Lakhimpur Kheri violence ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ; ಉತ್ತರ ಪ್ರದೇಶದ ನ್ಯಾಯಾಲಯ ಆದೇಶ
Ashish Mishra ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 3 ದಿನ ಪೊಲೀಸ್ ವಶಕ್ಕೆ ನೀಡಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.
ಲಖನೌ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 3 ದಿನ ಪೊಲೀಸ್ ವಶಕ್ಕೆ ನೀಡಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ. ಆಶಿಶ್ ಮಿಶ್ರಾರನ್ನು ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆಶಿಶ್ ಮಿಶ್ರಾ ಅವರನ್ನು ಶನಿವಾರ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಅಪರಾಧಗಳ ವಿರುದ್ಧ ಆತನ ಮೇಲೆ ಆರೋಪ ಹೊರಿಸಲಾಗಿದೆ. ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದರು.
Lakhimpur Kheri incident | MoS Ajay Mishra Teni’s son Ashish Mishra has been sent to three-day police remand with conditions: SP Yadav, Prosecution Advocate pic.twitter.com/H8Ecg5MA4M
— ANI UP (@ANINewsUP) October 11, 2021
ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾ ಅವರನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಷರತ್ತುಗಳೊಂದಿಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಹೇಳಿದ್ದಾರೆ.
ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ಹಿಂಭಾಗದಿಂದ ಪ್ರತಿಭಟನಾ ನಿರತ ರೈತರ ಗುಂಪಿನ ಮೇಲೆ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿ ಹರಿದಿದ್ದು ಈ ಹಿಂಸಾಚಾರದಲ್ಲಿ ನಾಲ್ಕು ರೈತರು ಮತ್ತು ಒಬ್ಬ ಸ್ಥಳೀಯ ಪತ್ರಕರ್ತ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
ಕಾನೂನು ಜಾರಿ ಸಂಸ್ಥೆಗಳಿಂದ ನುಣುಚಿಕೊಳ್ಳಲು ಯತ್ನಿಸಿದರೂ ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಅವರನ್ನು ಶನಿವಾರ ಬಂಧಿಸಿದ್ದಾರೆ. ನಂತರ ಆತನನ್ನು ಸುಮಾರು 12 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿ ರ ಸ್ಥಳೀಯ ನ್ಯಾಯಾಲಯವು ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮೃತ ರೈತರಲ್ಲಿ ಒಬ್ಬನನ್ನು ಆಶಿಶ್ ಮಿಶ್ರಾ ಗುಂಡಿಕ್ಕಿ ಕೊಂದರು. ಉಳಿದವರು ಆತನ ಬೆಂಗಾವಲಿನ ವಾಹನಗಳ ಚಕ್ರಕ್ಕೆ ಸಿಲುಕಿದರು ಎಂದು ಆರೋಪಿಸಿದರು. ಆದಾಗ್ಯೂ, ಕೇಂದ್ರ ಸಚಿವರು ಮತ್ತು ಅವರ ಮಗ ಈ ಆರೋಪ ನಿರಾಕರಿಸಿದ್ದಾರೆ.
ಎಸ್‌ಕೆಎಂ ಮಾಡಿದ ಆರೋಪಗಳನ್ನು ನಿರಾಕರಿಸಿದ ಸಚಿವರು ಮಗ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಿದ್ದು, ಆಶಿಶ್ ನಿರಪರಾಧಿ ಎಂದು ಸಾಬೀತುಪಡಿಸಲು ತನ್ನ ಬಳಿ ಪುರಾವೆಗಳಿವೆ ಎಂದು ಹೇಳಿಕೊಂಡರು. ಅದೇವೇಳೆ ಏಜೆನ್ಸಿಗಳಿಂದ “ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧ” ಎಂದು ಹೇಳಿದರು.
ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಲಾದ ಹಿಂಸಾಚಾರದ 29 ಸೆಕೆಂಡುಗಳ ವಿಡಿಯೊದಲ್ಲಿ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಎಸ್‌ಯುವಿ ಹರಿದಿರುವುದು ಕಾಣಿಸತ್ತದೆ . ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಕಾರ್ಯಕ್ರಮವೊಂದಕ್ಕೆ ಸ್ವೀಕರಿಸಲು ಪ್ರಯಾಣಿಸುತ್ತಿದ್ದ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಬೆಂಗಾವಲಿಗೆ ಎಸ್‌ಯುವಿ ಸೇರಿದೆ ಎಂದು ವರದಿಯಾಗಿದೆ.
Published On - 4:44 pm, Mon, 11 October 21