Lalu Prasad Yadav: ಕಿಡ್ನಿ ಕಸಿಗೆ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್

ಲಾಲು ಪ್ರಸಾದ್ ಯಾದವ್ ಅವರಿಗೆ ಅವರ ಮಗಳು ರೋಹಿಣಿ ಆಚಾರ್ಯ ಒಂದು ಕಿಡ್ನಿ ನೀಡಲು ಮುಂದೆ ಬಂದಿದ್ದಾರೆ. ಹೀಗಾಗಿ, ಆಪರೇಷನ್​ಗಾಗಿ ಲಾಲು ಪ್ರಸಾದ್ ಯಾದವ್ ಸಿಂಗಾಪುರಕ್ಕೆ ತೆರಳಿದ್ದಾರೆ.

Lalu Prasad Yadav: ಕಿಡ್ನಿ ಕಸಿಗೆ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್
ಮಗಳು ರೋಹಿಣಿ ಜೊತೆ ಲಾಲೂ ಪ್ರಸಾದ್ ಯಾದವ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 26, 2022 | 2:36 PM

ಲಕ್ನೋ: ರಾಷ್ಟ್ರೀಯ ಜನತಾ ದಳದ (RJD) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ಮತ್ತು ಕುಟುಂಬದ ಇತರೆ ಸದಸ್ಯರೊಂದಿಗೆ ಕಿಡ್ನಿ ಕಸಿಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. 74 ವರ್ಷದ ಲಾಲು ಪ್ರಸಾದ್ ಯಾದವ್ ಕಳೆದ ತಿಂಗಳು ಸಿಂಗಾಪುರಕ್ಕೆ ತೆರಳಿ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡು ವಾಪಾಸ್ ಬಂದಿದ್ದರು. ಇದೀಗ ಲಾಲು ಪ್ರಸಾದ್ ಯಾದವ್ ಅವರಿಗೆ ಅವರ ಮಗಳು ರೋಹಿಣಿ ಆಚಾರ್ಯ (Rohini Acharya) ಒಂದು ಕಿಡ್ನಿ ನೀಡಲು ಮುಂದೆ ಬಂದಿದ್ದಾರೆ. ಹೀಗಾಗಿ, ಆಪರೇಷನ್​ಗಾಗಿ ಲಾಲು ಪ್ರಸಾದ್ ಯಾದವ್ ಸಿಂಗಾಪುರಕ್ಕೆ ತೆರಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಿಂಗಾಪುರದ ವೈದ್ಯರು ಸಲಹೆ ನೀಡಿದ್ದರು. ಇದಾದ ಬಳಿಕ ರೋಹಿಣಿ ತನ್ನ ಒಂದು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ನಿರ್ಧರಿಸಿದ್ದರು.

ಇದನ್ನೂ ಓದಿ: Breaking News: ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು ಪ್ರಸಾದ್ ಯಾದವ್ ಸೇರಿ 15 ಜನರ ವಿರುದ್ಧ ಸಿಬಿಐ ಚಾರ್ಜ್​ಶೀಟ್ ಸಲ್ಲಿಕೆ

ತನ್ನ ಜೀವ ಉಳಿಸಲು ರೋಹಿಣಿ ತನ್ನ ಕಿಡ್ನಿ ದಾನ ಮಾಡುವುದಕ್ಕೆ ಲಾಲು ಪ್ರಸಾದ್ ಯಾದವ್ ಆರಂಭದಲ್ಲಿ ಒಪ್ಪಿರಲಿಲ್ಲ. ಆದರೆ ಆಕೆಯ ಒತ್ತಡದ ನಂತರ ಅವರು ಆಪರೇಷನ್​ಗೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇದೀಗ ಸಿಂಗಾಪುರಕ್ಕೆ ತೆರಳಿರುವ ಲಾಲು ಪ್ರಸಾದ್ ಯಾದವ್ ಪ್ರಾಥಮಿಕ ತಪಾಸಣೆ ಮತ್ತು ಪರೀಕ್ಷೆಗಳ ನಂತರ ಡಿಸೆಂಬರ್ ಮೊದಲ ವಾರದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಆಪರೇಷನ್ ಯಶಸ್ವಿಯಾಗುತ್ತದೆ ಎಂಬ ಸಂಪೂರ್ಣ ನಂಬಿಕೆ ನಮಗಿದೆ. ಅವರ ಹಿತೈಷಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದಿದ್ದಾರೆ.

ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಲಾಲು ಪ್ರಸಾದ್ ಯಾದವ್, ಮೇವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದರು. ಬಳಿಕ ಚಿಕಿತ್ಸೆಗಾಗಿ ದೆಹಲಿ ಮತ್ತು ರಾಂಚಿಯಲ್ಲಿ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮಧುಮೇಹ, ರಕ್ತದೊತ್ತಡ ಮತ್ತು ಮೂತ್ರಪಿಂಡದ ಸಮಸ್ಯೆಗಳು ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಇದನ್ನೂ ಓದಿ: ಅಪ್ಪನ ಜೀವ ಉಳಿಸಲು ಕಿಡ್ನಿ ನೀಡಲಿರುವ ಲಾಲೂ ಪ್ರಸಾದ್ ಯಾದವ್ ಮಗಳು; ಈ ತಿಂಗಳಾಂತ್ಯದಲ್ಲಿ ಸಿಂಗಾಪುರದಲ್ಲಿ ಆಪರೇಷನ್

ಸಿಂಗಾಪುರದಲ್ಲಿ ನೆಲೆಸಿರುವ ಲಾಲು ಅವರ ಎರಡನೇ ಪುತ್ರಿ ರೋಹಿಣಿ ಅವರು ತಮ್ಮ ತಂದೆಯ ಮೂತ್ರಪಿಂಡದ ಕಾಯಿಲೆಯ ಬಗ್ಗೆ ತುಂಬಾ ಚಿಂತಿತರಾಗಿದ್ದರು. ಮೂತ್ರಪಿಂಡದ ಕಸಿಯ ಸಲಹೆ ನೀಡಿದ ವೈದ್ಯರ ತಂಡವನ್ನು ಭೇಟಿ ಮಾಡಲು ರೋಹಿಣಿ ಅವರೇ ಲಾಲೂ ಪ್ರಸಾದ್ ಯಾದವ್ ಅವರನ್ನು ಸಿಂಗಾಪುರಕ್ಕೆ ಒತ್ತಾಯದಿಂದ ಕರೆಸಿಕೊಂಡಿದ್ದರು.

ಕಿಡ್ನಿ ಸಮಸ್ಯೆಯಿಂದ ಕಳೆದ ಹಲವು ವರ್ಷಗಳಿಂದ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್ ಅವರಿಗೆ ಎಐಐಎಂಎಸ್‌ನ ವೈದ್ಯರು ಕಿಡ್ನಿ ಕಸಿ ಮಾಡುವಂತೆ ಸಲಹೆ ನೀಡಿರಲಿಲ್ಲ. ಆದರೆ ಸಿಂಗಾಪುರ ಭೇಟಿ ವೇಳೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡುವಂತೆ ಸಲಹೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Sat, 26 November 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ