ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕುಟುಂಬದ ಸದಸ್ಯರು ಆಸ್ಪತ್ರೆಗೆ ಹಾಜರಾಗಿದ್ದು, ಅವರ ಆರೈಕೆಯಲ್ಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಆರೋಗ್ಯ ಏರುಪೇರಾಗಿ ಆಸ್ಪತ್ರೆ ಸೇರಿದ್ದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಈಗ ಡಿಸ್ಚಾರ್ಜ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ಸಿಗದಿರುವ ಬಗ್ಗೆ ರಾಷ್ಟ್ರೀಯ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಪ್ರತಿಕ್ರಿಯಿಸುವವರೆಗೂ ಚೆನ್ನಾಗಿದ್ದರು, ನಂತರ ಆರೋಗ್ಯ ಕೆಟ್ಟು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಸದ್ಯ ಮಾಜಿ ಸಿಎಂ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕುಟುಂಬದ ಸದಸ್ಯರು ಆಸ್ಪತ್ರೆಗೆ ಹಾಜರಾಗಿದ್ದು, ಅವರ ಆರೈಕೆಯಲ್ಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
77 ವರ್ಷದ ಬಿಹಾರದ ಮಾಜಿ ಸಿಎಂ ಕಳೆದ ಕೆಲವು ವರ್ಷಗಳಲ್ಲಿ ಸಿಂಗಾಪುರದಲ್ಲಿ ಕಿಡ್ನಿ ಕಸಿ ಸೇರಿದಂತೆ ಹಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆದಿದ್ದರು. 2022ರಲ್ಲಿ ಲಾಲು ಅವರ ಶೇಕಡಾ 25 ರಷ್ಟು ಮೂತ್ರಪಿಂಡಗಳು ಮಾತ್ರ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರಿಂದ ಕಿಡ್ನಿ ಕಾಯಿಲೆ ಇರುವುದು ಪತ್ತೆಯಾಗಿತ್ತು.
ವೈದ್ಯರು ಕಸಿ ಮಾಡುವಂತೆ ಸಲಹೆ ನೀಡಿದ್ದು, ಸಿಂಗಾಪುರದಲ್ಲಿ ನೆಲೆಸಿರುವ ಅವರ ಪುತ್ರಿ ರಾಹಿನಿ ಆಚಾರ್ಯ ಅವರು ತಮ್ಮ ಒಂದು ಕಿಡ್ನಿಯನ್ನು ಅವರಿಗೆ ದಾನ ಮಾಡಿದ್ದಾರೆ. ಡಿಸೆಂಬರ್ 5, 2022 ರಂದು ಕಸಿ ಮಾಡಲಾಯಿತು, ನಂತರ ಅವರು ಚೇತರಿಸಿಕೊಂಡರು ಮತ್ತು ಭಾರತಕ್ಕೆ ಮರಳಿದರು.ಸದ್ಯ ಲಾಲು ಯಾದವ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ಓದಿ: ಹಾಲಿನ ಅಭಿಷೇಕದ ವೇಳೆ ಶಿವಲಿಂಗವನ್ನು ತಬ್ಬಿಕೊಂಡ ಲಾಲು ಪ್ರಸಾದ್ ಯಾದವ್ ಮಗ ತೇಜ್ ಪ್ರತಾಪ್
ಪ್ರಿನ್ಸ್ ಯಾದವ್ ಎಂಬವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರನ್ನು ಪ್ರಾರ್ಥಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮಾಜಿ ಸಿಎಂ ಆಸ್ಪತ್ರೆಯ ಬೆಡ್‌ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ