Lakhimpur Kheri Violence: ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣ: ವಿಚಾರಣೆಗೆ ಇನ್ನೂ 5 ವರ್ಷ ಬೇಕೆಂದ ಯುಪಿ ಸರ್ಕಾರ

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 11, 2023 | 12:54 PM

ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳಲು ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂದು ಯುಪಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಲಖಿಂಪುರ ಖೇರಿಯಲ್ಲಿ ಪ್ರತಿಭಟನಾಕಾರರಿಗೆ ಕಾರಿನಿಂದ ಡಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿರುವ ವಿಡಿಯೋ ಭಾರೀ ವೈರಲ್ ಆಗಿತ್ತು.

Lakhimpur Kheri Violence: ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣ: ವಿಚಾರಣೆಗೆ ಇನ್ನೂ 5 ವರ್ಷ ಬೇಕೆಂದ ಯುಪಿ ಸರ್ಕಾರ
ಸಾಂದರ್ಭಿಕ ಚಿತ್ರ
Follow us on

ಲಕ್ನೋ: ಲಖಿಂಪುರ ಖೇರಿ (Lakhimpur Kheri ) ರೈತರ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳಲು ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಲಖಿಂಪುರ ಖೇರಿಯಲ್ಲಿ ಪ್ರತಿಭಟನಾಕಾರರಿಗೆ ಕಾರಿನಿಂದ ಡಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿರುವ ವಿಡಿಯೋ ಭಾರೀ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ 2 ಬಾರಿ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಆಶಿಶ್ ಮಿಶ್ರಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಒಂದರ ಹಿಂದೊಂದು ವೇಗವಾಗಿ ಬಂದ ಎಸ್​ಯುವಿ ಕಾರುಗಳು ರೈತರಿಗೆ ಡಿಕ್ಕಿ ಹೊಡೆದು ಹೋಗಿತ್ತು. ಬಳಿಕ ಅದರಲ್ಲಿ ಒಂದು ಕಾರನ್ನು ರೈತರು ಸುಟ್ಟು ಹಾಕಿದ್ದರು. ಆ ದಿನ ಉದ್ದೇಶಪೂರ್ವಕವಾಗಿಯೇ ವೇಗವಾಗಿ ಬಂದು ರೈತರ ಮೇಲೆ ಕಾರು ಹರಿಸಿ ಕೊಲ್ಲಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹಾಗೇ, ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆ ನೀಡಬೇಕು, ಆಶಿಶ್ ಮಿಶ್ರಾ ಅವರನ್ನು ಬಂಧಿಸಬೇಕೆಂಬ ಒತ್ತಾಯ ಹೆಚ್ಚಾಗಿತ್ತು.

ಅ. 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಇನ್ನೂ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ರೈತರಾಗಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಓಡಿಸುತ್ತಿದ್ದ ವಾಹನಗಳನ್ನು ರೈತರ ಮೇಲೆ ಹರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಆ ಎರಡು ಕಾರುಗಳಲ್ಲಿ ಒಂದು ಕಾರನ್ನು ಓಡಿಸುತ್ತಿದ್ದುದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂದು ಎಫ್​ಐಆರ್ ದಾಖಲಿಸಲಾಗಿತ್ತು.

ಇದನ್ನು ಓದಿ: Lakhimpur Kheri violence ಲಖಿಂಪುರ ಖೇರಿ ಹಿಂಸಾಚಾರ ಉದ್ದೇಶಪೂರ್ವಕ ನಡೆದ ಕೃತ್ಯ, 13 ಆರೋಪಿಗಳ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಎಸ್‌ಐಟಿ ಆಗ್ರಹ

ಲಖಿಂಪುರ ಖೇರಿ ಹತ್ಯೆಯಲ್ಲಿ ನನ್ನ ಮಗನ ಪಾತ್ರವೇನೂ ಇಲ್ಲ. ಆತ ಬಹಳ ಮುಗ್ಧ. ರೈತರ ಹತ್ಯೆ ನಡೆದ ಸ್ಥಳದಲ್ಲಿ ನನ್ನ ಮಗ ಇದ್ದುದಕ್ಕೆ ಸಾಕ್ಷಿ ಸಿಕ್ಕಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ. ಆತ ಅಲ್ಲಿರಲಿಲ್ಲ ಎಂಬುದಕ್ಕೆ ನನ್ನ ಬಳಿ ವಿಡಿಯೋ ಸಾಕ್ಷಿಗಳಿವೆ. ವಿನಾಕಾರಣ ಅವನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಶಿಶ್ ಭಾನುವಾರ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಆತನಿಗೆ ಆರೋಗ್ಯ ಸರಿಯಿಲ್ಲದ ಕಾರಣದಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ಎಲ್ಲ ದಾಖಲೆಗಳ ಸಮೇತ ಆತ ವಿಚಾರಣೆಗೆ ಹಾಜರಾಗಲಿದ್ದಾನೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಹೇಳಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ತನಿಖಾ ತಂಡ ತನಿಖೆಯನ್ನು ನಡೆಸುತ್ತಿದೆ. ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ (Ajay Mishra Teni) ಅವರ ಪುತ್ರ ಆಶಿಶ್ (Ashish) ಸೇರಿದಂತೆ 13 ಬಂಧಿತ ಆರೋಪಿಗಳ ವಿರುದ್ಧ ಕೊಲೆ ಯತ್ನದ ಆರೋಪ ಹೊರಿಸುವಂತೆ ಒತ್ತಾಯಿಸಿದೆ. ತನಿಖೆಯ ಆಧಾರದ ಮೇಲೆ ಎಸ್‌ಐಟಿ, ಕೊಲೆ ಯತ್ನ,  ಸ್ವಯಂಪ್ರೇರಣೆಯಿಂದ ಅಪಾಯಕಾರಿ ಆಯುಧಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು, ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳ ಆರೋಪಗಳನ್ನು ಸೇರಿಸಿ ನ್ಯಾಯಾಲಯಕ್ಕೆ ಮೊರೆ ಹೋಗಿದೆ. ಘಟನೆಯು ಉದ್ದೇಶಪೂರ್ವಕ ಕೃತ್ಯವಾಗಿದ್ದು, ನಿರ್ಲಕ್ಷ್ಯ ಅಥವಾ ನಿರ್ಲಕ್ಷತನದಿಂದ ಸಂಭವಿಸಿದಲ್ಲ ಎಂದು ಎಸ್‌ಐಟಿ ತನಿಖಾ ಅಧಿಕಾರಿ ವಿದ್ಯಾರಾಮ್ ದಿವಾಕರ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ  ಕೋರ್ಟ್​ಗೆ ವರದಿ ನೀಡುವಂತೆ  ರಾಜ್ಯ ಸರ್ಕಾರಕ್ಕೆ ಹೇಳಿತ್ತು ,ಇದೀಗ ಈ ಪ್ರಕರಣಕ್ಕೆ ಸಂಬಂಧಸಿದಂತೆ ಹೆಚ್ಚಿನ ತನಿಖೆ ನಡೆಸಲು  ಹೆಚ್ಚಿನ ಕಾಲವಕಾಶವನ್ನು ಬೇಕು ಎಂದು  ಸುಪ್ರೀಂ ಕೋರ್ಟ್​ಗೆ ಉತ್ತರಪ್ರದೇಶದ ಸರ್ಕಾರದ ಮೂಲಕ ರಾಜ್ಯ ತನಿಖಾ ತಂಡ ಇನ್ನೂ 5 ವರ್ಷ ಬೇಕು ಸುಪ್ರೀಂಗೆ ವರದಿಯನ್ನು ಸಲ್ಲಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Wed, 11 January 23