Disqualification Removed: ಲಕ್ಷದ್ವೀಪ ಸಂಸದ ಫೈಜಲ್ ಅನರ್ಹತೆ ರದ್ದು

|

Updated on: Mar 29, 2023 | 11:22 AM

ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ ನೀಡಿದೆ.

Disqualification Removed: ಲಕ್ಷದ್ವೀಪ ಸಂಸದ ಫೈಜಲ್ ಅನರ್ಹತೆ ರದ್ದು
ಫೈಜಲ್
Follow us on

ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ ನೀಡಿದೆ. ಇದರೊಂದಿಗೆ ಫೈಜಲ್ ಮತ್ತೆ ಲಕ್ಷದ್ವೀಪ ಸಂಸದ ಸ್ಥಾನಕ್ಕೆ ಏರಿದ್ದಾರೆ. ಗಮನಾರ್ಹ ಸಂಗತಿಯೆಂದರೆ, ಫೈಝಲ್ ಅವರು ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು, ಅದರ ವಿಚಾರಣೆ ನಡೆಯುತ್ತಿದೆ.

ಫೈಜಲ್ ಪ್ರಕಾರ, ಜನವರಿ 5, 2016 ರಂದು ಆಂಡ್ರೋತ್ ದ್ವೀಪ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸುಳ್ಳು ಪ್ರಕರಣದಾಖಲಾಗಿತ್ತು. ವಿಚಾರಣೆ ನಡೆಯುತ್ತಿರುವಾಗ, ಅವರು 2019 ರಲ್ಲಿ ಲೋಕಸಭೆಗೆ ಚುನಾಯಿತರಾದರು. ಜನವರಿ 11, 2023 ರಂದು, ಫೈಜಲ್ ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಯಿತು.

ಕೊಲೆ ಯತ್ನ ಪ್ರಕರಣವೊಂದರಲ್ಲಿ ತನ್ನ ವಿರುದ್ಧ ಶಿಕ್ಷೆ ರದ್ದಾಗಿದ್ದರೂ ತಮ್ಮ ಸಂಸತ್‌ ಸದಸ್ಯತ್ವವನ್ನು ಪುನರ್‌ಸ್ಥಾಪಿಸಿಲ್ಲ ಎಂದು ದೂರಿ ಎನ್‌ಸಿಪಿ ನಾಯಕ ಹಾಗೂ ಅನರ್ಹಗೊಂಡಿರುವ ಲಕ್ಷದ್ವೀಪದ ಸಂಸದ ಪಿ ಪಿ ಮೊಹಮ್ಮದ್ ಫೈಜಲ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠದೆದುರು ಹಿರಿಯ ನ್ಯಾಯವಾದಿ ಅಭಿಷೇಕ್‌ ಮನು ಸಿಂಘ್ವಿ ಅವರು ಕೋರಿದ್ದರು.

ಶಿಕ್ಷೆಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೂ ಫೈಜಲ್‌ ಅವರಿಗೆ ಸಂಸತ್‌ ಸದಸ್ಯತ್ವ ನೀಡಿಲ್ಲ. ಲಕ್ಷದ್ವೀಪ ಆಡಳಿತ ಸಲ್ಲಿಸಿದ್ದ ವಿಶೇಷ ಅನುಮತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನಾಲ್ಕು ಬಾರಿ ವಿಚಾರಣೆ ನಡೆಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಜಲ್‌ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕೇರಳ ಹೈಕೋರ್ಟ್‌ ಅಮಾನತುಗೊಳಿಸಿತ್ತು. ಈ ಆದೇಶಕ್ಕೆ ತಡೆ ಕೋರಿ ಲಕ್ಷದ್ವೀಪ ಆಡಳಿತ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಕಳೆದ ಫೆಬ್ರವರಿಯಲ್ಲಿ ತಿರಸ್ಕರಿಸಿತ್ತು.

ಜನವರಿ 25 ರಂದು ನಡೆದಿದ್ದ ವಿಚಾರಣೆ ವೇಳೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಲಕ್ಷದ್ವೀಪ ಆಡಳಿತ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನೋಟಿಸ್‌ ನೀಡಿದ್ದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಮಾರ್ಚ್ 28 ಕ್ಕೆ (ನಾಳೆಗೆ) ಮುಂದೂಡಿತ್ತು.

ಹಾಗೆಯೇ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾಗಿದ್ದು 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಅವರನ್ನೂ ಕೂಡ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕಾಂಗ್ರೆಸ್ ರಾಹುಲ್ ಅನರ್ಹತೆಯನ್ನು ರದ್ದುಪಡಿಸುವಂತೆ ಮನವಿ ಮಾಡುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 11:11 am, Wed, 29 March 23