AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು!

ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ಹಾಗೂ ಕಸ ಎಸೆಯುವುದರ ವಿರುದ್ಧ ಲಡಾಖ್ ಕಠಿಣ ನಿರ್ಬಂಧಗಳನ್ನು ಹೇರಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಪರಿಸರ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಹೊಸ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲಾಗಿದೆ.

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು!
LadakhImage Credit source: Getty Image
ಸುಷ್ಮಾ ಚಕ್ರೆ
|

Updated on: Jun 19, 2026 | 6:26 PM

Share

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ.

ಲಡಾಖ್ ಅತ್ಯಂತ ಸೂಕ್ಷ್ಮ ಪರಿಸರ ವಲಯವನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಬಾಟಲಿಗಳು, ಕ್ಯಾರಿ ಬ್ಯಾಗ್‌ಗಳು ಮತ್ತು ತಿಂಡಿಗಳ ಪ್ಯಾಕೆಟ್‌ಗಳು ಎಲ್ಲೆಂದರಲ್ಲಿ ಬಿದ್ದಿರುವುದು ಅಲ್ಲಿನ ನೈಸರ್ಗಿಕ ಸೌಂದರ್ಯ ಮತ್ತು ಜೀವವೈವಿಧ್ಯತೆಗೆ ಮಾರಕವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಣಾಯಕ ಆದೇಶ ಹೊರಡಿಸಲಾಗಿದೆ. ಹೊಸ ಆದೇಶದ ಪ್ರಕಾರ ಕೆಳಗಿನ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು, ಪ್ಲಾಸ್ಟಿಕ್ ಚಮಚ, ಕಪ್ ಮತ್ತು ಪ್ಲೇಟ್‌ಗಳು, ಪ್ಲಾಸ್ಟಿಕ್ ಕಡ್ಡಿಗಳನ್ನು ಹೊಂದಿರುವ ಇಯರ್-ಬಡ್ಸ್ ಮತ್ತು ಬಲೂನ್‌ಗಳು, ಸಿಗರೇಟ್ ಪ್ಯಾಕೆಟ್‌ಗಳು ಮತ್ತು ಸಿಹಿ ತಿಂಡಿಗಳ ಪೆಟ್ಟಿಗೆಗಳ ಸುತ್ತ ಸೀಲ್ ಮಾಡುವ ಪ್ಲಾಸ್ಟಿಕ್ ಫಿಲ್ಮ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ಅಥವಾ ಪಿವಿಸಿ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬ್ಯಾನ್: ಸಿಎಂ ಮಹತ್ವದ ಆದೇಶ

ಹೊಸ ನಿಯಮಾವಳಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಸ್ಥಳಗಳು, ನದಿ ತೀರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಕಸ ಎಸೆಯುವ ಪ್ರವಾಸಿಗರು ಮತ್ತು ಸ್ಥಳೀಯರಿಗೆ ಸ್ಥಳದಲ್ಲೇ ಭಾರಿ ಮೊತ್ತದ ದಂಡ ವಿಧಿಸಲಾಗುತ್ತದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವ ಅಥವಾ ಬಳಸುವ ಹೋಟೆಲ್, ರೆಸ್ಟೋರೆಂಟ್ ಮತ್ತು ಅಂಗಡಿಕಾರರಿಗೆ ಭಾರಿ ದಂಡದ ಜೊತೆಗೆ ಅವರ ಪರವಾನಗಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಪದೇ ಪದೇ ನಿಯಮ ಉಲ್ಲಂಘಿಸುವವರಿಗೆ ದಂಡದ ಪ್ರಮಾಣವನ್ನು ದುಪ್ಪಟ್ಟುಗೊಳಿಸಲಾಗುತ್ತದೆ.

ಲಡಾಖ್‌ಗೆ ಬರುವ ಪ್ರವಾಸಿಗರು ತಮ್ಮೊಂದಿಗೆ ಯಾವುದೇ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಪರ್ಯಾಯವಾಗಿ ಬಿದಿರು ಅಥವಾ ಬಟ್ಟೆಯ ಬ್ಯಾಗ್‌ಗಳು ಮತ್ತು ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಗಳನ್ನು ಬಳಸಲು ಉತ್ತೇಜಿಸಲಾಗುತ್ತಿದೆ. ಲಡಾಖ್‌ನ ಹಿಮಭರಿತ ಬೆಟ್ಟಗಳು ಮತ್ತು ಶುದ್ಧವಾದ ಪರಿಸರವನ್ನು ಮುಂದಿನ ಪೀಳಿಗೆಗಾಗಿ ಉಳಿಸಲು ಈ ಕಠಿಣ ನಿರ್ಧಾರ ಅಗತ್ಯವಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಇದಕ್ಕೆ ಪೂರ್ಣ ಸಹಕಾರ ನೀಡಬೇಕು ಎಂದು ಸ್ಥಳೀಯ ಆಡಳಿತ ಮನವಿ ಮಾಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ

ಲಡಾಖ್ ಜಾಗತಿಕ ಮಟ್ಟದ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಪ್ಲಾಸ್ಟಿಕ್ ಕಸದಿಂದಾಗಿ ಇಲ್ಲಿನ ನದಿಗಳು, ಕಣಿವೆಗಳು ಮತ್ತು ಅಪರೂಪದ ವನ್ಯಜೀವಿಗಳ ಆವಾಸಸ್ಥಾನಗಳು ಕಲುಷಿತಗೊಳ್ಳುತ್ತಿವೆ. ನೈಸರ್ಗಿಕ ಸೌಂದರ್ಯ ಹಾಗೂ ಶುದ್ಧ ಗಾಳಿಯನ್ನು ಉಳಿಸಲು ಈ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಡಾಖ್‌ಗೆ ಪ್ರಯಾಣಿಸುವ ಪ್ರವಾಸಿಗರು ತಮ್ಮೊಂದಿಗೆ ಯಾವುದೇ ರೀತಿಯ ಏಕಬಳಕೆ ಪ್ಲಾಸ್ಟಿಕ್ ಅಥವಾ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತರದಂತೆ ವಿನಂತಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಪರ್ಯಾಯವಾಗಿ ಬಟ್ಟೆಯ ಬ್ಯಾಗ್‌ಗಳು ಮತ್ತು ಮರುಬಳಕೆ ಮಾಡಬಹುದಾದ ಸ್ಟೀಲ್ ಅಥವಾ ತಾಮ್ರದ ಬಾಟಲಿಗಳನ್ನು ಬಳಸಲು ಕೋರಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್