ನವದೆಹಲಿ: ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹರಿಯಾಣದ ರೋಹ್ಟಕ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆಗಾಗಿ ಪಕ್ಷದ ‘ಸಂಕಲ್ಪ ಪತ್ರ’ (ಪ್ರಣಾಳಿಕೆ) ಬಿಡುಗಡೆ ಮಾಡಿದರು. ಈ ವೇಳೆ ಹರಿಯಾಣದ ಸಿಎಂ ನಯಾಬ್ ಸಿಂಗ್ ಸೈನಿ, ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಉಪಸ್ಥಿತರಿದ್ದರು.
ಹರಿಯಾಣ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಬಿಡುಗಡೆ ಮಾಡಿದೆ. 90 ಸದಸ್ಯ ಬಲದ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಪ್ರಣಾಳಿಕೆಯಂತೆ ಲಾಡೋ ಲಕ್ಷ್ಮಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ತಿಂಗಳಿಗೆ 2,100 ರೂ. ನೀಡಲಾಗುತ್ತದೆ. ಐಎಂಟಿ ಖಾರ್ಖೋಡಾ ಮಾದರಿಯಲ್ಲಿ 10 ಕೈಗಾರಿಕಾ ನಗರಗಳನ್ನು ನಿರ್ಮಿಸಲಾಗುವುದು ಮತ್ತು ಪ್ರತಿ ನಗರಕ್ಕೆ 50,000 ಸ್ಥಳೀಯ ಯುವಕರಿಗೆ ಉದ್ಯೋಗಗಳನ್ನು ಒದಗಿಸಲು ಉದ್ಯಮಿಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು.
#WATCH | Union Minister and BJP national president JP Nadda releases party’s ‘Sankalp Patra’ (manifesto) for the Haryana Assembly Elections in Rohtak, Haryana.
CM Nayab Singh Saini, Haryana BJP president Mohan Lal Badoli are also present. pic.twitter.com/DZRiyHNH8i
— ANI (@ANI) September 19, 2024
ಇದನ್ನೂ ಓದಿ: ಕಾಂಗ್ರೆಸ್ ಹಾಗೂ ಪಾಕಿಸ್ತಾನ ಎರಡರ ಅಜೆಂಡವೂ ಒಂದೇ: ಅಮಿತ್ ಶಾ
ಬುಧವಾರ ಕಾಂಗ್ರೆಸ್ ಕೂಡ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಂಎಸ್‌ಪಿಗೆ ಕಾನೂನು ಖಾತರಿ ಮತ್ತು ಜಾತಿ ಸಮೀಕ್ಷೆಯ ಭರವಸೆ ಸೇರಿದಂತೆ 7 ಗ್ಯಾರಂಟಿಗಳನ್ನು ಘೋಷಿಸಿತ್ತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್, ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಎಐಸಿಸಿ ಹಿರಿಯ ಚುನಾವಣಾ ವೀಕ್ಷಕರಾದ ಅಶೋಕ್ ಗೆಹ್ಲೋಟ್, ಅಜಯ್ ಮಾಕನ್ ಮತ್ತು ಪ್ರತಾಪ್ ಸಿಂಗ್ ಬಾಜ್ವಾ ಅವರ ಸಮ್ಮುಖದಲ್ಲಿ ಗ್ಯಾರಂಟಿಗಳನ್ನು ಘೋಷಿಸಲಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ