AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tej Pratap: ಹಿರಿಯ ಮಗನನ್ನು ಆರ್​​ಜೆಡಿ ಪಕ್ಷದಿಂದ ಉಚ್ಛಾಟಿಸಿದ ಲಾಲೂ ಪ್ರಸಾದ್ ಯಾದವ್; ಕುಟುಂಬದಿಂದಲೂ ಹೊರಕ್ಕೆ

RJD chief Lalu Prasad expels Tej Pratap Yadav from the party and family: ಮಹಿಳೆಯೊಬ್ಬಳೊಂದಿಗೆ 12 ವರ್ಷಗಳಿಂದ ಸಂಬಂಧದಲ್ಲಿದ್ದೇನೆ ಎಂದು ಫೇಸ್​​ಬುಕ್​​ನಲ್ಲಿ ಪೋಸ್ಟ್ ಹಾಕಿದ ಒಂದು ದಿನದ ಬಳಿಕ ತೇಜ್ ಪ್ರತಾಪ್ ಯಾದವ್ ಆರ್​​ಜೆಡಿ ಪಕ್ಷದಿಂದ ಉಚ್ಚಾಟಿತರಾಗಿದ್ದಾರೆ. ತಮ್ಮ ಹಿರಿಯ ಮಗನನ್ನು ಪಕ್ಷದಿಂದ 6 ವರ್ಷ ಕಾಲ ಉಚ್ಛಾಟಿಸಿರುವುದಾಗಿ ಮಾಜಿ ಬಿಹಾರ ಸಿಎಂ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ. ಕುಟುಂಬದಿಂದಲೂ ಆತನನ್ನು ಹೊರಹಾಕಿದ್ದಾಗಿ ತಿಳಿಸಿದ್ದು, ಕುಟುಂಬದ ಇತರ ಸದಸ್ಯರು ಬೆಂಬಲಿಸಿದ್ದಾರೆ.

Tej Pratap: ಹಿರಿಯ ಮಗನನ್ನು ಆರ್​​ಜೆಡಿ ಪಕ್ಷದಿಂದ ಉಚ್ಛಾಟಿಸಿದ ಲಾಲೂ ಪ್ರಸಾದ್ ಯಾದವ್; ಕುಟುಂಬದಿಂದಲೂ ಹೊರಕ್ಕೆ
ತೇಜ್ ಪ್ರತಾಪ್ ಯಾದವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 25, 2025 | 6:18 PM

Share

ಪಾಟ್ನಾ, ಮೇ 25: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ತಮ್ಮ ಹಿರಿಯ ಮಗ ಹಾಗೂ ಪಕ್ಷದ ಮುಖಂಡ ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಬೇಜವಾಬ್ದಾರಿಯುತ ನಡವಳಿಕೆ ಕಾರಣ ನೀಡಿ ಅವರು ತೇಜ್ ಪ್ರತಾಪ್ ಯಾದವ್ ಅವರನ್ನು ಆರು ವರ್ಷ ಕಾಲ ಪಕ್ಷದಿಂದ ಉಚ್ಛಾಟಿಸಿದ್ದಾರೆ. ಹಾಗೆಯೇ, ಕುಟುಂಬ ಮೌಲ್ಯಗಳಿಗೆ ಬೆಲೆ ಕೊಟ್ಟಿಲ್ಲವೆಂದು ಹೇಳಿ ಕುಟುಂಬದಿಂದಲೂ ಅವರನ್ನು ಹೊರಹಾಕಿದ್ದಾರೆ.

ಬಿಹಾರದ ಮಾಜಿ ಮಂತ್ರಿಯೂ ಆದ ತೇಜ್ ಪ್ರತಾಪ್ ಯಾದವ್ ಅವರ ಸೋಷಿಯಲ್ ಮೀಡಿಯಾದಲ್ಲಿ ನಿನ್ನೆ ಅಚ್ಚರಿಯ ಪೋಸ್ಟ್​​ವೊಂದು ಪ್ರಕಟವಾಗಿತ್ತು. ಅದರಲ್ಲಿ ತಾನು ಅನುಷ್ಕಾ ಯಾದವ್ ಎಂಬ ಯುವತಿಯೊಂದಿಗೆ 12 ವರ್ಷಗಳಿಂದ ಪ್ರೀತಿಯಲ್ಲಿದ್ದೇನೆ ಎಂದು ಬರೆದಿದ್ದರು. ತನ್ನ ಫೇಸ್​​ಬುಕ್ ಪೇಜ್ ಅನ್ನು ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ತೇಜ್ ಪ್ರತಾಪ್ ಯಾದವ್ ಸಮಜಾಯಿಷಿ ನೀಡಿದ್ದರು. ಅದಾದ ಒಂದು ದಿನದ ಬಳಿಕ ಲಾಲೂ ಪ್ರಸಾದ್ ಯಾದವ್ ತಮ್ಮ ಹಿರಿಯ ಮಗನ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ.

‘ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಕಡೆಗಣಿಸುವುದರಿಂದ ಸಾಮಾಜಿಕ ನ್ಯಾಯಕ್ಕಾಗಿನ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತದೆ. ಹಿರಿಯ ಮಗನ ಚಟುವಟಿಕೆ, ಸಾರ್ವಜನಿಕ ನಡವಳಿಕೆಯು ಬೇಜವಾಬ್ದಾರಿಯುತವಾಗಿದ್ದು, ನಮ್ಮ ಕುಟಂಬ ಮೌಲ್ಯಗಳು ಮತ್ತು ಸಂಸ್ಕಾರಕ್ಕೆ ಹೊಂದಿಕೆ ಆಗುವುದಿಲ್ಲ. ಹೀಗಾಗಿ, ಅವರನ್ನು ಪಕ್ಷದಿಂದ ಮತ್ತು ಕುಟುಂಬದಿಂದ ಹೊರಹಾಕುತ್ತಿದ್ದೇನೆ. ಇವತ್ತಿನಿಂದ ಅವರಿಗೆ ಪಕ್ಷದಲ್ಲಿ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರ ಇರುವುದಿಲ್ಲ. ಅವರನ್ನು 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ,’ ಎಂದು ಎಕ್ಸ್​​ನಲ್ಲಿ ಮಾಜಿ ಬಿಹಾರ ಸಿಎಂ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ನೀನ್ಯಾಕೆ ಸಾಯ್ಬಾರ್ದು ಎಂದು ಗಂಡ ಕೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

‘ಆತನ ಜೊತೆ ಯಾರಾದರೂ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರು ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಲಿ’ ಎಂದೂ ಲಾಲೂ ಯಾದವ್ ಹೇಳಿದ್ದಾರೆ.

ತೇಜ್ ಪ್ರತಾಪ್ ಯಾದವ್ ಡೈವೋರ್ಸ್ ಇನ್ನೂ ಪೂರ್ಣಗೊಂಡಿಲ್ಲ…

ತೇಜ್ ಪ್ರತಾಪ್ ಯಾದವ್ 2018ರಲ್ಲಿ ಮಾಜಿ ಬಿಹಾರ ಮುಖ್ಯಮಂತ್ರಿ ದರೋಗಾ ರಾಯ್ ಅವರ ಮೊಮ್ಮಗಳು, ಹಾಗೂ ಮಾಜಿ ಸಚಿವ ಚಂದ್ರಿಕಾರ ರಾಯ್ ಅವರ ಮಗಳೂ ಆದ ಐಶ್ವರ್ಯಾ ಅವರನ್ನು ಮದುವೆಯಾಗಿದ್ದರು. ಕೆಲವೇ ತಿಂಗಳಲ್ಲಿ ಐಶ್ವರ್ಯಾ ಗಂಡನ ಮನೆ ಬಿಟ್ಟು ಬಂದಿದ್ದರು. ತನ್ನ ಗಂಡ ಹಾಗೂ ಆತನ ಮನೆಯವರು ಸೇರಿಕೊಂಡು ಮನೆಯಿಂದ ಹೊರಹಾಕಿದರು ಎಂದು ಆಕೆ ಆರೋಪಿಸಿದ್ದರು. ಅಲ್ಲದೇ, ತೇಜ್ ಪ್ರತಾಪ್ ಯಾದವ್ ದಾರಿತಪ್ಪಿದ ವ್ಯಕ್ತಿಯಾಗಿದ್ದು, ಡ್ರಗ್ಸ್ ದಾಸರಾಗಿದ್ದಾರೆ, ಖಾಸಗಿಯಲ್ಲಿ ಮಹಿಳೆ ರೀತಿ ಬಟ್ಟೆ ಧರಿಸುವ ವಿಲಕ್ಷಣ ವ್ಯಕ್ತಿ ಎಂಬೆಲ್ಲಾ ಆರೋಪಗಳನ್ನು ಐಶ್ವರ್ಯಾ ಮಾಡಿದ್ದಾರೆ.

ಇವರ ವಿವಾಹ ವಿಚ್ಛೇದನ ಅರ್ಜಿ ಪಾಟ್ನಾದ ಕೌಟುಂಬಿಕ ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗದೇ ಬಾಕಿ ಉಳಿದಿದೆ. ಚಂದ್ರಿಕಾ ರಾಯ್ ಅವರು ತಮ್ಮ ಮಗಳಿಗೆ ನ್ಯಾಯ ಕೊಡಿಸುವ ಸಲುವಾಗಿ ಆರ್​​ಜೆಡಿ ಪಕ್ಷದಿಂದಲೂ ಹೊರಬಂದಿದ್ದರು.

ಇದನ್ನೂ ಓದಿ: ಭಾರತದ ಪುಟ್ಟ ಹಳ್ಳಿಯ ಬಾಲಕನ ಸಾಧನೆಗೆ ನಾಸಾ ಮೆಚ್ಚುಗೆ: ಈತ ಮಾಡಿದ ಸಾಧನೆ ಅಂತಿಂತದ್ದಲ್ಲ

ನಿನ್ನೆ, ತೇಜ್ ಪ್ರತಾಪ್ ಯಾದವ್ ತಮ್ಮ ಫೇಸ್ಬುಕ್​​ನಲ್ಲಿ ಯುವತಿಯೊಬ್ಬಳ ಫೋಟೋ ಹಾಕಿ, ಈಕೆಯನ್ನು ತಾನು ಪ್ರೀತಿಸುತ್ತಿದ್ದು 12 ವರ್ಷಗಳಿಂದ ಸಂಬಂಧದಲ್ಲಿರುವುದಾಗಿ ಬರೆದಿದ್ದರು.

ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಲಾಲೂ ಪ್ರಸಾದ್ ಯಾದವ್ ಕ್ರಮವನ್ನು ಕುಟುಂಬದ ಇತರ ಸದಸ್ಯರು ಬೆಂಬಲಿಸಿದ್ದಾರೆ. ಕಿರಿಯ ಸಹೋದರ ತೇಜಸ್ವಿ ಯಾದವ್ ಹಾಗೂ ಮಗಳು ರೋಹಿಣಿ ಆಚಾರ್ಯ ಅವರು ಅಪ್ಪನ ನಿರ್ಧಾರಕ್ಕೆ ಬೆಂಬಲ ಕೊಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Sun, 25 May 25

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ