Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆಚರಣೆ ಸಾಂಕೇತಿಕವಾಗಿದ್ದರೆ ಸಾಕು ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಮನವಿಗೆ ತಾವು ಸ್ಪಂದಿಸುವುದಾಗಿ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್​ ಕೂಡ ಟ್ವೀಟ್ ಮಾಡಿದ್ದಾರೆ. ನಾವು ಪ್ರಧಾನಿ ನರೇಂದ್ರ ಮೋದಿಯವರ ಮನವಿಯನ್ನು ಗೌರವಿಸುತ್ತೇವೆ ಎಂದಿದ್ದಾರೆ.

ಕುಂಭಮೇಳದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆಚರಣೆ ಸಾಂಕೇತಿಕವಾಗಿದ್ದರೆ ಸಾಕು ಎಂದು ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಕುಂಭಮೇಳ
Follow us
Lakshmi Hegde
|

Updated on: Apr 17, 2021 | 10:02 AM

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ದಿನದಿನಕ್ಕೂ ಅಬ್ಬರಿಸುತ್ತಿದೆ. ಈ ಮಧ್ಯೆ ಉತ್ತರಾಖಂಡದ ಹರಿದ್ವಾರದ ಕುಂಭಮೇಳ ಆತಂಕ ಸೃಷ್ಟಿಸಿದೆ. ಕುಂಭಮೇಳಕ್ಕೂ ಕೊರೊನಾ ಸೋಂಕು ಕಾಲಿಟ್ಟಿದ್ದು, 80ಕ್ಕೂ ಹೆಚ್ಚು ಸಾಧುಗಳಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಹಲವರು ಏಮ್ಸ್​ಗೆ ದಾಖಲಾಗಿದ್ದಾರೆ. ಮಹಾ ನಿರ್ವಾನಿ ಅಖಾಡದ ನಾಯಕ ಮಧ್ಯಪ್ರದೇಶದ ಸ್ವಾಮಿ ಕಪಿಲ್ ದೇವ್ ಕೊವಿಡ್​ನಿಂದಾಗಿ ಡೆಹ್ರೂಡೂನ್​​ನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತರಾಗಿದ್ದಾರೆ. ಇನ್ನೂ ಹಲವು ಸಾಧುಗಳಿಗೆ ಕೊರೊನಾ ತಗುಲಿರುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

ಹೀಗೆ ಕುಂಭಮೇಳ ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವುದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕ ಮಿತಿಮೀರುತ್ತಿದೆ. ಕುಂಭಮೇಳದಲ್ಲಿ ಅನೇಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದು ಧರ್ಮ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್​ ಅವರೊಂದಿಗೆ ಫೋನ್​ ಮೂಲಕ ಚರ್ಚೆ ನಡೆಸಿದ್ದೇನೆ. ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿಯನ್ನೂ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಮನವಿಗೆ ತಾವು ಸ್ಪಂದಿಸುವುದಾಗಿ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್​ ಕೂಡ ಟ್ವೀಟ್ ಮಾಡಿದ್ದಾರೆ. ನಾವು ಪ್ರಧಾನಿ ನರೇಂದ್ರ ಮೋದಿಯವರ ಮನವಿಯನ್ನು ಗೌರವಿಸುತ್ತೇವೆ. ಹರಿದ್ವಾರದ ಕುಂಭಮೇಳದಲ್ಲಿ ಸ್ನಾನ ಮಾಡಲು ಗುಂಪುಗುಂಪಾಗಿ ಬರಬೇಡಿ ಎಂದು ನಾನು ಜನರಲ್ಲಿ, ಸಾಧುಗಳಲ್ಲಿ ಮನವಿ ಮಾಡುತ್ತೇನೆ. ಸರ್ಕಾರದ ಎಲ್ಲ ನಿಯಮಗಳನ್ನೂ ಅನುಸರಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಜನವರಿಯಲ್ಲೇ ಪ್ರಾರಂಭವಾಗಬೇಕಿದ್ದ ಕುಂಭಮೇಳವನ್ನು ಕೊರೊನಾ ಕಾರಣಕ್ಕೆ ಮುಂದೂಡಲಾಗಿತ್ತು. ಏಪ್ರಿಲ್​ನಿಂದ ಪ್ರಾರಂಭಿಸುವುದಾಗಿ ಉತ್ತರಾಖಂಡ ರಾಜ್ಯ ಸರ್ಕಾರ ಹೇಳಿತ್ತು. ಕುಂಭಮೇಳಕ್ಕೆ ಸಂಬಂಧಪಟ್ಟ ಎಸ್​ಒಪಿ ಬಿಡುಗಡೆ ಮಾಡಿದ್ದ ಕೇಂದ್ರ ಸರ್ಕಾರ, ಅವಧಿಯನ್ನು ಕಡಿಮೆ ಮಾಡಿತ್ತು.

ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗವಹಿಸಿದ್ದ ನಿರ್ವಾನಿ ಅಖಾಡದ ನಾಯಕ ಕೊವಿಡ್​ನಿಂದ ಸಾವು; ಮೇಳದಿಂದ ನಿರ್ಗಮಿಸಲು ಎರಡು ಅಖಾಡ ನಿರ್ಧಾರ

ಕರ್ನಾಟಕದಿಂದ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್

Kumbh Mela Should Now Only Be Symbolic Pm Narendra Modi Tweet

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ