Ashish Mishra: ಲಖಿಂಪುರ ಖೇರಿ ಹತ್ಯೆ ಪ್ರಕರಣ; ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾ ಬಂಧನ

Lakhimpur Kheri violence: ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರ ಹತ್ಯೆ ನಡೆದಾಗ ಎಸ್​ಯುವಿ ಓಡಿಸುತ್ತಿದ್ದುದು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆಶಿಶ್ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Ashish Mishra: ಲಖಿಂಪುರ ಖೇರಿ ಹತ್ಯೆ ಪ್ರಕರಣ; ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾ ಬಂಧನ
ಆಶೀಶ್​ ಮಿಶ್ರಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 09, 2021 | 6:15 PM

ಲಕ್ನೋ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹತ್ಯೆ ಮತ್ತು ಹಿಂಸಾಚಾರದಲ್ಲಿ 8 ಜನರು ಸಾವನ್ನಪ್ಪಿದ್ದರು. ಪ್ರತಿಭಟನೆಯ ಘೋಷಣೆಗಳನ್ನು ಕೂಗುತ್ತಾ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಎರಡು ಕಾರುಗಳು ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು. ಆ ಎರಡು ಎಸ್​ಯುವಿಗಳಲ್ಲಿ ಒಂದು ಕಾರನ್ನು ಚಲಾಯಿಸುತ್ತಿದ್ದುದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ವಾರಗಳೇ ಕಳೆದರೂ ಆಶಿಶ್ ಮಿಶ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದ ಪೊಲೀಸರು ಇಂದು ಬೆಳಗ್ಗೆಯಿಂದ ಆಶಿಶ್ ಮಿಶ್ರಾ ಅವರ ವಿಚಾರಣೆ ನಡೆಸಿದ್ದು, ಹತ್ಯೆ ವೇಳೆ ಚಿತ್ರೀಕರಿಸಲಾದ ವಿಡಿಯೋದಲ್ಲಿದ್ದ ಒಂದು ಎಸ್​ಯುವಿಯನ್ನು ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದರು ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ. 

ಲಖಿಂಪುರ ಖೇರಿಯಲ್ಲಿ ಪ್ರತಿಭಟನಾಕಾರರಿಗೆ ಕಾರಿನಿಂದ ಡಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿರುವ ವಿಡಿಯೋ ಭಾರೀ ವೈರಲ್ ಆಗಿತ್ತು. ಒಂದರ ಹಿಂದೊಂದು ವೇಗವಾಗಿ ಬಂದ ಎಸ್​ಯುವಿ ಕಾರುಗಳು ರೈತರಿಗೆ ಡಿಕ್ಕಿ ಹೊಡೆದು ಹೋಗಿತ್ತು. ಬಳಿಕ ಅದರಲ್ಲಿ ಒಂದು ಕಾರನ್ನು ರೈತರು ಸುಟ್ಟು ಹಾಕಿದ್ದರು. ಆ ದಿನ ಉದ್ದೇಶಪೂರ್ವಕವಾಗಿಯೇ ವೇಗವಾಗಿ ಬಂದು ರೈತರ ಮೇಲೆ ಕಾರು ಹರಿಸಿ ಕೊಲ್ಲಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹಾಗೇ, ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆ ನೀಡಬೇಕು, ಆಶಿಶ್ ಮಿಶ್ರಾ ಅವರನ್ನು ಬಂಧಿಸಬೇಕೆಂಬ ಒತ್ತಾಯ ಹೆಚ್ಚಾಗಿತ್ತು.

ಕಳೆದ ಭಾನುವಾರ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಇನ್ನೂ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ರೈತರಾಗಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಓಡಿಸುತ್ತಿದ್ದ ವಾಹನಗಳನ್ನು ರೈತರ ಮೇಲೆ ಹರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಆ ಎರಡು ಕಾರುಗಳಲ್ಲಿ ಒಂದು ಕಾರನ್ನು ಓಡಿಸುತ್ತಿದ್ದುದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂದು ರೈತರು ಆರೋಪಿಸಿದ್ದರು. ಹೀಗಾಗಿ, ಆತನನ್ನು ಬಂಧಿಸಬೇಕೆಂಬ ಒತ್ತಾಯ ಹೆಚ್ಚಾಗಿತ್ತು.

ಲಖಿಂಪುರ ಖೇರಿಯ ಹಿಂಸಾಚಾರದ ಬಳಿಕ ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾಗಲು ಬಂದಿದ್ದ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೇಶವ ಪ್ರಸಾದ್​ ಇದ್ದ ಕಾರನ್ನು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದಿತ್ತು. ಅದರಲ್ಲಿ ಒಂದು ಕಾರನ್ನು ಚಲಾಯಿಸಿದ್ದು ಅಜಯ್ ಮಿಶ್ರಾ ಅವರ ಮಗ ಆಶಿಶ್ ಎಂದು ಎಫ್​ಐಆರ್ ದಾಖಲಿಸಲಾಗಿತ್ತು. ಆದರೆ, ಇದುವರೆಗೂ ಆತನ ವಿಚಾರಣೆ ನಡೆಸಿರಲಿಲ್ಲ.

ಕೊನೆಗೂ ಇಂದು ವಿಚಾರಣೆಗೆ ಹಾಜರಾಗಿದ್ದ ಅಜಯ್ ಮಿಶ್ರಾ ಅವರನ್ನು ಇಡೀ ದಿನ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ಎಸ್​ಐಟಿ ತಂಡ ಇಂದು ಸಂಜೆ ತಮ್ಮ ವಶಕ್ಕೆ ಪಡೆದಿದೆ. ಲಖಿಂಪುರ ಖೇರಿ ಹತ್ಯೆಯಲ್ಲಿ ನನ್ನ ಮಗನ ಪಾತ್ರವೇನೂ ಇಲ್ಲ. ಆತ ಬಹಳ ಮುಗ್ಧ. ರೈತರ ಹತ್ಯೆ ನಡೆದ ಸ್ಥಳದಲ್ಲಿ ನನ್ನ ಮಗ ಇದ್ದುದಕ್ಕೆ ಸಾಕ್ಷಿ ಸಿಕ್ಕಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ. ಆತ ಅಲ್ಲಿರಲಿಲ್ಲ ಎಂಬುದಕ್ಕೆ ನನ್ನ ಬಳಿ ವಿಡಿಯೋ ಸಾಕ್ಷಿಗಳಿವೆ. ವಿನಾಕಾರಣ ಅವನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಶಿಶ್ ಭಾನುವಾರ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಆತನಿಗೆ ಆರೋಗ್ಯ ಸರಿಯಿಲ್ಲದ ಕಾರಣದಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ಎಲ್ಲ ದಾಖಲೆಗಳ ಸಮೇತ ಆತ ವಿಚಾರಣೆಗೆ ಹಾಜರಾಗಲಿದ್ದಾನೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಹೇಳಿದ್ದರು.

ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ ಕೇಸ್​; ಇಂದು ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾ

Lakhimpur Kheri Violence: ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆಯ ಮತ್ತೊಂದು ವಿಡಿಯೋ ವೈರಲ್

Published On - 5:49 pm, Sat, 9 October 21

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು