Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು

| Updated By: ಸುಷ್ಮಾ ಚಕ್ರೆ

Updated on: Jul 04, 2022 | 10:36 AM

ಸೈಂಜ್‌ಗೆ ತೆರಳುತ್ತಿದ್ದ ಶಾಲಾ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಣಿವೆಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು
ಕುಲುವಿನಲ್ಲಿ ಬಸ್ ಅಪಘಾತ
Image Credit source: NDTV
Follow us on

ಶಿಮ್ಲಾ: ಹಿಮಾಚಲ ಪ್ರದೇಶದ ಕುಲುವಿನಲ್ಲಿ (Kullu) ಇಂದು ಬೆಳಗ್ಗೆ ಭೀಕರ ಬಸ್ ಅಪಘಾತ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ (School Bus Accident) ಕಣಿವೆಗೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಭಾರೀ ಹಾನಿಗೊಳಗಾದ ವಾಹನದ ಫೋಟೋಗಳು ಆ ಅಪಘಾತದ ಭೀಕರತೆಯನ್ನು ತೆರೆದಿಟ್ಟಿವೆ.

ಈ ಬಗ್ಗೆ ಕುಲು ಡೆಪ್ಯೂಟಿ ಕಮಿಷನರ್ ಅಶುತೋಷ್ ಗರ್ಗ್ ಮಾಹಿತಿ ನೀಡಿದ್ದು, ಸೈಂಜ್‌ಗೆ ತೆರಳುತ್ತಿದ್ದ ಶಾಲಾ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಣಿವೆಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಸಂಭವಿಸಿದ ಅಪಘಾತಗಳಲ್ಲಿ ಕಳೆದ 4 ವರ್ಷಗಳಲ್ಲಿ ಪ್ರಾಣ ಕಳೆದುಕೊಂಡಿದ್ದು 500 ಪಾದಚಾರಿಗಳು

ಬಸ್ ಅಪಘಾತ ಸಂಭವಿಸಿದಾಗ ಸುಮಾರು 40 ವಿದ್ಯಾರ್ಥಿಗಳು ಶಾಲಾ ಬಸ್‌ನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಶಾಲಾ ಬಸ್ ಕಣಿವೆಗೆ ಬಿದ್ದ ಪರಿಣಾಮವಾಗಿ ಕೆಲವು ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.

ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.