ಲಖಿಂಪುರ ಖೇರಿ ಪ್ರಕರಣ: ನಾಲ್ವರು ರೈತರನ್ನು ಕಾರು ಹರಿಸಿ ಹತ್ಯೆಗೈದ ಸಚಿವರ ಪುತ್ರ ಆಶಿಶ್ ಮಿಶ್ರಾ ವಿಚಾರಣೆಗೆ ಆದೇಶ

ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಎಸ್‌ಯುವಿ ಚಲಾಯಿಸಿ ಹತ್ಯೆಗೈದ ಆರೋಪದ ಮೇಲೆ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ (Ajay Mishra) ಅವರ ಪುತ್ರ ಆಶಿಶ್ ಮಿಶ್ರಾ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ.

ಲಖಿಂಪುರ ಖೇರಿ ಪ್ರಕರಣ: ನಾಲ್ವರು ರೈತರನ್ನು ಕಾರು ಹರಿಸಿ ಹತ್ಯೆಗೈದ ಸಚಿವರ ಪುತ್ರ ಆಶಿಶ್ ಮಿಶ್ರಾ ವಿಚಾರಣೆಗೆ ಆದೇಶ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 05, 2022 | 6:06 PM

ಲಖನೌ: ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ (Lakhimpur Kheri) ರೈತರ ಮೇಲೆ ಎಸ್‌ಯುವಿ ಚಲಾಯಿಸಿ ಹತ್ಯೆಗೈದ ಆರೋಪದ ಮೇಲೆ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ (Ajay Mishra) ಅವರ ಪುತ್ರ ಆಶಿಶ್ ಮಿಶ್ರಾ(Ashish Mishra) ವಿಚಾರಣೆಯನ್ನು ಎದುರಿಸಬೇಕಾಗುತ್ತದೆ. ನ್ಯಾಯಾಲಯವು ಇಂದು ಅವರ ಮನವಿಯನ್ನು ತಿರಸ್ಕರಿಸಿದ್ದು ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಡಲಾಗುತ್ತದೆ. ನಾಳೆ ಎಲ್ಲಾ ಆರೋಪಿಗಳ ವಿರುದ್ಧ ನ್ಯಾಯಾಲಯ ಆರೋಪ ಪಟ್ಟಿ ಮಾಡಲಿದೆ. ಕಳೆದ ವರ್ಷ ಅಕ್ಟೋಬರ್ 3 ರಂದು, ಆಶಿಶ್ ಮಿಶ್ರಾ ಮಹೀಂದ್ರಾ ಥಾರ್ ಎಸ್‌ಯುವಿಯಲ್ಲಿದ್ದರು ಎಂದು ಹೇಳಲಾಗಿದ್ದು, ಲಖಿಂಪುರ ಖೇರಿಯಲ್ಲಿ ಇದೀಗ ರದ್ದಾಗಿರುವ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಕಾರು ಹರಿಸಿದ ಆರೋಪ ಹೊತ್ತಿದ್ದಾನೆ. ಘಟನೆಯ ನಂತರ, ಕೋಪಗೊಂಡ ರೈತರು ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದು ಕೊಂದಿದ್ದಾರೆ, ಲಖಿಂಪುರ ಘಟನೆಯ ಕೆಲವು ದಿನಗಳ ಮೊದಲು, ಅಜಯ್ ಮಿಶ್ರಾ ಆ ಪ್ರದೇಶದಲ್ಲಿ ಭಾಷಣ ಮಾಡಿದ್ದು, ರೈತರು ತಮ್ಮ ಆಂದೋಲನವನ್ನು ಕೈಬಿಡದಿದ್ದರೆ “ಎರಡು ನಿಮಿಷಗಳಲ್ಲಿ ಅವರನ್ನು ಸರಿ ಮಾಡಲಾಗುವುಜು ಎಂದು ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ ರೈತರ ಮೇಲೆ ಕಾರು ಹರಿಸಿ ಹತ್ಯೆಗೈದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ನಂತರ ಆಶಿಶ್ ಮಿಶ್ರಾನನ್ನು ಬಂಧಿಸಲಾಗಿತ್ತು. ಈ ವರ್ಷದ ಏಪ್ರಿಲ್ 18 ರಂದು, ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಆಶಿಶ್ ಮಿಶ್ರಾಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಿತು. ಅಲಹಾಬಾದ್ ಹೈಕೋರ್ಟ್‌ನಲ್ಲಿ ‘ಸಂತ್ರಸ್ತರಿಗೆ’ “ನ್ಯಾಯಯುತ ಮತ್ತು ಪರಿಣಾಮಕಾರಿ ವಿಚಾರಣೆಯನ್ನು” ನಿರಾಕರಿಸಲಾಗಿದೆ ಎಂದು ಹೇಳಿ ಒಂದು ವಾರದಲ್ಲಿ ಶರಣಾಗುವಂತೆ ಕೇಳಿತು.

ರೈತರ ಮೇಲೆ ಕಾರು ಹರಿಸಿದ್ದ ವಿಡಿಯೊ ವ್ಯಾಪಕವಾಗಿ ಪ್ರಸಾರವಾಗಿದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಅವರ ಸರ್ಕಾರದ ವಿರುದ್ಧ ಜನಾಕ್ರೋಶ ತೀವ್ರವಾಗಿ ಕಂಡು ಬಂತು. ಈ ಹಿಂದೆ ಲಖಿಂಪುರ ಖೇರಿ ಹಿಂಸಾಚಾರದ ತನಿಖೆಯ ಮೇಲ್ವಿಚಾರಣೆಗಾಗಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ನೇತೃತ್ವದ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು.

ಏನಿದು ಲಖಿಂಪುರ ಖೇರಿ ಪ್ರಕರಣ?

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಲಖಿಂಪುರಕ್ಕೆ ಭೇಟಿ ನೀಡುವ ಮೊದಲು ರೈತರು ಮತ್ತು ಬಿಜೆಪಿ ಕಾರ್ಯಕರ್ತರ ಜೀವವನ್ನು ಬಲಿತೆಗೆದುಕೊಂಡ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಎಂಟು ಜನರು ಸಾವನ್ನಪ್ಪಿದರು. ಮೃತರಲ್ಲಿ ನಾಲ್ವರು ಯುಪಿ ಸಚಿವರನ್ನು ಸ್ವಾಗತಿಸಲು ಬಂದಿದ್ದ ಬಿಜೆಪಿ ಕಾರ್ಯಕರ್ತರ ಬೆಂಗಾವಲು ಪಡೆಯ ಭಾಗವಾಗಿದ್ದ ಕಾರುಗಳಲ್ಲಿದ್ದವರು. ಉಳಿದವರು ನಾಲ್ವರು ರೈತರು. ನಾಲ್ವರು ರೈತರ ಮೇಲೆ ಕಾರು ಓಡಿಸಿದ ಕಾರಿನೊಳಗೆ ಆಶಿಶ್ ಮಿಶ್ರಾ ಇದ್ದರು ಎಂದು ರೈತ ಸಂಘಟನೆಗಳು ಆರೋಪಿಸಿದರೆ, ಕೇಂದ್ರ ಸಚಿವರ ಪುತ್ರ ಈ ಆರೋಪವನ್ನು ನಿರಾಕರಿಸಿದ್ದಾರೆ. ಅಕ್ಟೋಬರ್ 3 ರಂದು ಯುಪಿಯ ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಯಿತು.

Published On - 5:55 pm, Mon, 5 December 22