AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalu Prasad Yadav Health: ಏಮ್ಸ್​ ಆಸ್ಪತ್ರೆಗೆ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಲಾಲೂ ಪ್ರಸಾದ್ ಯಾದವ್ ಡಿಸ್ಚಾರ್ಜ್

ಲಾಲೂ ಪ್ರಸಾದ್ ಯಾದವ್ ಅವರನ್ನು ರಾತ್ರಿಯಿಡೀ ತುರ್ತು ವಿಭಾಗದಲ್ಲಿ ನಿಗಾ ಇರಿಸಲಾಗಿತ್ತು. ಅವರ ಆರೋಗ್ಯವನ್ನು ಪರಿಶೀಲನೆ ನಡೆಸಲಾಯಿತು. ಇಂದು ಬೆಳಗ್ಗೆ 3 ಗಂಟೆಗೆ ಡಿಸ್ಚಾರ್ಜ್ ಮಾಡಲಾಯಿತು

Lalu Prasad Yadav Health: ಏಮ್ಸ್​ ಆಸ್ಪತ್ರೆಗೆ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಲಾಲೂ ಪ್ರಸಾದ್ ಯಾದವ್ ಡಿಸ್ಚಾರ್ಜ್
ಲಾಲೂ ಪ್ರಸಾದ್ ಯಾದವ್
TV9 Web
| Edited By: |

Updated on: Mar 23, 2022 | 2:55 PM

Share

ನವದೆಹಲಿ: ಅನಾರೋಗ್ಯದಿಂದಾಗಿ ಮಂಗಳವಾರ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಇಂದು ಬೆಳಗಿನ ಜಾವ 3 ಗಂಟೆಗೆ ಡಿಸ್ಚಾರ್ಜ್ ಮಾಡಲಾಗಿದೆ. ಇದಕ್ಕೂ ಮೊದಲು ಅವರನ್ನು ತುರ್ತು ವಿಭಾಗದಲ್ಲಿ ರಾತ್ರಿಯಿಡೀ ನಿಗಾದಲ್ಲಿ ಇರಿಸಲಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಿಹಾರದ ಮಾಜಿ ಮುಖ್ಯಮಂತ್ರಿಯಾಗಿರುವ 73 ವರ್ಷದ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ (RIMS) ವೈದ್ಯಕೀಯ ಮಂಡಳಿಯಿಂದ ಲಾಲೂ ಪ್ರಸಾದ್ ಯಾದವ್ ಅವರನ್ನು ಮಂಗಳವಾರ ರಾತ್ರಿ 9 ಗಂಟೆಗೆ ದೆಹಲಿಯ ಏಮ್ಸ್‌ಗೆ ಕರೆತರಲಾಗಿತ್ತು.

“ಲಾಲೂ ಪ್ರಸಾದ್ ಯಾದವ್ ಅವರನ್ನು ರಾತ್ರಿಯಿಡೀ ತುರ್ತು ವಿಭಾಗದಲ್ಲಿ ನಿಗಾ ಇರಿಸಲಾಗಿತ್ತು. ಅವರ ಆರೋಗ್ಯವನ್ನು ಪರಿಶೀಲನೆ ನಡೆಸಲಾಯಿತು. ಬೆಳಗ್ಗೆ 3 ಗಂಟೆಗೆ ಡಿಸ್ಚಾರ್ಜ್ ಮಾಡಲಾಯಿತು” ಎಂದು ಮೂಲವೊಂದು ತಿಳಿಸಿದೆ.

ಮೇವು ಹಗರಣದಲ್ಲಿ ಡೊರಾಂಡಾ ಖಜಾನೆಯಿಂದ 139 ಕೋಟಿ ರೂ. ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಯಾಗಿದ್ದ ಲಾಲೂ ಪ್ರಸಾದ್ ಯಾದವ್‌ಗೆ ವಿಶೇಷ ಸಿಬಿಐ ನ್ಯಾಯಾಲಯವು ಫೆಬ್ರವರಿ 21ರಂದು 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತು.

ಫೆಬ್ರವರಿ 15ರಂದು ನ್ಯಾಯಾಲಯವು ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಿತು. 950 ಕೋಟಿ ರೂ. ಮೇವು ಹಗರಣ (ಐದು ಮೇವು ಹಗರಣಗಳ ಒಟ್ಟು ಹಗರಣ, ಲಾಲು ತಪ್ಪಿತಸ್ಥರೆಂದು ಸಾಬೀತಾಗಿದೆ) ಅವಿಭಜಿತ ಬಿಹಾರದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಸಾರ್ವಜನಿಕ ಹಣವನ್ನು ವಂಚನೆಯಿಂದ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ. ಲಾಲೂ ಪ್ರಸಾದ್ ಯಾದವ್ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಜನವರಿ 1996ರಲ್ಲಿ ಪಶುಸಂಗೋಪನಾ ಇಲಾಖೆಯಲ್ಲಿ ಚೈಬಾಸಾ ಉಪ ಆಯುಕ್ತ ಅಮಿತ್ ಖರೆ ನಡೆಸಿದ ದಾಳಿಯ ನಂತರ ಮೇವು ಹಗರಣ ಬೆಳಕಿಗೆ ಬಂದಿತು. ಜೂನ್ 1997ರಲ್ಲಿ ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನು ಮೊದಲ ಬಾರಿಗೆ ಮೇವು ಪ್ರಕರಣದಲ್ಲಿ ಆರೋಪಿ ಎಂದು ಘೋಷಿಸಲಾಯಿತು.

“ಲಾಲೂ ಪ್ರಸಾದ್ ಯಾದವ್ ಅವರ ಕ್ರಿಯೇಟಿನೈನ್ ಮಟ್ಟವು 4.6ಕ್ಕೆ ಏರಿತ್ತು, ಇದು ಮೊದಲು 3.5ರಷ್ಟಿತ್ತು. ಅವರ ರಕ್ತದ ಸಕ್ಕರೆ ಅಂಶ ಮತ್ತು ರಕ್ತದೊತ್ತಡದಲ್ಲಿ ಏರಿಳಿತವಾಗಿತ್ತು. ಏಳು ಸದಸ್ಯರ ತಂಡದ ಮುಖ್ಯಸ್ಥರಾದ ಡಾ. ವಿದ್ಯಾಪತಿ ಪ್ರಸಾದ್‌ಗೆ ಚಿಕಿತ್ಸೆ ನೀಡಲು ರಿಮ್ಸ್ ರಚಿಸಿರುವ ವೈದ್ಯರು ಮಂಗಳವಾರ ತಿಳಿಸಿದ್ದರು.

ಇದನ್ನೂ ಓದಿ: Lalu Prasad Yadav: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್​ ಆಸ್ಪತ್ರೆಗೆ ಶಿಫ್ಟ್

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್