ಹಿಂದೂಗಳ ಬಗ್ಗೆ ಅಸಭ್ಯ ಹೇಳಿಕೆ, ರಾಹುಲ್ ಗಾಂಧಿ ವಿರುದ್ಧ ದಿಗ್ವಿಜಯ ಸಿಂಗ್ ಸಹೋದರ ಲಕ್ಷ್ಮಣ್​ ವಾಗ್ದಾಳಿ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ಟೀಕಿಸಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸಿಂಗ್ ಅವರು ಎಕ್ಸ್ ಪೋಸ್ಟ್‌ನಲ್ಲಿ, ಸಂಸತ್ತಿನಲ್ಲಿ ಹಿಂದೂಗಳ ಕುರಿತು ಮಾಡಿದ ಕಾಮೆಂಟ್‌ಗಳು ಅಸಭ್ಯ ಮತ್ತು ಅನಗತ್ಯವಾಗಿದೆ. ಜನರು ಮತ್ತು ದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮಾತ್ರ ಪ್ರಸ್ತಾಪಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಹಿಂದೂಗಳ ಬಗ್ಗೆ ಅಸಭ್ಯ ಹೇಳಿಕೆ, ರಾಹುಲ್ ಗಾಂಧಿ ವಿರುದ್ಧ ದಿಗ್ವಿಜಯ ಸಿಂಗ್ ಸಹೋದರ ಲಕ್ಷ್ಮಣ್​ ವಾಗ್ದಾಳಿ
ಲಕ್ಷ್ಮಣ್​
Follow us
ನಯನಾ ರಾಜೀವ್
|

Updated on:Jul 02, 2024 | 2:10 PM

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಹಿಂದೂಗಳ ಬಗ್ಗೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್​(Lakshman Singh) ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ, ರಾಹುಲ್ ಗಾಂಧಿ ಅವರು ಆಡಳಿತ ಪಕ್ಷದ ನಾಯಕರು ಹಿಂದೂಗಳಲ್ಲ, ಏಕೆಂದರೆ ಅವರು ಹಿಂಸಾಚಾರ ಮತ್ತು ದ್ವೇಷದಲ್ಲೇ ಹಗಲಿರುಳು ತೊಡಗಿರುತ್ತಾರೆ ಎಂದು ಹೇಳಿ ಗದ್ದಲ ಎಬ್ಬಿಸಿದ್ದರು.

ಮಧ್ಯಪ್ರದೇಶದ ಕಾಂಗ್ರೆಸ್​ ನಾಯಕ ಲಕ್ಷ್ಮಣ್​ ಸಿಂಗ್, ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ಸಂಸತ್ತಿನಲ್ಲಿ ಹಿಂದೂಗಳ ಕುರಿತು ಮಾಡಿದ ಕಮೆಂಟ್​ಗಳು ಅಸಭ್ಯ ಹಾಗೂ ಅನಗತ್ಯವಾದದ್ದು, ಜನರು ಮತ್ತು ದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮಾತ್ರ ಪ್ರಸ್ತಾಪಿಸುವುದು ಸೂಕ್ತ ಎಂದು ಹೇಳಿದ್ದಾರೆ.

ಲಕ್ಷ್ಮಣ್ ಸಿಂಗ್ ಅವರು ರಾಜ್‌ಗಢ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿದ್ದಾರೆ. ತಮ್ಮನ್ನು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆಯ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿಯವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಿ, ಸದನದ ನೆಲದ ಮೇಲೆ ನಿಂತು, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಬಹಳ ಗಂಭೀರವಾದ ವಿಷಯ ಎಂದು ಹೇಳಿದರು. ನಾನು ವಿರೋಧ ಪಕ್ಷದ ನಾಯಕನನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದನ್ನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ನನಗೆ ಕಲಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಮತ್ತಷ್ಟು ಓದಿ: Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಲಕ್ಷ್ಮಣ್​ ಸಿಂಗ್ ಯಾರು? ಲಕ್ಷ್ಮಣ್ ಸಿಂಗ್ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಕಿರಿಯ ಸಹೋದರ. ಸಿಂಗ್ ಒಬ್ಬ ಅನುಭವಿ ರಾಜಕಾರಣಿಯಾಗಿದ್ದು, ಐದು ಅವಧಿಗೆ ಸಂಸದರಾಗಿ (MP) ಮತ್ತು ಮೂರು ಅವಧಿಗೆ ವಿಧಾನಸಭೆಯ ಸದಸ್ಯರಾಗಿ (MLA) ಸೇವೆ ಸಲ್ಲಿಸಿದ್ದಾರೆ.

ಅವರು 1987 ರಲ್ಲಿ ರಾಘೋಗಢ ಪುರಸಭೆಯಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ರಾಘೋಗಢ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಮತ್ತು ರಾಜ್‌ಗಢ್ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ, ನಾಲ್ಕು ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಒಮ್ಮೆ ಬಿಜೆಪಿಗೆ ಆಯ್ಕೆಯಾದರು.

ಮತ್ತಷ್ಟು ಓದಿ: ಪಕ್ಷ ಯಾವುದಿರಲಿ ಸಂಸದನಿಗೆ ದೇಶವೇ ಮೊದಲ ಜವಾಬ್ದಾರಿಯಾಗಿರಬೇಕು: ನರೇಂದ್ರ ಮೋದಿ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಹೇಳಿಕೆಗೆ ವಿರೋಧ ಭಾರತೀಯರ ವಿರುದ್ಧ ಜನಾಂಗೀಯ ಹೇಳಿಕೆಗಳಿಗಾಗಿ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರನ್ನು ಲಕ್ಷ್ಮಣ್ ಸಿಂಗ್ ಟೀಕಿಸಿದ್ದರು. ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದಿದ್ದರು.

ರಾಹುಲ್ ಗಾಂಧಿ ದೊಡ್ಡ ನಾಯಕನಲ್ಲ ಲಕ್ಷ್ಮಣ್ ಸಿಂಗ್ ಅವರು ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಪಕ್ಷದ ಕಾರ್ಯಕರ್ತ ಮತ್ತು ಸಂಸದರಾಗಿದ್ದಾರೆ ಮತ್ತು ಅವರನ್ನು ಹೆಚ್ಚು ಹೈಲೈಟ್ ಮಾಡಬಾರದು ಎಂದು ಹೇಳಿದ್ದರು.

ಲಕ್ಷ್ಮಣ್​ ಸಿಂಗ್ ಪೋಸ್ಟ್​

ರಾಮಮಂದಿರ ಪ್ರಾಣ ಪ್ರತಿಷ್ಠಾ ಆಹ್ವಾನ: ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿರುವ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸಿಂಗ್ ವಿರೋಧಿಸಿದ್ದು, ಈ ನಿರ್ಧಾರ ತಪ್ಪು ಎಂದು ಹೇಳಿದ್ದರು.

ಕೃಷಿ ಸಾಲ ಮನ್ನಾ ಸುಳ್ಳಿನ ಬಗ್ಗೆ ರಾಹುಲ್ ಗಾಂಧಿಯನ್ನು ದೂಷಿಸಿದ್ದರು:

ಸಿಂಗ್ 2019 ರ ಸೆಪ್ಟೆಂಬರ್‌ನಲ್ಲಿ ಸಾಲ ಮನ್ನಾ ಕುರಿತು ರಾಹುಲ್ ಗಾಂಧಿಯನ್ನು ಟೀಕಿಸಿದರು ಮತ್ತು ಮಧ್ಯಪ್ರದೇಶದ ರೈತರ ಕ್ಷಮೆಯಾಚಿಸಲು ರಾಹುಲ್ ಗಾಂಧಿಯನ್ನು ಕೇಳಿದರು. ರಾಜ್ಯದಲ್ಲಿ ರೈತರ ಸಾಲ ಮನ್ನಾ ಭರವಸೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ, ರೈತರ ಕ್ಷಮೆಯಾಚಿಸಿ ಸಾಲ ಮನ್ನಾ ಮಾಡಲು ಎಷ್ಟು ದಿನ ಬೇಕು ಎಂಬುದನ್ನು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು ಎಂದು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:07 pm, Tue, 2 July 24

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು