ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್​ಗೆ ಮುಂಬೈ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ

Lalu Prasad Yadav Health: ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ 76 ವರ್ಷವಾಗಿದೆ. ಹೃದ್ರೋಗದಿಂದ ಬಳಲುತ್ತಿರುವ ಅವರು ಇಂದು ಮುಂಬೈ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್​ಗೆ ಮುಂಬೈ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ
ಲಾಲು ಪ್ರಸಾದ್ ಯಾದವ್
Follow us
ಸುಷ್ಮಾ ಚಕ್ರೆ
|

Updated on: Sep 12, 2024 | 4:32 PM

ಮುಂಬೈ: ಆರ್​ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಹೃದ್ರೋಗದಿಂದ ಬಳಲುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಮುಂಬೈ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಪಿಟಿಐಗೆ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ 76 ವರ್ಷವಾಗಿದ್ದು, ಮುಂಬೈ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಹಲವು ವರ್ಷಗಳಿಂದ ಅವರು ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಡಿಂಪಲ್ ಯಾದವ್ ಮಾಜಿ ಸಹಾಯನ ವಿರುದ್ಧ ಬಿಜೆಪಿ ಆರೋಪ

ಕೆಲವು ದಿನಗಳಿಂದ ಮತ್ತೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಲಾಲು ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳುವಂತೆ ಹೃದ್ರೋಗ ತಜ್ಞರು ಲಾಲು ಪ್ರಸಾದ್ ಯಾದವ್​ಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದ್ಯರ ಸಲಹೆ ಮೇರೆಗೆ ಇಂದು ಲಾಲು ಪ್ರಸಾದ್ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಯಿತು.

ಇದನ್ನೂ ಓದಿ: Ayushman Bharat: ಮೋದಿ ಸರ್ಕಾರದ ಮಹತ್ವದ ನಿರ್ಧಾರ; 70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

ಲಾಲು ಪ್ರಸಾದ್ ಯಾದವ್ ಅನೇಕ ಗಂಭೀರ ಆರೋಗ್ಯ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅವರು ಈಗಾಗಲೇ ಸಿಂಗಾಪುರದಲ್ಲಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದಾರೆ. ಲಾಲು ಪ್ರಸಾದ್ ಅವರಿಗೆ ಅವರ ಪುತ್ರಿಯೇ ಕಿಡ್ನಿ ದಾನ ಮಾಡಿದ್ದರು. ಅವರ ಅನಾರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಚಿಕಿತ್ಸೆಗೆ ಅವಕಾಶ ನೀಡಿದ್ದು, ಅದರ ಆಧಾರದ ಮೇಲೆ ಅವರು ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ