ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿದೆ. ಹೀಗಿರುವಾಗಲೇ ಉತ್ತರಾಖಂಡದ ಹರಿದ್ವಾರದ ಕುಂಭಮೇಳ ಆತಂಕ ಸೃಷ್ಟಿಸಿದೆ. ಹೀಗೆ ಕುಂಭಮೇಳ ಕೊರೊನಾ ಹಾಟ್ಸ್ಪಾಟ್ ಆಗುತ್ತಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದರು. ಇದಕ್ಕೆ ಸಾಧುಗಳಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕುಂಭಮೇಳ ಅಂತ್ಯಮಾಡಲಾಗಿದೆ.
ಕೊರೊನಾ ಸಾಂಕ್ರಾಮಿಕ ಮಿತಿಮೀರುತ್ತಿದೆ. ಕುಂಭಮೇಳದಲ್ಲಿ ಅನೇಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದು ಧರ್ಮ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್ ಅವರೊಂದಿಗೆ ಫೋನ್ ಮೂಲಕ ಚರ್ಚೆ ನಡೆಸಿದ್ದೇನೆ. ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿಯನ್ನೂ ಮಾಡಿದ್ದೇನೆ ಎಂದಿದ್ದರು.
ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಜುನಾ ಅಖಾಡದ ಅವಧೇಶಾನಂದ ಗಿರಿ ಜಿ ಮಹಾರಾಜ್, ಭಾರತದ ಜನರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆ. ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಎಲ್ಲಾ ದೇವರುಗಳನ್ನು ಇಂದೇ (ಏಪ್ರಿಲ್ 17) ವಿಸರ್ಜನೆ ಮಾಡಿದ್ದೇವೆ ಎಂದಿದ್ದಾರೆ.
भारत की जनता व उसकी जीवन रक्षा हमारी पहली प्राथमिकता है। #कोरोना महामारी के बढ़ते प्रकोप को देखते हुए हमने विधिवत कुम्भ के आवाहित समस्त देवताओं का विसर्जन कर दिया है। #जूनाअखाड़ा की ओर से यह कुम्भ का विधिवत विसर्जन-समापन है।@narendramodi @AmitShah@ANI @z_achryan @TIRATHSRAWAT pic.twitter.com/rOUaqL1egU
— Swami Avdheshanand (@AvdheshanandG) April 17, 2021
ಏಪ್ರಿಲ್ 1ರಂದು ಕುಂಭಮೇಳ ಆರಂಭವಾಗಿತ್ತು. ಈ ಸಮಯದಲ್ಲೇ ಕೊರೊನಾ ವೈರಸ್ ಮಿತಿ ಮೀರಿ ಹರಡಿತ್ತು. ಕುಂಭಮೇಳದಿಂದ ಕೊರೊನಾ ವೈರಸ್ ಹೆಚ್ಚುವ ಭೀತಿ ಕಾಡಿತ್ತು. ಈ ಬಗ್ಗೆ ಸಾಕಷ್ಟು ವಿರೋಧಗಳು ಕೂಡ ಕೇಳಿ ಬಂದಿದ್ದವು.
ಇದನ್ನೂ ಓದಿ: ಕುಂಭಮೇಳದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆಚರಣೆ ಸಾಂಕೇತಿಕವಾಗಿದ್ದರೆ ಸಾಕು ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ
Published On - 6:42 pm, Sat, 17 April 21