಡೆದಿದೆ. ಮೊದಲ ಹಂತದ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ 18 ರಂದು ನಡೆದಿದ್ದರೆ, ಎರಡನೇ ಹಂತದ ಮತದಾನ ಸೆಪ್ಟೆಂಬರ್ 25 ರಂದು ಗಂದರ್ಬಾಲ್, ಬುದ್ಗಾಮ್, ಶ್ರೀನಗರ ಮತ್ತು ಜಮ್ಮು ಪ್ರದೇಶದ ರಜೌರಿ, ರೈಸಿ ಮತ್ತು ಪೂಂಚ್ ನಲ್ಲಿ ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಅಗ್ನಿ ಅವಘಡ

ಅಕ್ಟೋಬರ್ 1 ರಂದು ಮೂರನೇ ಮತ್ತು ಅಂತಿಮ ಹಂತದ ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಹತ್ತು ವರ್ಷಗಳ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯುತ್ತಿದ್ದು, 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ