Lakhimpur Kheri Violence ಸುಪ್ರೀಂಕೋರ್ಟ್‌ ತಲುಪಿದ ಲಖಿಂಪುರ್ ಖೇರಿ ಪ್ರಕರಣ; ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವಕೀಲರು

ಎಫ್ಐಆರ್ ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ವಕೀಲರು ಕೇಳಿದ್ದಾರೆ. "ಘಟನೆ ಬಗ್ಗೆ ಎಫ್‌ಐಆರ್ ದಾಖಲಿಸಬೇಕು ಮತ್ತು ಆರೋಪಿ ಸಚಿವರ ಮಗನಿಗೆ ಶಿಕ್ಷೆಯಾಗಬೇಕು" ಎಂದು ಅವರು ಬರೆದಿದ್ದಾರೆ.

Lakhimpur Kheri Violence ಸುಪ್ರೀಂಕೋರ್ಟ್‌ ತಲುಪಿದ ಲಖಿಂಪುರ್ ಖೇರಿ ಪ್ರಕರಣ; ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವಕೀಲರು
ಲಖಿಂಪುರ್ ಖೇರಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 05, 2021 | 9:53 PM

ದೆಹಲಿ: ಉತ್ತರ ಪ್ರದೇಶದ ಇಬ್ಬರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿರುವ ಲಖಿಂಪುರ್ ಖೇರಿಯಲ್ಲಿ (Lakhimpur Kheri) ನಡೆದ ಘಟನೆಗಳ ಕುರಿತು ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸುವಂತೆ ಕೋರಿದ್ದಾರೆ. ಈ ಪ್ರಕರಣ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ನಿವೃತ್ತ ನ್ಯಾಯಾಧೀಶರಿಂದ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ಹೇಳಿದೆ.  “ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಚಿವರು ಮತ್ತು ಅವರ ಸಂಬಂಧಿಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು” ಎಂದು ವಕೀಲರಾದ ಶಿವಕುಮಾರ ತ್ರಿಪಾಠಿ ಮತ್ತು ಸಿಎಸ್ ಪಾಂಡ ಮುಖ್ಯ ನ್ಯಾಯಮೂರ್ತಿ ರಮಣ ಅವರಿಗೆ ಪತ್ರ ಬರೆದಿದ್ದಾರೆ. ಎಫ್ಐಆರ್ ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ವಕೀಲರು ಕೇಳಿದ್ದಾರೆ. “ಘಟನೆ ಬಗ್ಗೆ ಎಫ್‌ಐಆರ್ ದಾಖಲಿಸಬೇಕು ಮತ್ತು ಆರೋಪಿ ಸಚಿವರ ಮಗನಿಗೆ ಶಿಕ್ಷೆಯಾಗಬೇಕು” ಎಂದು ಅವರು ಬರೆದಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಕಿರಿಯ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಕೊಲೆ ಮತ್ತು ನಿರ್ಲಕ್ಷ್ಯದ ಆರೋಪ ಹೊರಿಸಿ ಅವರ ಹೆಸರನ್ನು ಹೆಸರಿಸಲಾಗಿದೆ. ಭಾನುವಾರ ಕೇಂದ್ರ ಸಚಿವರ ಭೇಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದ ಪ್ರತಿಭಟನಾಕಾರರ ಗುಂಪಿನ ಮೇಲೆ  ಹರಿದ ಎಸ್​​ಯುವಿಯನ್ನು ಆಶಿಶ್ ಮಿಶ್ರಾ ಚಾಲನೆ ಮಾಡುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಈ ಘಟನೆಯಲ್ಲಿ ನಾಲ್ಕು ರೈತರು ಸಾವನ್ನಪ್ಪಿದ್ದಾರೆ. ಬೆಂಕಿ ಮತ್ತು ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಅವರಲ್ಲಿ ಒಬ್ಬರಿಗೆ ಗುಂಡು ಹಾರಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಎರಡನೇ ಮರಣೋತ್ತರ ಪರೀಕ್ಷೆ ದೆಹಲಿಯ ಆಸ್ಪತ್ರೆಯಲ್ಲಿ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಮೊದಲ ಮರಣೋತ್ತರ ಪರೀಕ್ಷೆಯು ಎಲ್ಲಾ ಎಂಟು ಸಾವುಗಳಿಗೆ ಗಾಯಗಳು, ಆಘಾತ ಮತ್ತು ಮಿದುಳಿನ ರಕ್ತಸ್ರಾವ ಎಂದು ಹೇಳಲಾಗಿದೆ.

ರೈತರ ಪ್ರತಿಭಟನೆ ಶಾಂತಿಯುತವಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ ಎಂದು ವಕೀಲರ ಪತ್ರದಲ್ಲಿ ಹೇಳಲಾಗಿದೆ. “ಪ್ರದರ್ಶನಗಳ ಮೇಲೆ ಇಂತಹ ಕ್ರಮವು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ, ಇದು ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಹೊಡೆತವಾಗಿದೆ” ಎಂದು ಅದು ಹೇಳಿದೆ. ಇದನ್ನೂ ಓದಿ: Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ 

Published On - 9:49 pm, Tue, 5 October 21