Lakhimpur Kheri Case: ಕೇಂದ್ರ ಸಚಿವರ ಪುತ್ರನಿಗೆ ಜಾಮೀನು ನೀಡಿದ ಸುಪ್ರೀಂ

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 25, 2023 | 11:20 AM

ಯುಪಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Lakhimpur Kheri Case: ಕೇಂದ್ರ ಸಚಿವರ ಪುತ್ರನಿಗೆ ಜಾಮೀನು ನೀಡಿದ ಸುಪ್ರೀಂ
ಸುಪ್ರೀಂ ಕೋರ್ಟ್ ಮತ್ತು ಆಶಿಶ್ ಮಿಶ್ರಾ
Image Credit source: ANI
Follow us on

ದೆಹಲಿ: ಯುಪಿ ರೈತರ ಹತ್ಯೆ ಪ್ರಕರಣಕ್ಕೆ (Lakhimpur Kheri Case) ಸಂಬಂಧಿಸಿದಂತೆ ಕೇಂದ್ರ ಸಚಿವರ ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ 8 ವಾರಗಳ ಜಾಮೀನು ಮಂಜೂರು ಮಾಡಿದೆ. 2021ರಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಹತ್ಯೆಗೈದ ಆರೋಪ ಹೊತ್ತಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಎಂಟು ವಾರಗಳ ಜಾಮೀನು ಮಂಜೂರು ಮಾಡಿದೆ.

ಆಶಿಶ್ ಮಿಶ್ರಾ ಜಾಮೀನಿನ ಮೇಲೆ ಹೊರಗಿರುವಾಗ ಉತ್ತರ ಪ್ರದೇಶ ಅಥವಾ ದೆಹಲಿ ಮತ್ತು ಅದರ ಹತ್ತಿರದ ಪ್ರದೇಶಗಳಲ್ಲಿ ವಾಸಿಸುವಂತಿಲ್ಲ. ಒಂದು ವಾರದೊಳಗೆ ಉತ್ತರ ಪ್ರದೇಶವನ್ನು ತೊರೆಯುವಂತೆ ಆದೇಶಿಸಲಾಗಿದೆ. ಆಶಿಶ್ ಮಿಶ್ರಾ ಅಥವಾ ಅವರ ಕುಟುಂಬದವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವು ಅವರ ಜಾಮೀನು ರದ್ದುಗೊಳಿಸಲು ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನು ಓದಿ: Lakhimpur Kheri Case: ಎರಡನೇ ಬಾರಿಗೂ ಆಶೀಶ್​ ಮಿಶ್ರಾಗೆ ನಿರಾಸೆ; ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್​

ಅಕ್ಟೋಬರ್ 3, 2021 ರಂದು, ಆಶಿಶ್ ಮಿಶ್ರಾ ಅವರ SUV ಕಾರನ್ನು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿತ್ತು. ನಂತರ ಅವರನ್ನು ಬಂಧಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:07 am, Wed, 25 January 23