Breaking ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ
Lakhimpur Kheri Case ಆಶಿಶ್ ಮಿಶ್ರಾಗೆ ಜಾಮೀನು ನೀಡಿದರೆ, ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಲಖಿಂಪುರ ಖೇರಿ ರೈತರ ಹತ್ಯೆ (Lakhimpur Kheri farmers’ killing case) ಪ್ರಕರಣದ ಪ್ರಮುಖ ಆರೋಪಿ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ (Ashish Mishra) ಅಲಹಾಬಾದ್ ಹೈಕೋರ್ಟ್ (Allahabad High Court) ಜಾಮೀನು ನಿರಾಕರಿಸಿದೆ. ಆಶಿಶ್ ಮಿಶ್ರಾಗೆ ಜಾಮೀನು ನೀಡಿದರೆ, ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಫೆಬ್ರವರಿ 10 ರಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಆಶಿಶ್ ಮಿಶ್ರಾ ಹೊಸ ಜಾಮೀನು ಕೋರಿದ್ದರು. ನ್ಯಾಯಮೂರ್ತಿ ಕೃಷನ್ ಪಹಲ್ ಅವರ ನೇತೃತ್ವದ ಪೀಠವು ಜುಲೈ 15 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದಕ್ಕೂ ಮುನ್ನ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ರಾಜೀವ್ ಸಿಂಗ್ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಸಹ ಆರೋಪಿಯಾಗಿದ್ದಾನೆ.
ರೈತರು ಹಾಗೂ ಪತ್ರಕರ್ತರ ಮೇಲೆ ವೇಗವಾಗಿ ವಾಹನ ಓಡಿಸಿ ಹತ್ಯೆ ಮಾಡಲಾಗಿತ್ತು. ನಂತರದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ವಾಹನದ ಚಾಲಕನನ್ನು ಉದ್ರಿಕ್ತಗುಂಪು ಹತ್ಯೆ ಮಾಡಿದ್ದು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.
Published On - 1:59 pm, Tue, 26 July 22