Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್‌ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್ಇಟಿ ಉಗ್ರರ ಹತ್ಯೆ
ಇಂದು ಮುಂಜಾನೆ ಕಾಶ್ಮೀರದ ಕುಪ್ವಾರಾದಲ್ಲಿ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ಎಲ್ಇಟಿ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.
ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ (Kupwara) ಜಿಲ್ಲೆಯ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ (Terrorists Encounter) ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್ಇಟಿ ಉಗ್ರರ (LeT Terrorist) ಹತ್ಯೆ ಮಾಡಲಾಗಿದೆ.
” ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಇಬ್ಬರು ಉಗ್ರರು ಹತರಾಗಿದ್ದಾರೆ. ಉಳಿದವರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
#KupwaraEncounterUpdate: Two #terrorists of proscribed #terror outfit LeT including one #Pakistani terrorist namely Tufail killed. Search still going on: IGP Kashmir@JmuKmrPolice https://t.co/g8wnfRcKF7
— Kashmir Zone Police (@KashmirPolice) June 7, 2022
ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಹತನಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಸರಣಿಗಳು ನಡೆಯುತ್ತಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಉಗ್ರ ಸಂಘಟನೆಗಳ ಕಮಾಂಡರ್‌ಗಳನ್ನು ಹೊಡೆದುರುಳಿಸಲಾಗಿದೆ.
ಇದನ್ನೂ ಓದಿ: Pulwama encounter ಪುಲ್ವಾಮಾ ಎನ್‌ಕೌಂಟರ್: ವಲಸೆ ಕಾರ್ಮಿಕರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಹತ್ಯೆ
ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ನಿಖರವಾದ ಮಾಹಿತಿಯ ಆಧಾರದ ಮೇಲೆ ಹೆಚ್ಚಿನ ಕಾರ್ಯಾಚರಣೆಗಳನ್ನು ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ನಡೆಸಿವೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:53 am, Tue, 7 June 22