ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ (Kupwara) ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಒಬ್ಬ ಉಗ್ರನನ್ನು ಭದ್ರತಾ ಪಡೆಗಳು (Indian Security Forces) ಹತ್ಯೆ ಮಾಡಿವೆ. ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಎಲ್ಒಸಿ ಬಳಿ ಇಂದು (ಬುಧವಾರ) ಎನ್‌ಕೌಂಟರ್ ನಡೆದಿದ್ದು, ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಬುಧವಾರ ಪಾಕಿಸ್ತಾನದ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶದ ಸುದ್ಪೋರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವಾರು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Terrorists Encounter: ಕಾಶ್ಮೀರದ ಶೋಪಿಯಾನ್ನಲ್ಲಿ ಸರಣಿ ಎನ್‌ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ
One foreign #terrorist killed in Sudpora near LoC in #Kupwara. #Incriminating materials including arms & ammunition recovered. Search going on. Further details shall follow.@JmuKmrPolice
— Kashmir Zone Police (@KashmirPolice) October 26, 2022
ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿ ಆ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಕೆಲವು ದಿನಗಳ ನಂತರ ಈ ಬೆಳವಣಿಗೆಯಾಗಿದೆ. ಜಮ್ಮು ಕಾಶ್ಮೀರದ ಪೊಲೀಸರು ಮತ್ತು 23 ಆರ್‌ಆರ್ ಆರ್ಮಿ ಜಿಲ್ಲೆಯ ತಹಸಿಲ್ ಖಾರಿಯ ಅರಣ್ಯ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.