AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ

ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2023 | 2:37 PM

Share

ಅಮರಾವತಿ, ಡಿ.9: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಅವರು ಕುಟುಂಬ ದೇವಸ್ಥಾನದಲ್ಲಿ ನಡೆಸಲಾದ ಸುಪ್ರಭಾತಂ ಸೇವೆಯಲ್ಲಿ ಭಾಗವಹಿಸಿದರು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರು ಪುತ್ರ ತೇಜಸ್ವಿ ಯಾದವ್ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾನು ಮತ್ತು ನನ್ನ ಕುಟುಂಬ, ನನ್ನ ತಾಯಿ, ತಂದೆ, ಸಹೋದರ, ನನ್ನ ಹೆಂಡತಿ ಮತ್ತು ನನ್ನ ಮಗಳು, ಕಾತ್ಯಾಯನಿಯೊಂದಿಗೆ ಭಗವಾನ್ ಬಾಲಾಜಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ. ನನ್ನ ಮಗಳ ಮುಂಡನ ಸಂಸ್ಕಾರವನ್ನು ಇಲ್ಲಿ ನಡೆಸಿದ್ದೇವೆ, ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇವೆ. ದೇಶವು ಪ್ರಗತಿಯಾಗಲಿ ಮತ್ತು ಎಲ್ಲರೂ ಅಭಿವೃದ್ಧಿ ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಸಿದ್ದೇವೆ ಎಂದು ತೇಜಸ್ವಿ ಯಾದವ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಭಾರತ ಮತ್ತು ಇಂಡಿಯಾ ನಡುವಿನ ವ್ಯತ್ಯಾಸ ವಿವರಿಸುವ ಲಾಲು ಪ್ರಸಾದ್ ಯಾದವ್ ಹಳೇ ವಿಡಿಯೊ ವೈರಲ್ 

ತೇಜಸ್ವಿ ಯಾದವ್ ದಂಪತಿಗಳ ಮದುವೆ ವಾರ್ಷಿಕೋತ್ಸವದ ಪ್ರಯುಕ್ತ ಈ ಭೇಟಿ ನೀಡಲಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ ಬಿಹಾರದಿಂದ ಹೊರಟು, ಶನಿವಾರ ಬೆಳಿಗ್ಗೆ ಬಾಲಾಜಿಯ ದರ್ಶನ ಮಾಡಲಾಗಿದೆ. ನಾವು ದೇವರಲ್ಲಿ ರಾಜ್ಯದ ಜನರಿಗೆ ಸುಖ, ಶಾಂತಿ, ಸಮೃದ್ಧಿ ಮತ್ತು ಕಲ್ಯಾಣ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್