Lalu Prasad Yadav: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್​ ಆಸ್ಪತ್ರೆಗೆ ಶಿಫ್ಟ್​

ಲಾಲೂ ಪ್ರಸಾದ್ ಯಾದವ್​ಗೆ ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದೆ. ಹೀಗಾಗಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್‌ಗೆ ಕಳುಹಿಸಲಾಗುತ್ತಿದೆ.

Lalu Prasad Yadav: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್​ ಆಸ್ಪತ್ರೆಗೆ ಶಿಫ್ಟ್​
ಲಾಲೂ ಪ್ರಸಾದ್ ಯಾದವ್
Edited By:

Updated on: Mar 22, 2022 | 7:54 PM

ರಾಂಚಿ: ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಇಂದು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ (ರಿಮ್ಸ್) ದೆಹಲಿಯ ಏಮ್ಸ್‌ಗೆ ಕರೆದೊಯ್ಯಲಾಗಿದೆ “ಲಾಲೂ ಪ್ರಸಾದ್ ಯಾದವ್​ಗೆ ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದೆ. ಹೀಗಾಗಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್‌ಗೆ ಕಳುಹಿಸಲಾಗುತ್ತಿದೆ” ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (RIMS) ನಿರ್ದೇಶಕ ಕಾಮೇಶ್ವರ ಪ್ರಸಾದ್ ಹೇಳಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿಯ ಆರ್​ಐಎಂಎಸ್​ನಿಂದ ದೆಹಲಿಯ ಏಮ್ಸ್​​ (AIIMS)ಗೆ ವರ್ಗಾಯಿಸಲಾಗುತ್ತಿದೆ. ಜಾರ್ಖಂಡ್ ಹೈಕೋರ್ಟ್ ಮಾರ್ಚ್ 11ರಂದು ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 1ರವರೆಗೆ ಮುಂದೂಡಲಾಗಿದೆ.

ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಮೇವು ಹಗರಣ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತ್ತು. ಫೆಬ್ರವರಿ 15ರಂದು ಮೇವು ಹಗರಣದ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಲಾಯಿತು. 950 ಕೋಟಿ ರೂ. ಮೇವು ಹಗರಣ (ಐದು ಮೇವು ಹಗರಣಗಳ ಒಟ್ಟು ಹಗರಣ, ಲಾಲು ತಪ್ಪಿತಸ್ಥರೆಂದು ಸಾಬೀತಾಗಿದೆ) ಅವಿಭಜಿತ ಬಿಹಾರದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಸಾರ್ವಜನಿಕ ಹಣವನ್ನು ವಂಚನೆಯಿಂದ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ.

ಜನವರಿ 1996ರಲ್ಲಿ ಪಶುಸಂಗೋಪನಾ ಇಲಾಖೆಯಲ್ಲಿ ಚೈಬಾಸಾ ಉಪ ಆಯುಕ್ತ ಅಮಿತ್ ಖರೆ ನಡೆಸಿದ ದಾಳಿಯ ನಂತರ ಮೇವು ಹಗರಣ ಬೆಳಕಿಗೆ ಬಂದಿತು. ಜೂನ್ 1997ರಲ್ಲಿ ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನು ಮೊದಲ ಬಾರಿಗೆ ಮೇವು ಪ್ರಕರಣದಲ್ಲಿ ಆರೋಪಿ ಎಂದು ಘೋಷಿಸಲಾಯಿತು.

ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

Fodder scam ಮೇವು ಹಗರಣ ಪ್ರಕರಣ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ

TV9 Web

TV9 Kannada

Read More
Loading...
Unable to load recommendations.
Follow Us