AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಕ್ರೋಚ್ ಜನತಾ ಪಾರ್ಟಿಯಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ದೇಶವ್ಯಾಪಿ ಅಭಿಯಾನ ಘೋಷಣೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಇಂದು (ಗುರುವಾರ) 'ಕ್ಯಾ ಬೋಲ್ತಿ ಪಬ್ಲಿಕ್' ಹೆಸರಿನ ದೇಶವ್ಯಾಪಿ ಅಭಿಯಾನ ಘೋಷಿಸಿದ್ದಾರೆ. ಸಿಜೆಪಿಯು ಸೆಪ್ಟೆಂಬರ್‌ನಿಂದ ದೇಶದಾದ್ಯಂತ ಪ್ರವಾಸ ಮಾಡಿ ಎಲ್ಲ ಜನರೊಂದಿಗೆ ಸಂವಾದ ನಡೆಸಲಿದ್ದು, ನಿರುದ್ಯೋಗ, ಶಿಕ್ಷಣ ಸುಧಾರಣೆ ಮತ್ತು ಸಾಮಾಜಿಕ ನ್ಯಾಯದಂತಹ ವಿಷಯಗಳನ್ನು ಚರ್ಚೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಭಿಜೀತ್ ದಿಪ್ಕೆ, ತಮ್ಮ ಸಂಘಟನೆಯು ರಾಜಕೀಯ ಪಕ್ಷದ ಬದಲಿಗೆ 'ಒತ್ತಡದ ಗುಂಪು' ಆಗಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿಯಿಂದ 'ಕ್ಯಾ ಬೋಲ್ತಿ ಪಬ್ಲಿಕ್' ದೇಶವ್ಯಾಪಿ ಅಭಿಯಾನ ಘೋಷಣೆ
Cjp LeadersImage Credit source: PTI
ಸುಷ್ಮಾ ಚಕ್ರೆ
|

Updated on: Aug 06, 2026 | 7:13 PM

Share

ನವದೆಹಲಿ, ಆಗಸ್ಟ್ 6: ಕಾಕ್ರೋಚ್ ಜನತಾ ಪಾರ್ಟಿ (CJP) ದೇಶಾದ್ಯಂತ ಕ್ಯಾ ಬೋಲ್ತಿ ಪಬ್ಲಿಕ್ (ಜನರು ಏನು ಹೇಳುತ್ತಾರೆ?) ಎಂಬ ಅಭಿಯಾನ ಆರಂಭಿಸಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಯೋಜಿಸಲಾಗಿದ್ದ ಸಂಸ್ಥೆಯ ಕೋರ್ ಟೀಮ್‌ನ ಎರಡು ದಿನಗಳ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಜೆಪಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಸಂಘಟನೆಯ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡರು.

ಅಭಿಜೀತ್ ದಿಪ್ಕೆ ಅವರು “ಕ್ಯಾ ಬೋಲ್ತಿ ಪಬ್ಲಿಕ್” ಎಂಬ ಅಭಿಯಾನವನ್ನು ಘೋಷಿಸಿದ್ದು, ಇದು ಭಾರತದಾದ್ಯಂತ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲಿದೆ. ಸಿಜೆಪಿ ಪ್ರತಿನಿಧಿಗಳು ನಾಗರಿಕರೊಂದಿಗೆ ಮಾತನಾಡಿ ಅವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೇಶದ ರಾಜಕೀಯ ಮತ್ತು ಸಾಮಾಜಿಕ ಪರಿಸ್ಥಿತಿಯ ಕುರಿತು ಅವರ ಅಭಿಪ್ರಾಯಗಳನ್ನು ತಿಳಿಯಲಿದ್ದಾರೆ. “ಈ ‘ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನದ ಸಮಯದಲ್ಲಿ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಜನರು ಏನು ಯೋಚಿಸುತ್ತಾರೆ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳು ಯಾವುವು ಎಂಬುದನ್ನು ನಾವು ತಿಳಿದುಕೊಳ್ಳಲಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಒಪ್ಪಂದದಂತೆ ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ; ಸರ್ಕಾರಕ್ಕೆ ಸಿಜೆಪಿ ಕೊನೆಯ ಎಚ್ಚರಿಕೆ

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮಾತನಾಡಿ, “ನಮ್ಮ ದೇಶದಲ್ಲಿ ಇಂದು ಸಂಸ್ಥೆಗಳ ಹೊಣೆಗಾರಿಕೆಯು ಅಪಾಯಕಾರಿ ಸ್ಥಿತಿಯಲ್ಲಿದೆ. ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯದ ಮುನ್ಸೂಚನೆ. ಈ ಹಿಂದೆ ಮತದಾರರು ಸರ್ಕಾರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಇಂದು ಯಾರು ಮತ ಹಾಕಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸುತ್ತಿದೆ. ಪ್ರಜಾಪ್ರಭುತ್ವ ಹೀಗೆ ಕೆಲಸ ಮಾಡುವುದು ಸರಿಯಲ್ಲ. ನಾವು ಚುನಾವಣಾ ಆಯೋಗದ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕಾಗಿದೆ. ನಾವು ಈ ಕೆಲಸ ಮಾಡುವವರೆಗೆ ದೇಶದಲ್ಲಿ ಚುನಾವಣಾ ಅಕ್ರಮಗಳು ಮುಂದುವರಿಯುತ್ತಲೇ ಇರುತ್ತವೆ” ಎಂದಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಅತಿದೊಡ್ಡ ಸಾಧನೆ:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಜೀತ್ ದಿಪ್ಕೆ, ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ವಿದ್ಯಾರ್ಥಿಗಳ ಹೋರಾಟದ ಅತಿದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು. ಜಂತರ್ ಮಂತರ್ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲದೆ ಉದ್ಯೋಗವಿಲ್ಲದ ಯುವಕರೂ ಭಾಗವಹಿಸಿದ್ದರು ಎಂದು ಅವರು ತಿಳಿಸಿದರು. ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ ಅವರು, ತಮ್ಮ ಸಂಘಟನೆಯು ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡುತ್ತದೆ ಮತ್ತು ಶಾಲಾ ಮಟ್ಟದಿಂದಲೇ ಶಿಕ್ಷಣವು ಕೈಗೆಟುಕದಂತಾಗಿರುವುದರಿಂದ ಶಿಕ್ಷಣ ಸುಧಾರಣೆಗಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು. ಶಿಕ್ಷಣವನ್ನು ಲಾಭ ಗಳಿಸಲು ಬಳಸಿಕೊಳ್ಳಲಾಗುತ್ತಿದೆ. ಆದರೆ ನಮಗೆ ಅದನ್ನು ಬದಲಾಯಿಸುವ ಆಸೆಯಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಮದುವೆ ಬಗ್ಗೆ ಭಾರೀ ಚರ್ಚೆ; ಭಾವೀ ಸೊಸೆ ಕುರಿತು ತಾಯಿ ಹೇಳಿದ್ದೇನು?

ಸಿಜೆಪಿ ರಾಜಕೀಯ ಪಕ್ಷವಲ್ಲ;

“ಸಿಜೆಪಿ ರಾಜಕೀಯ ಪಕ್ಷವಲ್ಲ. ಸದ್ಯಕ್ಕೆ ಸಿಜೆಪಿ ಒಂದು ಒತ್ತಡದ ಗುಂಪಾಗಿ ಕೆಲಸ ಮಾಡುತ್ತದೆ. ಏಕೆಂದರೆ ಭಾರತಕ್ಕೆ ಈಗ ಅತ್ಯಂತ ತುರ್ತಾಗಿ ಬೇಕಿರುವುದು ಒಂದು ಒತ್ತಡದ ಗುಂಪು. ಸಿಜೆಪಿಯು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ ಆಡಳಿತ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳಿಗೆ ಸಂಬಂಧಿಸಿದ ವ್ಯಾಪಕ ವಿಷಯಗಳನ್ನು ಕೈಗೆತ್ತಿಕೊಳ್ಳಲಿದೆ” ಎಂದು ದಿಪ್ಕೆ ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ